August 1, 2026
kranthikidi.com
ತಾಜಾಸುದ್ದಿರಾಜ್ಯ

ಭಾರೀ ಮಳೆಗೆ ಕುಸಿದ ಮನೆಯ ಗೋಡೆ – 7 ಮಂದಿ ಪಾರು..!

ಕೋಲಾರ : ಭಾರೀ ಮಳೆಗೆ ಮನೆಯ ಗೋಡೆ ಕುಸಿದು, ಮನೆಯಲ್ಲಿದ್ದ 7 ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರದಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಕೆಜಿಎಫ್‌ನ ಮಾರಿಕುಪ್ಪಂನ ಕೃಷ್ಣಮೂರ್ತಿ ಎಂಬವರ ಮನೆಯ ಒಂದು ಭಾಗದ ಗೋಡೆ ಸಂಪೂರ್ಣ ಕುಸಿದಿದೆ.

ಅಲ್ಲದೇ ಮಳೆ ಹಾಗೂ ಗಾಳಿಯ ಅಬ್ಬರಕ್ಕೆ ರಾಬರ್ಟ್ ಸನ್ ಪೇಟೆಯಲ್ಲಿ ಬೃಹತ್ ಮರಗಳು ಧರೆಗುರುಳಿವೆ. ಮಳೆ ಅವಾಂತರ ಆದರೂ ತಹಶೀಲ್ದಾರ್ ಹಾಗೂ ನಗರಸಭೆ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿಲ್ಲ. ಈ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

Related posts

ನೆಲಮಂಗಲ ತಾಲೂಕಿನಲ್ಲಿ ಚಿರತೆ ಹಾವಳಿ; ಜನರಲ್ಲಿ ಆತಂಕ..!

Kalpana Editor

ಬೆನ್ನುತಟ್ಟಿ ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

Kalpana Editor

ಯತೀಂದ್ರ ಖಾತೆ ಬದಲಾವಣೆಗೆ ಆಗ್ರಹ – ನೈಜ ಹೋರಾಟಗಾರರ ವೇದಿಕೆಯಿಂದ ಸಿಎಂಗೆ ಪತ್ರ..!

Kalpana Editor