20.8 C
ಬೆಂಗಳೂರು
September 22, 2026
kranthikidi.com
ತಾಜಾಸುದ್ದಿದೇಶ

ಕರ್ನಾಟಕದಿಂದ ರಾಜ್ಯಸಭೆಗೆ ಶರ್ಮಿಳಾ ರೆಡ್ಡಿ ಆಯ್ಕೆ ಸಾಧ್ಯತೆ..!

ನವದೆಹಲಿ : ಕರ್ನಾಟಕದಿಂದ ತೆರವಾಗುವ ಮೂರು ರಾಜ್ಯಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭಗೊಂಡಿದೆ. ಕರ್ನಾಟಕದಿಂದ ರಾಜ್ಯಸಭೆಗೆ ವೈಎಸ್ ರಾಜಶೇಖರ ರೆಡ್ಡಿ ಪುತ್ರಿ ಹಾಗೂ ಆಂಧ್ರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶರ್ಮಿಳಾ ರೆಡ್ಡಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ.

ಮೂರು ಸ್ಥಾನಗಳಲ್ಲಿ ಒಂದು ಸ್ಥಾನ ಖರ್ಗೆಗೆ, ಇನ್ನೊಂದು ಸ್ಥಾನವನ್ನು ಸಿದ್ದರಾಮಯ್ಯಗೆ ಹೈಕಮಾಂಡ್ ಮೀಸಲಿಟ್ಟಿದೆ. ಒಂದು ವೇಳೆ ಸಿದ್ದರಾಮಯ್ಯ ಒಪ್ಪದಿದ್ದರೆ ಪರ್ಯಾಯ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ. 3ನೇ ಸ್ಥಾನಕ್ಕೆ ಶರ್ಮಿಳಾ ರೆಡ್ಡಿಯನ್ನು ಪರಿಗಣಿಸಲು ತೀರ್ಮಾನಿಸಿದೆ. ಇವತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಶರ್ಮಿಳಾ ರೆಡ್ಡಿ ಮಾತುಕತೆ ಕೂಡ ನಡೆಸಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕಿ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಸಂಸದೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಶರ್ಮಿಳಾ ಭೇಟಿಯಾದರು. ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಯೋಜನೆಗಳ ಕುರಿತು ಈ ವೇಳೆ ಚರ್ಚಿಸಿದರು.

ಈ ಬಗ್ಗೆ ಎಕ್ಸ್ ಪೋಸ್ಟ್‌ ಮಾಡಿರುವ ಅವರು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ದೆಹಲಿಯಲ್ಲಿ ಭೇಟಿಯಾದೆ. ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಯ ಕುರಿತು ನಾವು ವಿವಿಧ ಅಂಶಗಳನ್ನು ಚರ್ಚಿಸಿದ್ದೇವೆ. ಅವರಿಂದ ಹಲವಾರು ಸಲಹೆಗಳು ಮತ್ತು ಮಾರ್ಗದರ್ಶನವನ್ನು ಪಡೆದುಕೊಂಡಿದ್ದೇನೆ ಎಂದು ಪೊಸ್ಟ್‌ ಮಾಡಿದ್ದಾರೆ.

Related posts

ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ‘ಕಾಕ್ರೋಚ್ ಜನತಾ ಪಕ್ಷ’ದ ಶಾಂತಿಯುತ ಹೆಜ್ಜೆ

Kalpana Editor

ವಿಜಯ್, ಸಂಗೀತಾ‌ ವಿಚ್ಛೇದನ ಅರ್ಜಿ ವಿಚಾರಣೆ; ಪತ್ನಿ ಜೊತೆ ರಾಜಿ ಮಾಡ್ಕೊಳ್ತಾರಾ ದಳಪತಿ

Kalpana Editor

ಶಾಸಕರು ರಾಜೀನಾಮೆ ಕೊಟ್ಟರೆ, ನಿಮಿಷದಲ್ಲಿ ಅಂಗೀಕಾರ; ಸಿಎಂ ಡಿಕೆಶಿ

kknewskannada1987@gmail.com