20.8 C
ಬೆಂಗಳೂರು
September 22, 2026
kranthikidi.com
ತಾಜಾಸುದ್ದಿರಾಜ್ಯ

19 ರಾಜ್ಯಗಳಲ್ಲಿ ಭಾರೀ ಮಳೆಯ ಅಲರ್ಟ್‌ – ಗುಡುಗು ಸಿಡಿಲಿನ ಆರ್ಭಟವೂ ಜೋರು..!

ಕೇರಳ ರಾಜ್ಯಕ್ಕೆ ಇನ್ನೊಂದು ವಾರದಲ್ಲಿ ಮುಂಗಾರು ಪ್ರವೇಶವಾಗಲಿದೆ. ಇದರ ಹೊರತಾಗಿಯೂ ಮೇ 31 ರ ವರೆಗೆ 19 ರಾಜ್ಯಗಳಲ್ಲಿ ಆಲಿಕಲ್ಲಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ 2-3 ದಿನಗಳಲ್ಲಿ ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಕರಾವಳಿ ಭಾಗಗಳಲ್ಲಿ ಮುಂಗಾರು ಅಬ್ಬರಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ರಾಜಸ್ಥಾನ, ಒಡಿಶಾ, ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ್, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ಗುಜರಾತ್ ಮತ್ತು ಗೋವಾದಲ್ಲಿ ಶನಿವಾರ (ಇಂದು) ಮತ್ತು ಭಾನುವಾರ (ನಾಳೆ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಗಂಟೆಗೆ 40-50 ಕಿ.ಮೀ ವೇಗದಲ್ಲಿ ಮಳೆಗಾಳಿ ಬೀಸಬಹುದು. ಬಿಹಾರ ಮತ್ತು ಜಾರ್ಖಂಡ್‌ನಲ್ಲಿ 50-60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಬಿಹಾರದಲ್ಲಿ ಗಾಳಿಯ ವೇಗ ಗಂಟೆಗೆ 70 ಕಿ.ಮೀ. ತಲುಪಬಹುದು. ಮೇ 30 ರಂದು ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಮೇ 31 ರಂದು ಕೊಂಕಣ ಮತ್ತು ಗೋವಾದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಮೇ 31 ರಿಂದ ಜೂನ್ 2 ರ ವರೆಗೆ ಗುಜರಾತ್‌ನ ಅನೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಹಲವಾರು ಉತ್ತರದ ರಾಜ್ಯಗಳಗಳಲ್ಲೂ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇತ್ತ ರಾಜಸ್ಥಾನದಲ್ಲಿ ಮುಂಗಾರು ಮಳೆ ಆರಂಭದ ನಡುವೆಯೂ, ತಾಪಮಾನದಲ್ಲಿ ತೀವ್ರ ಏರಿಕೆ ಕಂಡಿದೆ. ಆದಾಗ್ಯೂ, ಶುಕ್ರವಾರ ರಾಜ್ಯದ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದ್ದು, ಇಂದಿನಿಂದ ಮಳೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಮುಂದಿನ 7 ದಿನಗಳ ಕಾಲ ಕೇರಳದಲ್ಲಿ ಮುಂಗಾರು ಅಬ್ಬರಿಸಲಿದ್ದು, ಚಂಡಮಾರುತದ ಮುನ್ಸೂಚನೆ ಇದೆ. ಈ ವರ್ಷ ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಒಟ್ಟು ಮಳೆಯು ವಾಡಿಕೆಗಿಂತ ಸ್ವಲ್ಪ ಕಡಿಮೆ ಅಂದರೆ ಶೇ. 90 ರಷ್ಟು ಮಳೆಯಾಗಲಿದ್ದು, ಇದರಲ್ಲಿ ಶೇ. 4 ರಷ್ಟು ವ್ಯತ್ಯಾಸ ಆಗಬಹುದು ಎಂದು ಅಂದಾಜಿಸಲಾಗಿದೆ.

ಮುಂದಿನ ಎರಡು ದಿನಗಳವರೆಗೆ ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯಾದ್ಯಾಂತ ಗುಡುಗು, ಸಿಡಿಲು, ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಸಹರಾನ್‌ಪುರದಲ್ಲಿ ಶುಕ್ರವಾರ ಭಾರೀ ಮಳೆಯಾಗಿದ್ದು, ಹಲವು ಭಾಗಗಳು ಜಲಾವೃತವಾಗಿದ್ದು, ಜನಜೀವನ ತತ್ತರಿಸಿದೆ.

Related posts

ಸದಾ ಸುದ್ದಿಯಲ್ಲಿರಲು ಆರ್‌ಎಸ್‌ಎಸ್‌ ವಿರುದ್ಧ ಟೀಕಿಸುವ ಪ್ರಿಯಾಂಕ್ ಖರ್ಗೆ – ಶೋಭಾ ಕರಂದ್ಲಾಜೆ

Kalpana Editor

ಮುಂದಿನ ಮೂರು ದಿನ ರಾಜ್ಯದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!

Kalpana Editor

ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ..!

Kalpana Editor