28.9 C
ಬೆಂಗಳೂರು
June 10, 2026
kranthikidi.com
ತಾಜಾಸುದ್ದಿಸಿನಿಮಾ

ರವಿಚಂದ್ರನ್ ವಿರುದ್ಧ ರೇಪ್ ಆರೋಪ ಮಾಡಿದ್ದ ನಟಿ ಕಣ್ಣೀರು – 34 ವರ್ಷಗಳ ಬಳಿಕ ಕ್ಷಮೆಯಾಚನೆ..!

ಕನ್ನಡ ಚಿತ್ರರಂಗದ ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧ 34 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆಂದು ಆರೋಪ ಮಾಡಿದ್ದ `ಹಳ್ಳಿಮೇಷ್ಟು’ ನಟಿ ಬಿಂದಿಯಾ, ಹಳೆಯ ಘಟನೆ ನೆನೆದು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಕನ್ನಡದ ನಟ, ನಿರ್ದೇಶಕ ರಘುರಾಮ್ ಅವರ ಯೂಟ್ಯೂಬ್ ಚಾನೆಲ್‌ನ ನೂರೊಂದು ನೆನಪು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರವಿಚಂದ್ರನ್ ಅವರಿಗೆ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.

1992ರಲ್ಲಿ ಬಿಡುಗಡೆಯಾದ ಹಳ್ಳಿಮೇಷ್ಟು’ ಸಿನಿಮಾ ಆ ಕಾಲದಲ್ಲಿ ಭಾರೀ ಹಿಟ್ ಆಗಿತ್ತು. ತಮಿಳಿನಮುಂದಾನೈ ಮುಡಿಚು’ ಚಿತ್ರದ ರೀಮೇಕ್ ಆಗಿದ್ದ ಈ ಸಿನಿಮಾ ಸ್ಯಾಂಡಲ್‌ವುಡ್‌ನಲ್ಲಿ ಸೂಪರ್ ಹಿಟ್ ಆಗಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಇದೇ ಸಿನಿಮಾದ ಮೂಲಕ ನಟಿ ಬಿಂದಿಯಾ ಕೂಡ ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದರು. ಆದರೆ ಈ ಸಮಯದಲ್ಲಿ ನಡೆದ ಒಂದು ಘಟನೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.

ಅಂದು ಮ್ಯಾಗಜೀನ್‌ವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ, ರವಿಚಂದ್ರನ್ ನನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ಬಿಂದಿಯಾ ಹೇಳಿಕೆ ನೀಡಿದ್ದರು ಎಂಬ ಸುದ್ದಿ ಪ್ರಕಟವಾಗಿತ್ತು. ಈ ಹೇಳಿಕೆ ಆ ಸಮಯದಲ್ಲಿ ಚಿತ್ರರಂಗದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧ ಬಂದಿದ್ದ ಈ ಆರೋಪ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಇದೀಗ ಮಾತನಾಡಿರುವ ನಟಿ ಬಿಂದಿಯಾ, ನಾನು ಹೇಳಿದ್ದೇ ಬೇರೆ, ಆದರೆ ಮ್ಯಾಗಜೀನ್‌ನಲ್ಲಿ ಬಂದಿದ್ದೇ ಬೇರೆ. ಆ ವಿಷಯದಿಂದ ರವಿ ಸರ್ ಬಗ್ಗೆ ತಪ್ಪು ಅಭಿಪ್ರಾಯ ಮೂಡಿತ್ತು. ಅವರು ನಿಜಕ್ಕೂ ಯಾವುದೇ ತಪ್ಪು ಮಾಡಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅಲ್ಲದೇ, ರವಿಚಂದ್ರನ್ ಸರ್ ನನಗೆ ದೊಡ್ಡ ಬ್ರೇಕ್ ಕೊಟ್ಟವರು. ಆದರೆ ಆ ಮ್ಯಾಗಜೀನ್ ವರದಿಯಿಂದ ದೊಡ್ಡ ಸಮಸ್ಯೆ ಆಯಿತು. ಆ ರೀತಿ ಆಗಬಾರದಿತ್ತು. ಇವತ್ತಿಗೂ ರವಿ ಸರ್ ಸಿನಿಮಾದಲ್ಲಿ ತಾಯಿ ಪಾತ್ರ ಅಥವಾ ಅಜ್ಜಿ ಪಾತ್ರ ಕೊಟ್ಟರೂ ಯಾವುದೇ ಸಂಭಾವನೆ ಇಲ್ಲದೇ ನಟಿಸುತ್ತೇನೆ. ದಯವಿಟ್ಟು ಒಂದು ಅವಕಾಶ ಕೊಡಿ ಸರ್ ಎಂದು ಕಣ್ಣೀರಿಟ್ಟು ಗೋಗರೆದಿದ್ದಾರೆ. ಆ ಘಟನೆ ಬಳಿಕ ರವಿಚಂದ್ರನ್ ಅವರ ಜೊತೆ ಮಾತನಾಡಲು ಸಾಧ್ಯವಾಗಲಿಲ್ಲ. ಕೋರ್ಟ್ನಲ್ಲೇ ಅವರನ್ನು ಭೇಟಿಯಾದೆ. ಆಗ ನಾನು ತುಂಬಾ ಚಿಕ್ಕವಳಾಗಿದ್ದೆ. ಬುದ್ದಿ ಇರಲಿಲ್ಲ, ಪ್ರಬುದ್ಧತೆ ಇರಲಿಲ್ಲ. ಕೋರ್ಟಿನಲ್ಲಿ ಅವರನ್ನು ನೋಡಿದಾಗ ತುಂಬಾ ಸಂಕಟ ಆಯಿತು. ಅಷ್ಟು ದೊಡ್ಡ ನಟ ಅಲ್ಲಿಗೆ ಬರಬೇಕಾಯಿತು ಎಂದು ಹೇಳಿದ್ದಾರೆ.

ನಟಿ ಬಿಂದಿಯಾ ಮಾಡಿದ್ದ ಆರೋಪದಿಂದ ಮನನೊಂದಿದ್ದ ರವಿಚಂದ್ರನ್, ಸತ್ಯವನ್ನು ಹೊರತರುವ ಸಲುವಾಗಿ ಕೋರ್ಟ್ ಮೆಟ್ಟಿಲೇರಿದ್ದರು. ತಮ್ಮ ಮೇಲೆ ಮಾಡಿದ್ದ ಆರೋಪವನ್ನು ಸಾಬೀತುಪಡಿಸುವಂತೆ ಸವಾಲು ಹಾಕಿ, ಕೇವಲ 1 ರೂಪಾಯಿಗೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಬಳಿಕ ವಿಚಾರಣೆ ವೇಳೆ ನಾನು ಆ ರೀತಿಯ ಹೇಳಿಕೆ ನೀಡಿಲ್ಲ. ಅದೆಲ್ಲಾ ಸುಳ್ಳು ಎಂದು ಬಿಂದಿಯಾ ಕ್ಷಮೆ ಕೇಳಿದ್ದರು. ನಂತರ ಪ್ರಕರಣ ಇತ್ಯರ್ಥವಾಗಿತ್ತು. ಆದರೆ 34 ವರ್ಷಗಳಾದರೂ ಆ ಘಟನೆ ಬಿಂದಿಯಾ ಅವರನ್ನು ಇಂದಿಗೂ ಕಾಡುತ್ತಿದ್ದು, ಇದೀಗ ಸಂದರ್ಶನದಲ್ಲಿ ಆ ದಿನಗಳನ್ನು ನೆನೆದು ಭಾವುಕರಾಗಿದ್ದಾರೆ. ಅವರ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Related posts

‘ಒಳ್ಳೆತನದ ಮುಖವಾಡ ಧರಿಸಿದ್ದ ದೀಪಿಕಾ’ – ಹೇಳಿಕೆಗೆ ಕ್ಷಮೆ ಕೇಳಿದ ನಿರ್ದೇಶಕ

Kalpana Editor

ಮಾಜಿ ಸಿಎಂ ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ..!

Kalpana Editor

ಆನ್-ಸ್ಕ್ರೀನ್ ಮಾರ್ಕಿಂಗ್ ವಿವಾದ; ಹೊಣೆ ಹೊತ್ತ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

Kalpana Editor