21.2 C
ಬೆಂಗಳೂರು
October 11, 2026
kranthikidi.com
ತಾಜಾಸುದ್ದಿರಾಜ್ಯ

ಬಿಜೆಪಿ ಅನಿರ್ದಿಷ್ಟಾವಧಿ ಪ್ರತಿಭಟನೆ; ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ..!

ಕೋಲಾರ : ಸಚಿವ ನಾಗೇಂದ್ರ ರಾಜೀನಾಮೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೋಲಾರದಲ್ಲಿ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೋಲಾರ ಹೊರ ವಲಯದ ಟಮಕ ಬಳಿ ಇರುವ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವ ಬಿಜೆಪಿ ಮುಖಂಡರು, ವಾಲ್ಮೀಕಿ ಹಗರಣದಲ್ಲಿ ಭಾಗಿಯಾಗಿದ್ದ, ಸಚಿವ ನಾಗೇಂದ್ರ ರಾಜೀನಾಮೆ ನೀಡುವಂತೆ ಒತ್ತಾಯ ಮಾಡಿದರು.

ಸಿಎಂ ಕೂಡಲೆ ನಾಗೇಂದ್ರ ರಾಜೀನಾಮೆ ಪಡೆಯಬೇಕು, ಇಲ್ಲವಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು. ಅಲ್ಲದೇ ಬಾವುಟ ಹಾರಿಸಲು ಬಿಡುವಿಲ್ಲದ ದೇಶದ್ರೋಹಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಕ್ರಮ ಕೈಗೊಳ್ಳಬೇಕು, ವಂದೇ ಮಾತರಂ ಗೀತೆಗೆ ವಿರೋಧ ವ್ಯಕ್ತಪಡಿಸಿದ ಸೋನಿಯಾ ಗಾಂಧಿ ವಿರುದ್ಧವೂ ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್ ಅಧಿನಾಯಕಿಯಾಗಿ ವಂದೇ ಮಾತರಂ ಗೀತೆಯನ್ನ ವಿರೋಧಿಸುವ ಮೂಲಕ ದೇಶದ್ರೋಹ ಬಗೆಯುವ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನ ಕೂಗಿದರು. ಬಿಜೆಪಿ ಜಿಲ್ಲಾಧ್ಯಕ್ಷ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಜಿ ಶಾಸಕ ಮಂಜುನಾಥ್ ಗೌಡ ಸೇರಿದಂತೆ ಬಿಜೆಪಿ ಮುಖಂಡರು ಭಾಗಿಯಾಗಿ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್, ಹಗರಣ ಕುರಿತು ಅಂದಿನ ಸಿಎಂ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಅಂದರೆ 187 ಕೋಟಿಯಲ್ಲ, ಬದಲಾಗಿ 87 ಕೋಟಿ ಅಷ್ಟೆ ಎಂದು ಒಪ್ಪಿಕೊಂಡಿದ್ದಾರೆ. ಒಂದು ಸಾರಿ ಕದ್ರೆ ಕಳ್ಳನೇ, ಇಂತಹ ಹಗರಣ ಮಾಡಿರುವ ಶಾಸಕನಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ : ರಾಮಾಯಣ ರಿಲೀಸ್ ದಿನವೇ ಕನ್ನಡ ಸಿನಿಮಾ ಘೋಷಿಸಿದ ಕರವೇ ನಾರಾಯಣಗೌಡ

Related posts

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು: ರಾಜ್ಯಪಾಲರಿಂದ ಆದೇಶ..!

Kalpana Editor

ವಾಹನ ಸವಾರರಿಗೆ ಮತ್ತೊಂದು ಜೀವಭಯ ಎದರು; ಯಶವಂತಪುರ-ತುಮಕೂರು ರಸ್ತೆಯ ಮೇಲ್ಸೇತುವೆ ಶಿಥಿಲಾವಸ್ಥೆ..!

Kalpana Editor

ಹಿಂದಿಯನ್ನು ರಾಜ ಭಾಷೆ ಎಂದು ಕರೆದ ಡಿಸಿಎಂ ಪವನ್ ಕಲ್ಯಾಣ್

Kalpana Editor