August 25, 2026
kranthikidi.com
ಕ್ರೈಂತಾಜಾಸುದ್ದಿದೇಶ

ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ – ಚಾಕು ಇರಿದು ಯುವಕನ ಹತ್ಯೆ..!

ಹೈದರಾಬಾದ್ : ಸಾಕು ನಾಯಿ ಆಟೋ ಬಳಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಉಂಡೇಟಿ ಶ್ರೀನಾಥ್ (23) ಎಂದು ಗುರುತಿಸಲಾಗಿದೆ.

ಶ್ರೀನಾಥ್ ಡೆಕೊರೇಷನ್ ಸಂಬಂಧಿತ ಕೆಲಸ ಮಾಡುತ್ತಿದ್ದ. ಆಗಸ್ಟ್ 13ರಂದು ರಾತ್ರಿ 10:30ರ ವೇಳೆಗೆ ಶ್ರೀನಾಥ್ ತನ್ನ ಸ್ನೇಹಿತ ವೀರೇಶ್ ಜೊತೆ ಆಟೋದಲ್ಲಿ ಕುಳಿತಿದ್ದ. ಇದೇ ವೇಳೆ ಸ್ಥಳೀಯ ನಿವಾಸಿ ವೆಮುಲ ಮಧು (28) ತನ್ನ ಸಾಕು ನಾಯಿಯನ್ನು ವಾಕಿಂಗ್‌ಗೆ ಕರೆದುಕೊಂಡು ಬಂದಿದ್ದ.

ಈ ವೇಳೆ ನಾಯಿ ಶ್ರೀನಾಥ್ ಮತ್ತು ವೀರೇಶ್ ಕುಳಿತಿದ್ದ ಆಟೋ ಸಮೀಪ ಮೂತ್ರ ವಿಸರ್ಜನೆ ಮಾಡಿದ್ದಲ್ಲದೆ, ಅವರತ್ತ ಬೊಗಳಿದೆ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದ ಶ್ರೀನಾಥ್, ಮಧು ಜೊತೆ ಮಾತಿನ ಚಕಮಕಿಗೆ ಇಳಿದಿದ್ದಾನೆ. ನಂತರ ಜಗಳ ಮತ್ತಷ್ಟು ವಿಕೋಪಕ್ಕೆ ತಿರುಗಿದ್ದು, ಶ್ರೀನಾಥ್ ಮತ್ತು ವೀರೇಶ್ ಮಧುವಿನ ಮನೆ ಕಡೆಗೆ ತೆರಳಿದ್ದಾರೆ.
ಅಲ್ಲಿ ಜಗಳ ವಿಕೋಪಕ್ಕೆ ತಿರುಗಿ ಇಬ್ಬರ ನಡುವೆ ದೊಣ್ಣೆಗಳಿಂದ ಹೊಡೆದಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಲಾಟೆ ವೇಳೆ ಮಧು ಮನೆಯೊಳಗೆ ತೆರಳಿ ತರಕಾರಿ ಕತ್ತರಿಸಲು ಬಳಸುವ ಚಾಕು ತಂದು ಶ್ರೀನಾಥ್‌ಗೆ ಹಲವು ಬಾರಿ ಇರಿದಿದ್ದಾನೆ. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ಶ್ರೀನಾಥ್ ತೀವ್ರ ರಕ್ತಸ್ರಾವಕ್ಕೊಳಗಾಗಿ ಮನೆಯ ಸಮೀಪದ ಚರಂಡಿ ಬಳಿ ಕುಸಿದು ಬಿದ್ದಿದ್ದಾನೆ. ಬಳಿಕ ಮಧು ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಕೂಡಲೇ ಶ್ರೀನಾಥ್‌ನನ್ನು ಕುಟುಂಬಸ್ಥರು ಹಾಗೂ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ವೈದ್ಯರು ಶ್ರೀನಾಥ್‌ನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಘಟನಾ ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಧುವನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ : NH 66 ಚಿತ್ರದ ನಟ ಪ್ರಮೋದ್ ಶೆಟ್ಟಿ ಫಸ್ಟ್ ಲುಕ್ ರಿಲೀಸ್..!

Related posts

ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆಗೆ ಬಹಿಷ್ಕಾರ; ಕಾಂಗ್ರೆಸ್‌ನ ಸರ್ವಾಧಿಕಾರದ ವಿರುದ್ಧ ಪ್ರತಿಭಟನೆ – ಆರ್‌.ಅಶೋಕ

kknewskannada1987@gmail.com

ಎಸ್​ಐಆರ್​​ – ಮನೆ ಮನೆಗೆ ಭೇಟಿ ಕೊಡದೆ, ಫಾರಂ ಇಶ್ಯೂ; ಇದು ಸರಿಯಾದ ಪ್ರಕ್ರಿಯೆ ಅಲ್ಲ..!

Kalpana Editor

ಜಮೀರ್‌ ಬಿಜೆಪಿಗೆ ಸಹಾಯ ಮಾಡಲು ಹೀಗೆ ಮಾಡಿದ್ದಾರೆ; ಆಡಿಯೋ ಬಗ್ಗೆ ಎಸ್‌.ಎಸ್‌ ಮಲ್ಲಿಕಾರ್ಜುನ್‌ ಕಿಡಿ..!

Kalpana Editor