August 25, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ..!

ಬೆಂಗಳೂರು : ‘ನೈಸ್ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತದೆಯೋ ಹಾಗೆ ನಾವು ನಡೆದುಕೊಳ್ಳುತ್ತೇವೆ’ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದರು.

ಈ ವೇಳೆ ಮಾಜಿ‌‌ ಸಿಎಂ‌ ಕುಮಾರಸ್ವಾಮಿ ಅವರು ನೈಸ್ ಯೋಜನೆಗೆ ಸಂಬಂಧಿಸಿದಂತೆ ಬರೆದ ಪತ್ರದ ಬಗ್ಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಪತ್ರ ಬರೆದಿರುವುದು ನಿಜ.‌ ಪತ್ರ ಇನ್ನು ಓದಿಲ್ಲ. ಓದಿ, ವಿಚಾರ ತಿಳಿದು ಕಾನೂನಿನ ಚೌಕಟ್ಟಿನಲ್ಲಿ ಮಾಡಬಹುದಾದ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದರು.

ಪತ್ರ ಬರೆದ ವಿಚಾರವಾಗಿ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಹೆಚ್‌.ಡಿ ಕುಮಾರಸ್ವಾಮಿಯವರು, ಬೆಂಗಳೂರು – BMICP ಯೋಜನೆಯಲ್ಲಿ ನಡೆದ ಅಕ್ರಮಗಳ ಕುರಿತು ನಾನು ಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದಿದ್ದೇನೆ. NICE ಕಾನೂನುಗಳನ್ನು ಉಲ್ಲಂಘಿಸಿದೆ ಎಂಬುದನ್ನು ನಾನು ಪತ್ರದಲ್ಲಿ ವಿವರಿಸಿದ್ದೇನೆ.

ಭೂಸ್ವಾಧೀನ ನಡೆದು 23 ವರ್ಷಗಳು ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ಸಿಗದ ಕಾರಣ, ಅವರಲ್ಲಿ ಅನೇಕರು ಸಂಕಷ್ಟದಲ್ಲಿದ್ದಾರೆ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ : ವಂದೇ ಮಾತರಂಗೆ ಅಪಮಾನ ಆರೋಪ; ಸೋನಿಯಾ ಗಾಂಧಿ ವಿರುದ್ಧ ದೂರು..!

Related posts

ಹೊಳೆನರಸೀಪುರದಲ್ಲಿ ಇಂದು ಚೆನ್ನಮ್ಮ ಅಂತ್ಯಕ್ರಿಯೆ – ಬೆಟ್ಟದ ರಂಗನಾಥಸ್ವಾಮಿ ತಪ್ಪಲಿನಲ್ಲಿ ವಿಧಿವಿಧಾನ ಪ್ರಕಾರ..!

Kalpana Editor

ಇವತ್ತು ರಾತ್ರಿಯೇ ಸಚಿವ ಸಂಪುಟ ವಿಸ್ತರಣೆ ಫೈನಲ್‌ ಆಗಬಹುದು – ಸಿದ್ದರಾಮಯ್ಯ

Kalpana Editor

ಮಾಜಿ ಸಚಿವ ನಾಗೇಂದ್ರ ಅಕ್ರಮಗಳ ಬಗ್ಗೆ ಚಾರ್ಜ್​ಶೀಟ್ ಸಲ್ಲಿಸಿದ ಸಿಬಿಐ

Kalpana Editor