29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿದೇಶ

ಎಸಿ ಸ್ಫೋಟ; ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್ ಸಾವು..!

ನವದೆಹಲಿ : ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್, ತಮ್ಮ ನಿವಾಸದಲ್ಲಿ ಎಸಿ ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ. ಅವರ ಪುತ್ರನಿಗೂ ಅವಘಡದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲ್ಲಿಯ ಹೌಜ್‌ಖಾಸ್‌ನಲ್ಲಿರುವ ಧನೇಂದ್ರ ಕುಮಾರ್ ಮನೆಯಲ್ಲಿ ದುರಂತ ಸಂಭವಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ನೆನ್ನೆ (ಗುರುವಾರ) ರಾತ್ರಿ 11:18 ರ ಸುಮಾರಿಗೆ ಅವಘಡ ಸಂಭವಿಸಿದೆ. ಈ ವೇಳೆ ಕುಟುಂಬ ಸದಸ್ಯರು ಮತ್ತು ಮನೆ ಕೆಲಸದವರು ಸೇರಿದಂತೆ ಒಟ್ಟು 5 ಜನರು ಮನೆಯಲ್ಲಿದ್ದರು. ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಕೂಡಲೇ ಅವಘಡದಲ್ಲಿ ಗಾಯಗೊಂಡಿದ್ದ, ಧನೇಂದ್ರ ಕುಮಾರ್ ಮತ್ತು ಅವರ ಮಗನನ್ನು ಹತ್ತಿರದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಧನೇಂದ್ರ ಕುಮಾರ್ ಆಸ್ಪತ್ರೆಯಲೇ ಸಾವನ್ನಪ್ಪಿದ್ದಾರೆ. ಅವರ ಪುತ್ರ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪಿತೂರಿ ನಡೆದಿರುವ ಶಂಕೆ ಕಂಡುಬಂದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಘಟನೆ – ಮನೆಯಲ್ಲಿ ಅಳವಡಿಸಿದ್ದ ಎಸಿ (ಹವಾನಿಯಂತ್ರಣ ಯಂತ್ರ) ಒಳಭಾಗದಲ್ಲಿ ಸ್ಫೋಟ ಸಂಭವಿಸಿದೆ. ಈ ವೇಳೆ ದಟ್ಟವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಘಟನೆ ಸಂಭವಿಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ರಾಶಿ ರಾಶಿ ಬಟ್ಟೆಗಳು, ಸೂಟ್‌ಕೇಸ್‌ಗಳು ಸುಟ್ಟು ಕರಕಲಾಗಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

Related posts

ಕರ್ನಾಟಕದಲ್ಲಿ ಸರ್ಕಾರವು ಗುಟ್ಕಾ, ಪಾನ್ ಮಸಾಲಗಳ ನಿಷೇಧ..!

kknewskannada1987@gmail.com

ವಿಚ್ಛೇದನ ಅರ್ಜಿ ವಿಚಾರಣೆ ಹಂತದಲ್ಲೇ ‘ಶುಭ’ ಸುದ್ದಿ ಕೇಳಿಬಂತು..!

Kalpana Editor

ಪೋಕ್ಸೋ ಪ್ರಕರಣ; ಬಿಎಸ್ ಯಡಿಯೂರಪ್ಪಗೆ ರಿಲೀಫ್ ನೀಡಿದ ಹೈಕೋರ್ಟ್​​..!

Kalpana Editor