28.9 C
ಬೆಂಗಳೂರು
June 10, 2026
kranthikidi.com
ತಾಜಾಸುದ್ದಿದೇಶರಾಜ್ಯ

ಇನ್ಮುಂದೆ ನೀಟ್ ಪರೀಕ್ಷೆಗೆ, ಭಾರತೀಯ ಸೇನೆಯ ನೆರವು..!

ನವದೆಹಲಿ : ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿ ಮುಜುಗರಕ್ಕೆ ಒಳಗಾಗಿದ್ದ, ಕೇಂದ್ರ ಸರ್ಕಾರ ಜೂ.21ರಂದು ನಡೆಯಲಿರುವ ನೀಟ್ ಮರು ಪರೀಕ್ಷೆಗೆ ಭಾರತೀಯ ಸೇನೆಯ ನೆರವು ಪಡೆಯುವ ಬಗ್ಗೆ ಚಿಂತನೆ ನಡೆಸಿದ್ದು, ಈ ಮೂಲಕ ದೋಷ ರಹಿತವಾಗಿ ನಡೆಸುವ ಉದ್ದೇಶವನ್ನು ಹೊಂದಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಉನ್ನತ ಮಟ್ಟದ ಸಭೆಯಲ್ಲಿ ಭಾರತೀಯ ಸೇನೆಯ ನೆರವು ಪಡೆಯುವ ಬಗ್ಗೆ ಚರ್ಚಿಸಿದ್ದಾರೆ. ಮರುಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಭಾರತೀಯ ವಾಯುಪಡೆಯ ವಿಮಾನಗಳನ್ನು ಬಳಸಿ ದೇಶಾದ್ಯಂತ ಸಾಗಿಸಲು ಸಾಧ್ಯವೇ ಎಂದು ಚಿಂತನೆ ನಡೆಸಿದ್ದಾರೆ. ಈ ಸಭೆಯಲ್ಲಿ ಈವರೆಗೆ ಯಾವುದೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಈ ಬಗ್ಗೆ ಪ್ರಧಾನಿ ಮೋದಿಯವರಿಗೆ ಮಾಹಿತಿ ನೀಡಿ, ಬಳಿಕ ಅವರು ಒಪ್ಪಿಗೆ ಸೂಚಿಸಿದರೆ ವಾಯುಪಡೆ ವಿಮಾನಗಳ ಮೂಲಕ ಪ್ರಶ್ನೆಪತ್ರಿಕೆ ಸಾಗಿಸಲಾಗುವುದು ಎಂದು ತಿಳಿದುಬಂದಿದೆ.

ಇನ್ನೂ ನಡೆಯಲಿರುವ ಮರುಪರೀಕ್ಷೆ ಬಗ್ಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ಮರುಪರೀಕ್ಷೆಯ ತಯಾರಿಯ ಪ್ರತಿಯೊಂದು ವಿವರದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ದೋಷರಹಿತವಾಗಿ ನಡೆಸುವ ಉದ್ದೇಶದಿಂದ ಪ್ರಧಾನಿ ಕಚೇರಿ ನಿಗಾ ವಹಿಸಿದೆ. ಪ್ರಶ್ನೆಪತ್ರಿಕೆ ರಚನೆ, ಮುದ್ರಣ, ಸಾಗಣೆ, ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವವರೆಗಿನ ಎಲ್ಲಾ ಪ್ರಕ್ರಿಯೆಯನ್ನು ಪಿಎಂಒ ಅಧಿಕಾರಿಗಳು ನೇರವಾಗಿ ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಮೇ 3ರಂದು ಪರೀಕ್ಷೆ ನಡೆದ ಬಳಿಕ ಮೇ 7ರಂದು ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ದೂರು ಬಂದಿತ್ತು. ಪರೀಕ್ಷೆಗೂ ಮುನ್ನ ಕೆಲವೆಡೆ ನೀಡಲಾಗಿದ್ದ ಗೆಸ್ ಪೇಪರ್‌ನಲ್ಲಿ ಪರೀಕ್ಷೆಯಲ್ಲಿ ನೀಡಲಾಗಿದ್ದ ಹೆಚ್ಚಿನ ಪ್ರಶ್ನೆಗಳು ಬಂದಿದ್ದವು ಎಂದು ಆರೋಪಿಸಲಾಗಿತ್ತು. ಕೂಡಲೇ ಉನ್ನತ ಶಿಕ್ಷಣ ಸಚಿವಾಲಯ ಈ ಸಂಬಂಧ ವಿಚಾರಣೆ ಆರಂಭಿಸಿ, ತನಿಖೆ ಹಸ್ತಾಂತರಿಸಿ ಬೇರೆ ರಾಜ್ಯಗಳನ್ನು ಸಂಪರ್ಕಿಸಿತ್ತು. ಮೇ 12ರಂದು ಗೆಸ್ ಪೇಪರ್ ಹೆಸರಲ್ಲಿ ಮೂಲ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಖಚಿತವಾಗಿದೆ. ಬಳಿಕ ಮೇ 13ರಂದು ನೀಟ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.

Related posts

2ನೇ ಬಾರಿಗೆ ದರ ಏರಿಕೆ ಬಿಸಿ – ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ..!

Kalpana Editor

ಹಳೆ ಬೇರು, ಹೊಸ ಚಿಗುರು ಫಾರ್ಮುಲಾ; ಯುವ ನಾಯಕರಿಗೆ ಮಂತ್ರಿಗಿರಿ ಪಟ್ಟಾ..?!

Kalpana Editor

ಮಾಜಿ ಪ್ರಧಾನಿಯನ್ನ ರಾಜ್ಯ ಸಭೆಗೆ ಕಳುಹಿಸೋಕೆ ಬಿಜೆಪಿಯವರು ಒಪ್ಪಿಲ್ಲ; ರಣದೀಪ್ ಸಿಂಗ್ ಸುರ್ಜೇವಾಲ

Kalpana Editor