20.9 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಕಾಯಿಲೆಯಿಂದ ಬಳಲುತ್ತಿದ್ದ, ಮಾಜಿ ಸಚಿವ ವೆಂಕಟರಮಣಪ್ಪ ನಿಧನ..!

ತುಮಕೂರು : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ವೆಂಕಟರಮಣಪ್ಪ (80) ಇಂದು (ಶುಕ್ರವಾರ) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಪುತ್ರ ಶಾಸಕ ಹೆಚ್‌.ವಿ ವೆಂಕಟೇಶ್‌, ಕುಮಾರಸ್ವಾಮಿ, ಪುತ್ರಿ ಪದ್ಮಾವತಿ ಅವರನ್ನ ಅಗಲಿದ್ದಾರೆ ಎಂದು ತಿಳಿಸಿದ್ದಾರೆ. ಅನಾರೋಗ್ಯಕ್ಕೀಡಾಗಿದ್ದ ವೆಂಕಟರಮಣಪ್ಪ ಅವರನ್ನು ಬೆಂಗಳೂರಿನ ಪೋರ್ಟೀಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗಿನ ಜಾವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ವೆಂಕಟರಮಣಪ್ಪ ಅವರು 2008 ರ ಅವಧಿಯಲ್ಲಿ ರೇಷ್ಮೆ ಮತ್ತು ಸಣ್ಣ ಕೈಗಾರಿಕಾ ಸಚಿವರಾಗಿ, 2018 ರಲ್ಲಿ ಕಾರ್ಮಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಒಟ್ಟು ನಾಲ್ಕು ಬಾರಿ ಶಾಸಕರಾಗಿ ಚುನಾಯಿತರಾಗಿದ್ದರು. ಪಟ್ಟಟ್ಟಣದ ಗುರುಭವನದಲ್ಲಿ ಇಂದು ಮಧ್ಯಾಹ್ನ ಮೃತರ ಪಾರ್ಥೀವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related posts

ನನ್ನ ಮಗಳಿಗೆ ಜೀವದಾನ ಸಿಕ್ಕಿದೆ – ಪ್ರಧಾನಿಗೆ ಧನ್ಯವಾದ ತಿಳಿಸಿದ ಬಾಲಕಿ ತಾಯಿ

Kalpana Editor

ಭಾರತೀಯರು ಜೀವ ಕಳೆದುಕೊಂಡಿದ್ದಾರೆ; ಟ್ರಂಪ್ ಸಮ್ಮುಖದಲ್ಲಿ ನಾವಿಕರ ಸುರಕ್ಷತೆ ಬಗ್ಗೆ ದನಿ ಎತ್ತಿದ ಮೋದಿ

Kalpana Editor

ಜಿಬಿಎ ಎಲೆಕ್ಷನ್;‌ ರಾಜ್ಯ ಸರ್ಕಾರಕ್ಕೆ ಮತ್ತೆ ಸಮಯಾವಕಾಶ ನೀಡಿದ ಸುಪ್ರೀಂ

Kalpana Editor