kranthikidi.com
ತಾಜಾಸುದ್ದಿದೇಶ

ಲಕ್ಷ ಕೊಟ್ರೂ ಕಾರಿಗೆ ಡಿಮ್ಯಾಂಡ್‌ – ವರದಕ್ಷಿಣೆ ಚಿತ್ರಹಿಂಸೆಗೆ ಇನ್ಸ್ಟಾ ಇನ್ಫ್ಲೂಯೆನ್ಸರ್‌ ಬಲಿ..!

ಲಕ್ನೋ : ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಇನ್ಸ್ಟಾ ಇನ್ಫ್ಲೂಯೆನ್ಸರ್‌ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆಕೆಯ ಪೋಷಕರು ಪತಿ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಮಾನ್ಸಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಮಹಿಳೆ. ಆಕೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತಿಯ ಕುಟುಂಬಸ್ಥರು ಹಲ್ಲೆ ಮಾಡಿ ಕೊಲೆಗೈದಿದ್ದಾರೆ. ಬಳಿಕ ಆಕೆಯ ಮೃತದೇಹವನ್ನು ನೇತುಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಮದುವೆಯ ವೇಳೆ ಪತಿಗೆ 7 ಲಕ್ಷ ರೂ. ನಗದು ಹಾಗೂ ಗೃಹೋಪಯೋಗಿ ವಸ್ತುಗಳನ್ನು ನೀಡಲಾಗಿತ್ತು. ಆದರೂ ಆಕೆಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಕಾರಿಗಾಗಿ ಬೇಡಿಕೆ ಇಟ್ಟಿದ್ದರು. ಅವರ ಬೇಡಿಕೆಗಳು ಈಡೇರದಿದ್ದಾಗ, ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ್ದಾರೆ. ಪತಿಯ ಮನೆಯಲ್ಲಿ ನೀಡುತ್ತಿದ್ದ ಚಿತ್ರಹಿಂಸೆಯ ಬಗ್ಗೆ ತಮ್ಮ ಕುಟುಂಬಕ್ಕೆ ತಿಳಿಸಿದ್ದರು ಎಂದು ವರದಿಯಾಗಿದೆ.

ಮಗಳು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾಳೆಂದು ಪತಿಯ ಕುಟುಂಬ ಹೇಳಿಕೊಂಡಿದೆ. ಇದು ಆತ್ಮಹತ್ಯೆ ಎಂದು ಬಿಂಬಿಸಲಾದ ಕೊಲೆ ಎಂದು ಮಾನ್ಸಿ ಪೋಷಕರು ಆರೋಪಿಸಿದ್ದಾರೆ. ಕಾನ್ಪುರದ ನಿವಾಸಿ ಮಾನ್ಸಿ 2024 ರಲ್ಲಿ ಸಾಗರ್ ರಜಪೂತ್‌ನನ್ನು ವಿವಾಹವಾಗಿದ್ದರು. ಇಬ್ಬರೂ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದರು. ರಜಪೂತ್ ಇನ್‌ಸ್ಟಾಗ್ರಾಮ್‌ನಲ್ಲಿ ಸುಮಾರು 8 ಲಕ್ಷ ಅನುಯಾಯಿಗಳನ್ನು ಹೊಂದಿದ್ದಾನೆ.

ಮಾನ್ಸಿ ಪೋಷಕರ ಲಿಖಿತ ದೂರಿನ ಆಧಾರದ ಮೇಲೆ ರಜಪೂತ್ ಮತ್ತು ಆತನ ಕುಟುಂಬದ ಇತರ ಐದು ಸದಸ್ಯರ ವಿರುದ್ಧ ವರದಕ್ಷಿಣೆ ಸಾವಿನ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಸಾಗರ್ ರಜಪೂತ್, ಮಾವ ರಾಜೇಶ್, ಸೋದರ ಮಾವ ಅನು, ಸೊಸೆ ಬರ್ಖಾ, ಚಾಂದನಿ ಮತ್ತು ಆಶಾ ಎಂಬವರನ್ನು ಆರೋಪಿಗಳು ಎಂದು ಹೆಸರಿಸಲಾಗಿದೆ. ಪ್ರಸ್ತುತ ರಜಪೂತ್‌ನನ್ನು ಕಸ್ಟಡಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

Related posts

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ; ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ..!

Kalpana Editor

ಮಗನ ಸನಾತನ ವಿವಾದದ ಬೆನ್ನಲ್ಲೇ ನಿಮಿಷಾಂಬಾ ದೇಗುಲದಲ್ಲಿ ವಿಶೇಷ ಪೂಜೆ – ದುರ್ಗಾ ಸ್ಟಾಲಿನ್

Kalpana Editor

ಮೋದಿ ಸರ್ಕಾರ ಜನರು ಹಾಳಾಗಿ ಹೋಗ್ಲಿ ಅಂತಾ ಬೆಲೆ ಜಾಸ್ತಿ ಮಾಡಿದ್ದಾರೆ – ಯತೀಂದ್ರ

Kalpana Editor