22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿದೇಶ

2ನೇ ಬಾರಿಗೆ ದರ ಏರಿಕೆ ಬಿಸಿ – ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ..!

ಮುಂಬೈ : ಪೆಟ್ರೋಲ್‌, ಡೀಸೆಲ್‌ ಬಳಿಕ ಇದೀಗ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ದರ ಮತ್ತೆ ಪ್ರತಿ ಕೆಜಿಗೆ 2 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. ಸರ್ಕಾರಿ ಅನಿಲ ವಿತರಕ ಮಹಾನಗರ ಗ್ಯಾಸ್ ಲಿಮಿಟೆಡ್ ಸಂಸ್ಥೆಯು ಮುಂಬೈನಲ್ಲಿ ಇಂದಿನ ಅನ್ವಯವಾಗುವಂತೆ ಹೊಸ ದರ ಘೋಷಿಸಿದೆ. ಪರಿಷ್ಕೃತ ದರದಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 2 ರೂ. ಹೆಚ್ಚಿಸಲಾಗಿದ್ದು, 86 ರೂ.ಗಳಿಗೆ ಏರಿಕೆಯಾಗಿದೆ. ಇನ್ನೂ ಗೃಹ ಬಳಕೆಯ ಪಿಎನ್‌ಜಿ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್‌ಗೆ 50 ಪೈಸೆ ಹೆಚ್ಚಿಸಲಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬರಲಿದೆ.

ಕಳೆದ ಕೆಲ ದಿನಗಳಲ್ಲಿ ಮುಂಬೈನಲ್ಲಿ ಮಾತ್ರವೇ 2ನೇ ಬಾರಿಗೆ ಮಾಡಿದ ದರ ಏರಿಕೆ ಇದಾಗಿದೆ. ಮೇ 26 ರಂದು ದೆಹಲಿಯಲ್ಲೂ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 2 ರೂ. ಹೆಚ್ಚಳ ಮಾಡಲಾಗಿತ್ತು. ಇದಕ್ಕೂ ಮುನ್ನ ಮುಂಬೈ ವ್ಯಾಪ್ತಿಯಲ್ಲಿ ಮೇ 14 ರಂದು 2 ರೂ. ಹೆಚ್ಚಳ ಮಾಡಲಾಗಿತ್ತು.

ಈಗಿನ ಪರಿಷ್ಕೃತ ದರವು ಮುಂಬೈ, ಥಾಣೆ, ನವಿ ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದ (ಎಂಎಂಆರ್) ಇತರ ಭಾಗಗಳಿಗೆ ಅನ್ವಯವಾಗಲಿದೆ. ರ್ಕಾರಿ ಅನಿಲ ವಿತರಕ ಮಹಾನಗರ ಗ್ಯಾಸ್ ಲಿಮಿಟೆಡ್ (ಎಂಜಿಎಲ್) ಕಲ್ಯಾಣ್, ರಾಯಗಢ, ರತ್ನಗಿರಿ, ಲಾತೂರ್, ಉಸ್ಮಾನಾಬಾದ್, ಚಿತ್ರದುರ್ಗ ಮತ್ತು ದಾವಣಗೆರೆ ಸೇರಿದಂತೆ ಹಲವಾರು ನಗರಗಳಿಗೆ ಅನಿಲ ಪೂರೈಸುತ್ತದೆ.

ಸಿಎನ್‌ಜಿ ಬೆಲೆ ಹೆಚ್ಚಳವು ದೆಹಲಿಯಲ್ಲಿ ವಾಣಿಜ್ಯ ವಾಹನ ಚಾಲಕರಿಗೆ ಹೆಚ್ಚು ಹೊರೆಯಾಗಲಿದೆ. ಆಟೋಗಳು, ಟ್ಯಾಕ್ಸಿಗಳು, ಶಾಲಾ ವ್ಯಾನ್‌ಗಳು ಮತ್ತು ಖಾಸಗಿ ಕಾರುಗಳು ಸಿಎನ್‌ಜಿಯ ಸಾಮಾನ್ಯ ಬಳಕೆದಾರರಾಗಿದ್ದಾರೆ. ಈ ಬೆಲೆ ಏರಿಕೆಯೂ ಈ ವರ್ಗದ ಚಾಲಕರಿಗೆ ಹೆಚ್ಚು ಆರ್ಥಿಕ ಹೊರೆ ನೀಡಲಿದೆ. ಅಲ್ಲದೇ ಸಿಎನ್‌ಜಿ ಬೆಲೆ ಏರಿಕೆಯು ಮುಂಬರುವ ದಿನಗಳಲ್ಲಿ ಪ್ರಯಾಣ ಮತ್ತು ಸರಕು ಸಾಗಣೆ ದರಗಳನ್ನ ಹೆಚ್ಚಿಸಲು ಕಾರಣವಾಗಬಹುದು ಎಂದು ಆಟೋ ಮತ್ತು ಟ್ಯಾಕ್ಸಿ ಚಾಲಕರ ಒಕ್ಕೂಟಗಳು ಹೇಳುತ್ತಿವೆ.

Related posts

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ; ಸಿಟಿ ರವಿ ನೇತೃತ್ವದ ಸಮಿತಿಯಿಂದ ಬಿವೈವಿಗೆ ವರದಿ ಸಲ್ಲಿಕೆ..!

Kalpana Editor

ಒಕ್ಕಲಿಗ ನಾಯಕರ ಡಿನ್ನರ್ ಮೀಟಿಂಗ್ ವಿಚಾರದ ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿದ್ದೇನು..?

Kalpana Editor

ನನ್ನ ಮಗಳಿಗೆ ಜೀವದಾನ ಸಿಕ್ಕಿದೆ – ಪ್ರಧಾನಿಗೆ ಧನ್ಯವಾದ ತಿಳಿಸಿದ ಬಾಲಕಿ ತಾಯಿ

Kalpana Editor