July 12, 2026
kranthikidi.com
ತಾಜಾಸುದ್ದಿರಾಜ್ಯ

ಪರಪ್ಪನ ಅಗ್ರಹಾರದಿಂದ 24 ಜೀವಾವಧಿ ಖೈದಿಗಳಿಗೆ ಅವಧಿ ಪೂರ್ವ ಬಿಡುಗಡೆ ಭಾಗ್ಯ..!

ಬೆಂಗಳೂರು : ತಿಳಿದೋ ತಿಳಿಯದೆಯೋ ತಪ್ಪು ಮಾಡಿ ಕಂಬಿ ಎಣಿಸುತ್ತಿದ್ದ ಖೈದಿಗಳ ಮನಪರಿವರ್ತನೆಯನ್ನು ಪರಿಗಣಿಸಿ, ಸನ್ನಡತೆ ಆಧಾರದ ಮೇಲೆ ಅವರನ್ನು ಅವಧಿ ಪೂರ್ವವಾಗಿ ಬಿಡುಗಡೆಗೊಳಿಸಲು ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ರಾಜ್ಯದ ವಿವಿಧ ಜೈಲುಗಳಲ್ಲಿದ್ದ ಒಟ್ಟು 24 ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಖೈದಿಗಳು ಇಂದು ಜೈಲಿನಿಂದ ಮುಕ್ತರಾಗಿದ್ದಾರೆ.

ಜೈಲಿನ ಕತ್ತಲ ಕೋಣೆಯಿಂದ ಹೊರಬಂದು ಸ್ವತಂತ್ರ ಹಕ್ಕಿಗಳಾಗಿ ಹೊಸ ಜೀವನ ಆರಂಭಿಸಲು ಖೈದಿಗಳ ಅಧಿಕೃತ ಬಿಡುಗಡೆ ಕಾರ್ಯಕ್ರಮವು ಇಂದು ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಯಶಸ್ವಿಯಾಗಿ ನಡೆಯಿತು. ಈ ವಿಶೇಷ ಬಿಡುಗಡೆ ಕಾರ್ಯಕ್ರಮದಲ್ಲಿ ರಾಜ್ಯದ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಖೈದಿಗಳಿಗೆ ಬಿಡುಗಡೆಯ ಆದೇಶ ಪತ್ರಗಳನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಕಾರಾಗೃಹ ಇಲಾಖೆಯ ಎಡಿಜಿಪಿ ಅಲೋಕ್ ಕುಮಾರ್, ಜೈಲು ಮುಖ್ಯ ಸೂಪರಿಂಟೆಂಡೆಂಟ್ ಅಂಶು ಕುಮಾರ್ ಸೇರಿದಂತೆ ಕಾರಾಗೃಹ ಇಲಾಖೆಯ ಉನ್ನತ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಒಮ್ಮೆ ಅಪರಾಧ ಕೃತ್ಯ ಎಸಗಿ ಜೈಲು ಸೇರಿದ್ದ ಈ ಖೈದಿಗಳು, ಶಿಕ್ಷೆಯ ಅವಧಿಯಲ್ಲಿ ಜೈಲಿನ ನಿಯಮಾವಳಿಗಳನ್ನು ಪಾಲಿಸಿ, ಉತ್ತಮ ನಡವಳಿಕೆಯನ್ನು ರೂಢಿಸಿಕೊಂಡಿದ್ದರು. ಇವರಲ್ಲಿ ಉಂಟಾದ ಸಕಾರಾತ್ಮಕ ಮನಪರಿವರ್ತನೆ ಮತ್ತು ಇವರು ಒಳ್ಳೆಯ ಮನುಷ್ಯರಾಗಿ ಬದಲಾದ ಹಿನ್ನೆಲೆಯನ್ನು ಕಾನೂನುಬದ್ಧವಾಗಿ ಪರಿಶೀಲಿಸಿ, ಇಲಾಖೆಯ ಶಿಫಾರಸಿನ ಮೇರೆಗೆ ರಾಜ್ಯಪಾಲರು ಇವರ ಅವಧಿ ಪೂರ್ವ ಬಿಡುಗಡೆಗೆ ಅನುಮೋದನೆ ನೀಡಿದ್ದಾರೆ. ಜೈಲಿನಿಂದ ಹೊರಬಂದ ಖೈದಿಗಳು ಹಾಗೂ ಅವರ ಕುಟುಂಬಸ್ಥರಲ್ಲಿ ಹೊಸ ಭರವಸೆಯ ಮೂಡಿದ್ದು, ಸಮಾಜದಲ್ಲಿ ಮುಖ್ಯವಾಹಿನಿಗೆ ಮರಳಲು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ : SIR ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅಪಘಾತ – ಇಬ್ಬರು ಮಹಿಳಾ ಸಿಬ್ಬಂದಿಗೆ ಗಾಯ

Related posts

ಲೂಟಿ ವಿವಾದದ ಬೆನ್ನಲ್ಲೇ; ಅಂಜನಾದ್ರಿಯಲ್ಲೂ ಹುಂಡಿ ಎಣಿಕೆ ಕಾರ್ಯದಲ್ಲಿ ವಿಳಂಬ..!

Kalpana Editor

ಕೆಆರ್‌ಎಸ್‌ನಲ್ಲಿ ನೀರಿನ ಕೊರತೆ, ಆದರೂ ಒಂದೇ ಒಂದು ಸಭೆ ನಡೆಸಿಲ್ಲ – ಪ್ರತಿಪಕ್ಷ ನಾಯಕ ಆರ್‌.ಅಶೋಕ

Kalpana Editor

ಭಾರತೀಯ ಸಿಬ್ಬಂದಿ ಇದ್ದ, ಹಡಗಿನ ಮೇಲೆ ಅಮೆರಿಕ ದಾಳಿ; ಭಾರತ ತೀವ್ರ ಖಂಡನೆ..!

Kalpana Editor