21.6 C
ಬೆಂಗಳೂರು
August 7, 2026
kranthikidi.com
ತಾಜಾಸುದ್ದಿರಾಜ್ಯ

ಬೆಂಗಳೂರಿನಲ್ಲಿ ಐದು ದಿನಗಳಲ್ಲಿ 4000 ಟನ್ ಕಟ್ಟಡ ನಿರ್ಮಾಣ ತ್ಯಾಜ್ಯ ತೆರವು..!

ಬೆಂಗಳೂರು : ಬೆಂಗಳೂರು ಉತ್ತರ ನಗರ ಪಾಲಿಕೆ ಮತ್ತು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಜಂಟಿಯಾಗಿ ನಡೆಸುತ್ತಿರುವ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನದಡಿ ಕಳೆದ ಐದು ದಿನಗಳಲ್ಲಿ ಸುಮಾರು 4,000 ಟನ್ ಕಟ್ಟಡ ನಿರ್ಮಾಣ ಮತ್ತು ತೆರವು ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ.

ಈ ಪೈಕಿ ಬೆಂಗಳೂರು ಉತ್ತರ ನಗರ ಪಾಲಿಕೆ 2,500 ಟನ್ ಹಾಗೂ ಬೆಂಗಳೂರು ದಕ್ಷಿಣ ನಗರ ಪಾಲಿಕೆ 1,500 ಟನ್ ತ್ಯಾಜ್ಯವನ್ನು ತೆರವುಗೊಳಿಸಿವೆ. ನಗರದ ವಿವಿಧ ಭಾಗಗಳಿಂದ ಸಂಗ್ರಹಿಸಿದ ನಿರ್ಮಾಣ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು 18 ಟಿಪ್ಪರ್‌ಗಳು ಹಾಗೂ 4 ಲೋಡರ್‌ಗಳನ್ನು ಬಳಸಲಾಗುತ್ತಿದೆ. ಸಂಗ್ರಹಿಸಲಾದ ತ್ಯಾಜ್ಯವನ್ನು ಮಾರೆನಹಳ್ಳಿ ವಿಲೇವಾರಿ ಕೇಂದ್ರಕ್ಕೆ ಸಾಗಿಸಲಾಗುತ್ತಿದೆ.

ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಮಾರೆನಹಳ್ಳಿ ವಿಲೇವಾರಿ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ತ್ಯಾಜ್ಯ ನಿರ್ವಹಣೆ, ವಾಹನಗಳ ಸಂಚಾರ, ವಿಲೇವಾರಿ ಪ್ರಕ್ರಿಯೆ ಹಾಗೂ ಇತರೆ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಅಲ್ಲಿನ ಭದ್ರತಾ ಸಿಬ್ಬಂದಿಗೆ ಸೂಕ್ತ ವಸತಿ ಹಾಗೂ ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಶೀಘ್ರದಲ್ಲಿ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರವನ್ನು ನಿರ್ಮಾಣ ತ್ಯಾಜ್ಯ ಮುಕ್ತಗೊಳಿಸುವ ಗುರಿಯೊಂದಿಗೆ ಈ ಕಾರ್ಯಾಚರಣೆಯನ್ನು ಇನ್ನಷ್ಟು ಬಲಪಡಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ. ಸಾರ್ವಜನಿಕರು ರಸ್ತೆ ಬದಿ, ಚರಂಡಿ, ಖಾಲಿ ನಿವೇಶನ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಾಣ ತ್ಯಾಜ್ಯವನ್ನು ಎಸೆಯದೆ, ಪಾಲಿಕೆ ಸೂಚಿಸಿರುವ ವ್ಯವಸ್ಥೆಯ ಮೂಲಕವೇ ವಿಲೇವಾರಿ ಮಾಡುವಂತೆ ಮನವಿ ಮಾಡಿದ್ದಾರೆ.

ಇದೇ ವೇಳೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆ ಮಾಹಿತಿ ಪ್ರಕಾರ, ಕ್ಲಿಯರ್ ಇಟ್ ಮೊಬೈಲ್ ಅಪ್ಲಿಕೇಶನ್ ಮೂಲಕ 637 ದೂರುಗಳು ದಾಖಲಾಗಿವೆ. ಈ ಪೈಕಿ 75 ಸ್ಥಳಗಳಿಂದ ಸುಮಾರು 2,174 ಟನ್ ತ್ಯಾಜ್ಯವನ್ನು ತೆರವುಗೊಳಿಸಲಾಗಿದ್ದು, ತೂಕ ಪರಿಶೀಲನೆಯ ಬಳಿಕ ಒಟ್ಟು 1,476 ಟನ್ ತ್ಯಾಜ್ಯ ವಿಲೇವಾರಿಯಾಗಿರುವುದಾಗಿ ಪಾಲಿಕೆ ತಿಳಿಸಿದೆ. ಇದನ್ನೂ ಓದಿ : ಕೊಪ್ಪಳ ಉಸ್ತುವಾರಿ ಸ್ಥಾನಕ್ಕೆ ರಾಯರೆಡ್ಡಿ, ಶಿವರಾಜ ತಂಗಡಗಿ ಪೈಪೋಟಿ..!

Related posts

ರಾಮ ಮಂದಿರ ದೇಣಿಗೆ ಅಕ್ರಮ; ಸಿಎಂ ಯೋಗಿ ಯಾರನ್ನೂ ಬಿಡಲ್ಲ – ಸಿ.ಟಿ.ರವಿ

Kalpana Editor

178 ತಾಲೂಕಲ್ಲಿ ಮಳೆ ಕೊರತೆ: ವಿಬಿಜಿ ರಾಮ್ ಜಿ ಉದ್ಯೋಗ ನೀಡಲು ಈಶ್ವರ ಖಂಡ್ರೆ ಸೂಚನೆ..!

Kalpana Editor

ಜಿಹಾದಿ ಸಂಚು ಬಯಲು: ರಾಮಮಂದಿರ ಸ್ಫೋಟಿಸಲು ಸ್ಕೆಚ್, ಶಸ್ತ್ರಾಸ್ತ್ರ ಹಿಡಿದು ಫೋಟೋಶೂಟ್‌..!

Kalpana Editor