kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು; ಡಿಕೆಶಿ ಪಟ್ಟಾಭಿಷೇಕಕ್ಕೆ ಟೈಂ ಫಿಕ್ಸ್‌..!

ಬೆಂಗಳೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ, ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಇಂದು (ಮೇ 29) ಅಂಗೀಕರಿಸಿದ್ದು, ಈ ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ.

ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಹೊಸ ಸರ್ಕಾರ ರಚನೆಯಾಗುವವರೆಗೆ ಇನ್ನೂ 2-3 ದಿನಗಳ ಕಾಲ ಸಿದ್ದರಾಮಯ್ಯ ಅವರು ಹಂಗಾಮಿ ಸಿಎಂ ಆಗಿ ಮುಂದುವರಿಯಲಿದ್ದಾರೆ. ರಾಜ್ಯಪಾಲರು ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದ್ದರು.

ರಾಜೀನಾಮೆ ಪತ್ರವನ್ನ ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಬೇಕಿತ್ತು. ಗುರುವಾರ (ಮೇ 28) ರಾತ್ರಿ ಇಂದೋರ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ, ರಾಜ್ಯಪಾಲರು ಇಂದು ಬೆಳಗ್ಗೆಯೇ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಹೀಗಾಗಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಜರೂರಾಗಿ ಸಾಗಿದೆ.

ರಾಜ್ಯಪಾಲರು ರಾಜೀನಾಮೆ ಅಂಗೀಕಾರ ಮಾಡಿರುವುದರಿಂದ ಶನಿವಾರ (ಮೇ 30) ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಗಳಿದ್ದು, ಸಿಎಲ್‌ಪಿ ನಾಯಕರಾಗಿ ಡಿಕೆಶಿ ಆಯ್ಕೆಯಾಗುವುದು ಖಚಿತವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸೋಮವಾರ ಸಂಜೆ ಗೋದೂಳಿ ಮುಹೂರ್ತದಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಂದಿನ ಸೋಮವಾರ ಸಂಜೆ ಲೋಕಭವನದಲ್ಲಿ ಅದ್ಧೂರಿ ಪದಗ್ರಹಣಕ್ಕೆ ಭರದ ಸಿದ್ಧತೆ ನಡೆಯಲಿದೆ.

Related posts

ರಾಜ್ಯದ ನೂತನ ಡಿಸಿಎಂ ಆಗಿ ಜಿ. ಪರಮೇಶ್ವರ್‌ ಪ್ರಮಾಣವಚನ ಸ್ವೀಕಾರ..!

Kalpana Editor

ಹಠಾತ್ ಬಿರುಗಾಳಿ ಸಹಿತ ಮಳೆ; ಏರ್‌ಪೋರ್ಟ್‌ನಲ್ಲಿ ಏರ್‌ಇಂಡಿಯಾ ವಿಮಾನಗಳು ಜಖಂ

Kalpana Editor

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ; ವಿಧಾನ ಪರಿಷತ್‌ನ ಚುನಾವಣೆಯ ಮತದಾನ ಬಿರುಸಿನಿಂದ ಆರಂಭ..!

Kalpana Editor