22.6 C
ಬೆಂಗಳೂರು
June 10, 2026
kranthikidi.com
ತಾಜಾಸುದ್ದಿರಾಜ್ಯ

ಮತ್ತಷ್ಟು ಯಶಸ್ಸು ನಿಮ್ಮದಾಗಲಿ; ಡಿಕೆ ಶಿವಕುಮಾರ್‌ಗೆ ಸೋನಿಯಾ ಗಾಂಧಿ ಶುಭ ಹಾರೈಕೆ..!

ಬೆಂಗಳೂರು : ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಅವರು ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್ ಅವರಿಗೆ (ಬುಧವಾರ) ಇಂದು ದೂರವಾಣಿ ಕರೆ ಮಾಡಿ ಶುಭ ಹಾರೈಸಿದರು. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಗದ್ದುಗೆಗೇರುತ್ತಿದ್ದು, ಅವರ ಜೊತೆಗೆ ಒಟ್ಟು 13 ಮಂದಿ ಶಾಸಕರು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.

ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ. ಕರ್ನಾಟಕವನ್ನ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ. ಹೊಸ ಜವಾಬ್ದಾರಿಯನ್ನ ಸಮರ್ಥವಾಗಿ ನಿಭಾಯಿಸಿ. ಮತ್ತಷ್ಟು ಯಶಸ್ಸು ನಿಮ್ಮದಾಗಲಿ ಎಂದು ಸೋನಿಯಾ ಗಾಂಧಿ ಅವರು ಡಿಕೆ ಶಿವಕುಮಾರ್ ಅವರಿಗೆ ಶುಭಾಶಯ ಹೇಳಿದರು.

ಸಂಪುಟ ರಚನೆಯ ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ, ಉಪಮುಖ್ಯಮಂತ್ರಿ ಹುದ್ದೆಯ ಸಸ್ಪೆನ್ಸ್‌ಗೆ ಕೊನೆಗೂ ತೆರೆ ಬಿದ್ದಿದೆ. ಹಿರಿಯ ದಲಿತ ನಾಯಕ ಡಾ. ಜಿ. ಪರಮೇಶ್ವರ್ ಅವರು ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಏಕೈಕ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಈಗ ಅಧಿಕೃತಗೊಂಡಿದೆ. ಆ ಮೂಲಕ ಹೈಕಮಾಂಡ್ ಹಿರಿಯ ನಾಯಕನ ಅನುಭವಕ್ಕೆ ದೊಡ್ಡ ಮನ್ನಣೆ ನೀಡಿದೆ.

ಈ ಬಾರಿಯ ಸಂಪುಟ ರಚನೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅತ್ಯಂತ ನಾಜೂಕಾದ ನಡೆ ಇಟ್ಟಿದೆ. ಇಂದು ಪ್ರಮಾಣವಚನ ಸ್ವೀಕರಿಸಲಿರುವ ಒಟ್ಟು 14 ನಾಯಕರ ಪೈಕಿ 12 ಮಂದಿ ನಾಯಕರು ಈ ಹಿಂದಿನ ಸಿದ್ದರಾಮಯ್ಯ ಅವರ ಸಂಪುಟದಲ್ಲೂ ಸಚಿವರಾಗಿ ಕಾರ್ಯನಿರ್ವಹಿಸಿದ ಅಪಾರ ಅನುಭವ ಹೊಂದಿದ್ದಾರೆ. ಆಡಳಿತ ಯಂತ್ರಕ್ಕೆ ಯಾವುದೇ ಹಿನ್ನಡೆಯಾಗದಂತೆ ಮುನ್ನಡೆಸಲು ಈ ಹಿರಿಯ ನಾಯಕರನ್ನು ಯಥಾವತ್ತಾಗಿ ಮುಂದುವರೆಸಲಾಗಿದೆ. ಇದನ್ನೂ ಓದಿ : ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ ಸ್ವೀಕಾರ..!

ಹಳೇ ಸಚಿವರ ದಂಡಿನ ಮಧ್ಯೆ ಇಬ್ಬರು ಪ್ರಮುಖ ನಾಯಕರು ಈ ಬಾರಿ ಹೊಸದಾಗಿ ಮಂತ್ರಿ ಪಟ್ಟವನ್ನು ಅಲಂಕರಿಸುತ್ತಿದ್ದಾರೆ. ವಿಧಾನಸಭಾ ಸ್ಪೀಕರ್ ಆಗಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಸರ್ಕಾರದ ಸಚಿವರಿಗೆ ಬಿಸಿ ಮುಟ್ಟಿಸಿದ್ದ ಯು.ಟಿ. ಖಾದರ್ ಅವರು ಈ ಬಾರಿ ಸ್ಪೀಕರ್ ಸ್ಥಾನದಿಂದ ನೇರವಾಗಿ ಸಚಿವ ಸಂಪುಟಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಪ್ರಸ್ತುತ ಪರಿಷತ್ ಸದಸ್ಯರಾಗಿರುವ ಯತೀಂದ್ರ ಸಿದ್ದರಾಮಯ್ಯ ಅವರೂ ಮೊದಲ ಬಾರಿಗೆ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ರಾಜ್ಯ ರಾಜಕಾರಣದ ಮುಂಚೂಣಿಗೆ ಬರಲಿದ್ದಾರೆ.

14 ಮಂದಿಯಿಂದ ಪ್ರಮಾಣವಚನ – ಡಿ.ಕೆ ಶಿವಕುಮಾರ್, ಜಿ. ಪರಮೇಶ್ವರ್, ಕೆ.ಹೆಚ್ ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪ್ರಿಯಾಂಕ್‌ ಖರ್ಗೆ – ಗೃಹ, ಎಂ.ಬಿ.ಪಾಟೀಲ್ – ಕೈಗಾರಿಕೆ, ಶರಣ ಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ, ಯತೀಂದ್ರ ಸಿದ್ದರಾಮಯ್ಯ – ನಗರಾಭಿವೃದ್ಧಿ, ಕೃಷ್ಣ ಬೈರೇಗೌಡ – ಬೆಂಗಳೂರು ಅಭಿವೃದ್ಧಿ, ರಾಮಲಿಂಗಾ ರೆಡ್ಡಿ – ಜಲ ಸಂಪನ್ಮೂಲ, ಯು.ಟಿ ಖಾದರ್- ಆರೋಗ್ಯ, ಬೈರತಿ ಸುರೇಶ್ – ಗ್ರಾಮೀಣಾಭಿವೃದ್ಧಿ..,

ಯಾರಿಗೆ ಯಾವ ಖಾತೆ ಸಾಧ್ಯತೆ? – ಖಾತೆ ಹಂಚಿಕೆಯ ಅಧಿಕೃತ ವಿವರ ಇನ್ನೂ ಲಭ್ಯವಾಗಿಲ್ಲ. ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ. ಮೂಲಗಳ ಮಾಹಿತಿ ಪ್ರಕಾರ ಸಚಿವರಿಗೆ ಈ ಕೆಳಗಿನಂತೆ ಖಾತೆ ಹಂಚಿಕೆಯಾಗುವ ಸಾಧ್ಯತೆಯಿದೆ.

Related posts

ಸಿದ್ದಗಂಗಾ ಮಠಕ್ಕೆ ಡಿಸಿಎಂ ಪರಮೇಶ್ವರ್ ಭೇಟಿ; ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ..!

Kalpana Editor

ಮಗನ ಸನಾತನ ವಿವಾದದ ಬೆನ್ನಲ್ಲೇ ನಿಮಿಷಾಂಬಾ ದೇಗುಲದಲ್ಲಿ ವಿಶೇಷ ಪೂಜೆ – ದುರ್ಗಾ ಸ್ಟಾಲಿನ್

Kalpana Editor

ಮಲೇಷ್ಯಾದಲ್ಲಿ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ – ಉಲ್ಲಂಘಿಸಿದ್ರೆ 23 ಕೋಟಿ ದಂಡ

Kalpana Editor