22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ವೈರಲ್‌ ಆಗಿರೋದು ಎಐ ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ – ಜಮೀರ್‌ ಸವಾಲು..!

ಬೆಂಗಳೂರು : ರಾಜ್ಯದ ಕೆಲವು ಮಾಧ್ಯಮಗಳಲ್ಲಿ ಪ್ರಸಾರ ವಾಗುತ್ತಿರುವ ನನ್ನ ಕುರಿತ ಆಡಿಯೋ ನಕಲಿ, ಎಐ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಕಾಂಗ್ರೆಸ್‌ ನಾಯಕ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ವೈರಲ್‌ ಆಗುತ್ತಿರುವ ಆಡಿಯೋ ಬಗ್ಗೆ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಹೇಳಿಯಲ್ಲಿ, ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ನಾನು ಆ ರೀತಿ ಮಾತನಾಡಿಲ್ಲ. ಗೊಂದಲ ಉಂಟು ಮಾಡಲು ಇದೆಲ್ಲವೂ ಸೃಷ್ಟಿ ಮಾಡಲಾಗಿದೆ. ಇದು ಕಿಡಿಗೇಡಿಗಳ ಕೃತ್ಯ, ಇದನ್ನು ಯಾರೂ ನಂಬಬಾರದು. ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ ಒಳಪಡಿಸಲಿ ಎಂದು ಸವಾಲು ಹಾಕಿದ್ದಾರೆ.

Related posts

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಪಾಲರ ಕಾರ್ಯದರ್ಶಿಗೆ ಪತ್ರ ಹಸ್ತಾಂತರ..!

Kalpana Editor

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ – ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

Kalpana Editor

ಮತ್ತೆ ಸುಪ್ರೀಂ ಮೆಟ್ಟಿಲೇರಿದ ನಟ ದರ್ಶನ್ – ಜಾಮೀನು ಅರ್ಜಿ ಸಲ್ಲಿಸದಂತೆ ನೀಡಿದ್ದ, ಆದೇಶ ಮಾರ್ಪಾಡಿಗೆ ಮನವಿ..!

Kalpana Editor