28.4 C
ಬೆಂಗಳೂರು
October 5, 2026
kranthikidi.com
ತಾಜಾಸುದ್ದಿರಾಜ್ಯ

CJI ಸೂರ್ಯಕಾಂತ್ ಟೀಕೆ ಬಳಿಕ BCI ಯೂಟರ್ನ್; ವಿದ್ಯಾರ್ಥಿಗಳ ದಾಖಲಾತಿ ನಿರ್ಬಂಧ ವಾಪಸ್..!

ನವದೆಹಲಿ : ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಟೀಕೆಯ ಬೆನ್ನಲ್ಲೇ ಬಾರ್ ಕೌನ್ಸಿಲ್ ಆಫ್ ಇಂಡಿಯಾ ತನ್ನ ಹಿಂದಿನ ಆದೇಶವನ್ನು ಹಿಂಪಡೆದಿದೆ. ಜೊತೆಗೆ BCI ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರು ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ್ದಾರೆ.

ಹೈದರಾಬಾದ್‌ನ NALSAR ಕಾನೂನು ವಿಶ್ವವಿದ್ಯಾಲಯದಿಂದ 2026ರಲ್ಲಿ ಪದವಿ ಪಡೆಯುವ ವಿದ್ಯಾರ್ಥಿಗಳನ್ನು ಮುಂದಿನ ಆದೇಶದವರೆಗೆ ವಕೀಲರಾಗಿ ನೋಂದಾಯಿಸಬಾರದು ಎಂದು BCI ಈ ಹಿಂದೆ ನಿರ್ದೇಶಿಸಿತ್ತು. ಈ ಆದೇಶದ ಬಗ್ಗೆ CJI ಸೂರ್ಯಕಾಂತ್ ಅಸಮಾಧಾನ ವ್ಯಕ್ತಪಡಿಸಿದ್ದರು.

ವಿದ್ಯಾರ್ಥಿಗಳಿಗೆ ಕಾನೂನುಬದ್ಧವಾಗಿ ಪ್ರತಿಭಟಿಸುವ ಹಕ್ಕಿದೆ. ಈ ವಿಚಾರದಲ್ಲಿ BCI ಮಧ್ಯಪ್ರವೇಶ ಮಾಡಬಾರದಿತ್ತು ಎಂದು ಸಿಜೆಐ ಹೇಳಿದ್ದರು. ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ಸಂಭಾಷಣೆ. ಅನಗತ್ಯವಾಗಿ ಸುತ್ತೋಲೆ ಹೊರಡಿಸಲು ಅವರು ಯಾರು ಎಂದು ಸೂರ್ಯಕಾಂತ್ ಪ್ರಶ್ನಿಸಿದ್ದರು. ವಿದ್ಯಾರ್ಥಿ ಜೀವನದಲ್ಲಿ ತಾವೂ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾಗಿ ಹೇಳಿದ ಸಿಜೆಐ, ವಿದ್ಯಾರ್ಥಿಗಳು ಕಾನೂನುಬದ್ಧವಾಗಿ ತಮ್ಮ ಧ್ವನಿ ಎತ್ತುತ್ತಿದ್ದರೆ ಅದಕ್ಕೆ ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದರು.

ಸಿಜೆಐ ಅವರ ಅಸಮಾಧಾನದ ಬಳಿಕ BCI ತನ್ನ ಹಿಂದಿನ ನಿರ್ಧಾರವನ್ನು ಮರುಪರಿಶೀಲಿಸಿದೆ. 2026ರಲ್ಲಿ NALSAR ವಿಶ್ವವಿದ್ಯಾಲಯದಿಂದ ಪದವಿ ಪಡೆಯುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ಆಯ್ಕೆಯ ರಾಜ್ಯ ಬಾರ್ ಕೌನ್ಸಿಲ್‌ನಲ್ಲಿ ದಾಖಲಾತಿ ಮಾಡಿಕೊಳ್ಳಲು ಅರ್ಹರು ಎಂದು ಹೊಸ ಸಂವಹನದಲ್ಲಿ ತಿಳಿಸಿದೆ.

ಈ ನಿರ್ಧಾರದಿಂದ NALSARನ 2026ರ ಪದವೀಧರರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಇನ್ನು ನಡೆಯುತ್ತಿರುವ ವಿಚಾರಣೆ ಪೂರ್ಣಗೊಳ್ಳುವವರೆಗೆ ಕಾಯಬೇಕಾಗಿಲ್ಲ. ವಿದ್ಯಾರ್ಥಿಗಳು ತಮ್ಮ ಆಯ್ಕೆಯ ರಾಜ್ಯ ಬಾರ್ ಕೌನ್ಸಿಲ್‌ನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭಿಸಿ, ಕಾನೂನು ವೃತ್ತಿಗೆ ಪ್ರವೇಶಿಸಲು ಮುಂದುವರಿಯಬಹುದು. ಇದನ್ನೂ ಓದಿ : ಅರಣ್ಯ ಸಿಬ್ಬಂದಿ ನಾಪತ್ತೆಯಾಗಿದ್ದಾರೆ, ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ ಪರಿಹಾರ; ಶಾಸಕ ಮಂಜುನಾಥ್

Related posts

ಅತ್ಯಂತ ಎತ್ತರ ಅಪಾರ್ಟ್ಮೆಂಟ್ ಕಟ್ಟಡ ತೆರವಿಗೆ ಜಿಬಿಎ ತೀರ್ಮಾನ..!

Kalpana Editor

ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ ಸ್ವೀಕಾರ..!

Kalpana Editor

SIR ಅವಧಿ ವಿಸ್ತರಣೆ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ – ಹೈಕೋರ್ಟ್‌

Kalpana Editor