27 C
ಬೆಂಗಳೂರು
August 26, 2026
kranthikidi.com
ತಾಜಾಸುದ್ದಿದೇಶ

ಪಿಎಂ ಕಿಸಾನ್ ಸಮ್ಮಾನ್ ನಿಧಿಯ 23ನೇ ಕಂತು ಇಂದು ಬಿಡುಗಡೆ; ಅರ್ಹ ರೈತರ ಖಾತೆಗೆ ಹಣ ಜಮೆ

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 23 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದು ಬಿಡುಗಡೆ ಮಾಡಲಿದ್ದಾರೆ. 9.44 ಕೋಟಿಗೂ ಹೆಚ್ಚು ಅರ್ಹ ರೈತರ ಖಾತೆಗೆ ತಲಾ ಎರಡು ಸಾವಿರ ರೂ.ಗಳಂತೆ ಒಟ್ಟು 18,880 ಕೋಟಿ ರೂ. ಹಣ ಜಮೆಯಾಗಲಿದೆ. ಪ್ರಧಾನಿ ಮೋದಿಯವರು ಶನಿವಾರ (ಇಂದು) ಮಧ್ಯಾಹ್ನ ಸುಮಾರು 3:45ಕ್ಕೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ಹಲವು ಅಭಿವೃದ್ಧಿ ಹಾಗೂ ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಇದೇ ವೇಳೆ ಪಿಎಂ-ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 23ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ ದೇಶದ ಒಟ್ಟು 9.44 ಕೋಟಿಗೂ ಹೆಚ್ಚು ರೈತರ ಖಾತೆಗೆ ಏಕಕಾಲದಲ್ಲೇ 18,880 ಕೋಟಿ ರೂ.ಗಳಿಗೂ ಅಧಿಕ ಹಣ ಜಮೆಯಾಗಲಿದೆ. ಇದರಲ್ಲಿ ಪಶ್ಚಿಮ ಬಂಗಾಳದ ಸುಮಾರು 50 ಲಕ್ಷ ರೈತರು ಫಲಾನುಭವಿಗಳಾಗಿದ್ದು, ಪ್ರತಿಯೊಬ್ಬರಿಗೂ ತಲಾ 2,000 ರೂಪಾಯಿ ಸಿಗಲಿದೆ. ಪಶ್ಚಿಮ ಬಂಗಾಳದ 45.35 ಲಕ್ಷಕ್ಕೂ ಹೆಚ್ಚು ರೈತರಿಗೆ ಇದರಿಂದ ಸುಮಾರು 907 ಕೋಟಿ ರೂಪಾಯಿ ತಲುಪಲಿದೆ. ಇಂದಿನ ಕಾರ್ಯಕ್ರಮಗಳ ನಂತರ ಪ್ರಧಾನಮಂತ್ರಿಯವರು ಬಂಗಾಳದ ಲೋಕಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ತಾರಕೇಶ್ವರದಲ್ಲಿ ನಡೆಯುವ ಈ ಸಮಾರಂಭದಲ್ಲಿ ಪಶ್ಚಿಮ ಬಂಗಾಳದ ರೈತರಿಗಾಗಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಡಿಜಿಟಲ್ ಕೃಷಿ ಮಿಷನ್ ಅಡಿಯಲ್ಲಿ ಅಗ್ರಿ ಸ್ಟ್ಯಾಕ್, ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಮತ್ತು ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆಗಳಿಗೆ ಚಾಲನೆ ನೀಡಲಾಗುವುದು. ತಾರಕೇಶ್ವರ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರೊಂದಿಗೆ ಐತಿಹಾಸಿಕ ಸಂಬಂಧವನ್ನು ಹೊಂದಿದ್ದು, ಬಂಗಾಳದ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ : ಫೈವ್‌ ಸ್ಟಾರ್‌ ಹೋಟೆಲ್‌ನಲ್ಲಿ ರೆಬಲ್‌ ಸಂಸದರು; ನಾಳೆಯೇ ಶಿಂಧೆ ಬಣ ಸೇರುವ ಸಾಧ್ಯತೆ..!

Related posts

ಬೀಳಗಿಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ; ಶ್ರೀಗಂಧದ ಕಟ್ಟಿಗೆ ಜಪ್ತಿ..!

Kalpana Editor

ಎಸ್‍ಐಆರ್ ವಿಷಯದಲ್ಲಿ ಅಧಿಕಾರಿಗಳ ದುರ್ಬಳಕೆಗೆ, ಕೋರ್ ಕಮಿಟಿ ಸಭೆ ಆಕ್ಷೇಪ – ಬಿ.ವೈ.ವಿಜಯೇಂದ್ರ

Kalpana Editor

ಮನೆಯಲ್ಲೇ ಸುಲಭವಾಗಿ ಮಾಡಿ ಮುಂಬೈ ಸ್ಪೆಷಲ್ ಮಸಾಲ ಸ್ಯಾಂಡ್‌ವಿಚ್

kknewskannada1987@gmail.com