August 27, 2026
kranthikidi.com
ತಾಜಾಸುದ್ದಿರಾಜ್ಯ

ಪಿಯು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ; ಸಚಿವ ಮಧು ಬಂಗಾರಪ್ಪ ಪ್ರಮುಖ ಘೋಷಣೆ..!

ಶಿವಮೊಗ್ಗ : ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಮೊದಲ ಮತ್ತು 2ನೇ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಶಾಲಾ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್ ವಿತರಣೆ ಹಾಗೂ 800 ಕೆಪಿಎಸ್ ಶಾಲೆಗಳ ಸ್ಥಾಪನೆ ಕುರಿತು ಹಲವು ಮುಖ್ಯ ನಿರ್ಧಾರಗಳನ್ನು ಹಂಚಿಕೊಂಡರು.

ರಾಜ್ಯದ ಬಹುತೇಕ ಶಾಲೆಗಳಿಗೆ ಪಠ್ಯಪುಸ್ತಕಗಳ ಪೂರೈಕೆ ಪೂರ್ಣಗೊಂಡಿದೆ. ಪ್ರವೇಶಾತಿ ಹೆಚ್ಚು-ಕಡಿಮೆಯಾದ ಕಡೆಗಳಲ್ಲಿ ತಕ್ಷಣವೇ ಪಠ್ಯಪುಸ್ತಕ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ 1ನೇ ಮತ್ತು 2ನೇ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಸ್ಥಳೀಯವಾಗಿ ಕಳಪೆ ದರ್ಜೆಯ ಶೂಗಳನ್ನು ನೀಡಲಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಸಚಿವ ಸಂಪುಟದ ಒಪ್ಪಿಗೆಯೊಂದಿಗೆ ರಾಜ್ಯಮಟ್ಟದಲ್ಲೇ ಟೆಂಡರ್ ಕರೆಯಲಾಗಿದೆ. ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಅಳತೆಯಲ್ಲಿ ವ್ಯತ್ಯಾಸವಿದ್ದರೆ ತಕ್ಷಣವೇ ಬದಲಾಯಿಸಿಕೊಡಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.

ಶಾಲಾ ಸೌಲಭ್ಯಗಳಲ್ಲಿ ಕಳಪೆತನ ಅಥವಾ ಮೋಸ ಎಸಗುವ ಟೆಂಡರ್‌ದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. 100% ಉಚಿತ ವಿದ್ಯುತ್, ಮಧ್ಯಾಹ್ನದ ಊಟ, ಹಾಲು, ಮೊಟ್ಟೆ, ಶೂ ಹಾಗೂ ಪಠ್ಯಪುಸ್ತಕ ತಲುಪಿಸಲು ಇಲಾಖೆ ಬದ್ಧವಾಗಿದೆ. 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಕುರಿತು ಜೂನ್ 1ರಂದು ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಿಸುವುದಾಗಿ ತಿಳಿಸಿದ್ದರು. ಅಲೋಕೇಷನ್ ಮುಂದಿನ ವರ್ಷವಾದರೂ ಈ ವರ್ಷವೇ ಯೋಜನೆಗೆ ಚಾಲನೆ ನೀಡುವುದಾಗಿ ಭರವಸೆ ನೀಡಿದ್ದರು.

ಅಷ್ಟರಲ್ಲೇ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಿದ್ದು, ಮುಂದಿನ ಹಂತದಲ್ಲಿ ಈ ಯೋಜನೆಯ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತಂದು ಚರ್ಚಿಸಲು ನಿರ್ಧರಿಸಲಾಗಿದೆ. ಯೋಜನೆಗೆ ಸಂಬಂಧಿಸಿದ ಪ್ಲಾನ್‌ಗೆ ಈಗಾಗಲೇ ಅನುಮೋದನೆ ದೊರೆತಿದ್ದು, ಬಜೆಟ್ ಹೊಂದಾಣಿಕೆ ಆಧರಿಸಿ ಮುಂದಿನ ಹಂತದಲ್ಲಿ ನೇರವಾಗಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಲು ಸಿದ್ಧತೆ ನಡೆಸಲಾಗಿದೆ. ಇದನ್ನೂ ಓದಿ : 72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ – ಸಿಎಂ ಡಿಕೆಶಿ

Related posts

ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯ ಪ್ರತಿಯೊಬ್ಬ ಕನ್ನಡಿಗನಿಗೆ ಅರ್ಪಣೆ – ಸಿದ್ದರಾಮಯ್ಯ

Kalpana Editor

ಚಿತ್ರರಂಗ ಉದ್ದಾರ ಆಗಲ್ಲ: ‘ಕರಾವಳಿ’ ವಿವಾದಕ್ಕೆ ರಾಜ್ ಶೆಟ್ಟಿ ಪ್ರತಿಕ್ರಿಯೆ..!

Kalpana Editor

ಡಿಸಿಎಂ ಆಗಿ ಪರಮೇಶ್ವರ್‌ ಮತ್ತು 13 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕಾರ..!

Kalpana Editor