21.6 C
ಬೆಂಗಳೂರು
September 22, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯ ಪ್ರತಿಯೊಬ್ಬ ಕನ್ನಡಿಗನಿಗೆ ಅರ್ಪಣೆ – ಸಿದ್ದರಾಮಯ್ಯ

ಬೆಂಗಳೂರು : ಪದತ್ಯಾಗದ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ 3 ವರ್ಷದ ಸಾಧನೆಯನ್ನು ಮೆಲುಕು ಹಾಕಿದ್ದಾರೆ. ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದ ಹಿನ್ನೆಲೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದಿದ್ದಾರೆ.

ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಪೌಷ್ಠಿಕ ಆಹಾರದ ಭದ್ರತೆ ನೀಡುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಆಧಾರವಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಆಹಾರಧಾನ್ಯ ವಿತರಿಸಲು ಈವರೆಗೆ 18,897 ಕೋಟಿ ರೂ. ವ್ಯಯಿಸಲಾಗಿದ್ದು, 4.26 ಕೋಟಿ ಪಡಿತರದಾರರು ಮೂರು ಹೊತ್ತು ನೆಮ್ಮದಿಯಿಂದ ಊಟ ಮಾಡುತ್ತಿದ್ದಾರೆ ಎಂದು ನುಡಿದಿದ್ದಾರೆ.

Related posts

ಜಿಹಾದಿ ಸಂಚು ಬಯಲು: ರಾಮಮಂದಿರ ಸ್ಫೋಟಿಸಲು ಸ್ಕೆಚ್, ಶಸ್ತ್ರಾಸ್ತ್ರ ಹಿಡಿದು ಫೋಟೋಶೂಟ್‌..!

Kalpana Editor

ಗೃಹಲಕ್ಷ್ಮಿ ಯೋಜನೆ ಹಗರಣ ಆರೋಪ; ಸಿಬಿಐ ತನಿಖೆಗೆ ಸಿಟಿ ರವಿ ಪಟ್ಟು..!

Kalpana Editor

ಹೈಕಮಾಂಡ್‌ಗೆ ಸಿದ್ದರಾಮಯ್ಯ ಚೆಕ್‌ಮೇಟ್ – ಸಿಎಂ ಒಪ್ಪಿಸಲು ಜಾರ್ಜ್‌ಗೆ ರಾಹುಲ್‌ ಟಾಸ್ಕ್‌..!

Kalpana Editor