ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡ ಹಿಡಕಲ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಿಲ್ಲೆಯ ರೈತರಲ್ಲಿ ಸಂತಸ ಮೂಡಿಸಿದೆ. 51 ಟಿಎಂಸಿ ಸಾಮರ್ಥ್ಯದ ಹಿಡಕಲ್ ಜಲಾಶಯಕ್ಕೆ 8,523 ಕ್ಯೂಸೆಕ್ ನೀರು ಒಳಹರಿವು ಇದ್ದು, 4,655 ಕ್ಯೂಸೆಕ್ ನೀರು ಹೊರಹರಿವಿದೆ. ನೀರಾವರಿ ಯೋಚಜನೆಗಳ ಕಾಲುವೆಗಳ ಮೂಲಕ ನೀರನ್ನು ಹೊರಹರಿಸಲಾಗುತ್ತಿದೆ.
ಜಲಾಶಯದ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆ ಇಂದು ಮಧ್ಯಾಹ್ನ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಹಿಡಕಲ್ ಜಲಾಶಯ ಭರ್ತಿಯಾಗಿರುವುದು ಬೆಳಗಾವಿ ಮಾತ್ರವಲ್ಲದೆ ಬಾಗಲಕೋಟೆ ಜಿಲ್ಲೆಯ ರೈತರಿಗೂ ನೆಮ್ಮದಿ ತಂದಿದೆ. ಜಲಾಶಯದ ನೀರು ನೀರಾವರಿ ಯೋಜನೆಗಳಿಗೆ ಪ್ರಮುಖ ಆಧಾರವಾಗಿರುವುದರಿಂದ, ಜಲಾಶಯ ಭರ್ತಿಯಾಗಿರುವುದು ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಇದನ್ನೂ ಓದಿ : ಉಕ್ರೇನ್‌ನಲ್ಲಿರುವ ಭಾರತೀಯ ಬಿಲಿಯನೇರ್ ಕಾರ್ಖಾನೆ ಮೇಲೆ ರಷ್ಯಾ ದಾಳಿ..!
