28.9 C
ಬೆಂಗಳೂರು
June 10, 2026
kranthikidi.com
ರಾಜಕೀಯರಾಜ್ಯ

ಸಿಎಂ ಡಿಕೆಶಿಗೆ ಆರಂಭದಲ್ಲೇ ಬಿಗ್ ಶಾಕ್! ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾರೆಡ್ಡಿ ದಿಢೀರ್ ರಾಜೀನಾಮೆ! ಮಾತು ಮುರಿದರಾ ಡಿಕೆಶಿ?

Ramalinga Reddy

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಅರಗಿಸಿಕೊಳ್ಳಲಾಗದ ಭಾರಿ ಆಘಾತ ಎದುರಾಗಿದೆ! ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯ ಬೆನ್ನಲ್ಲೇ ಭಿನ್ನಮತ ಸ್ಪೋಟಗೊಂಡಿದ್ದು, ರಾಜ್ಯ ಕಾಂಗ್ರೆಸ್‌ನ ಅತ್ಯಂತ ಹಿರಿಯ ನಾಯಕ, ಸಚಿವ ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡುವ ಮೂಲಕ ಬಾಂಬ್ ಸಿಡಿಸಿದ್ದಾರೆ!

ಮಾತು ಮುರಿದರಾ ಸಿಎಂ ಡಿ.ಕೆ. ಶಿವಕುಮಾರ್? ನಿನ್ನೆ ಸಂಜೆಷ್ಟೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದರು. ಆದರೆ, ತಾವು ಅತ್ಯಂತ ನಿರೀಕ್ಷೆ ಇಟ್ಟುಕೊಂಡಿದ್ದ ‘ಬೆಂಗಳೂರು ನಗರಾಭಿವೃದ್ಧಿ’ (Bengaluru Development) ಖಾತೆಯನ್ನು ನೀಡದೆ ಕಡೆಗಣಿಸಿರುವುದಕ್ಕೆ ತೀವ್ರ ಬೇಸರಗೊಂಡ ರಾಮಲಿಂಗಾರೆಡ್ಡಿ, ಇಂದು ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ತಮ್ಮ ರಾಜೀನಾಮೆಯನ್ನು ಘೋಷಿಸಿದ್ದಾರೆ. ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ರವಾನಿಸಿರುವುದಾಗಿಯೂ ಅವರು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ರಾಮಲಿಂಗಾರೆಡ್ಡಿ ಆಕ್ರೋಶದ ನುಡಿಗಳು:

“ನಾನು 1973 ರಲ್ಲಿ ವಿದ್ಯಾರ್ಥಿ ನಾಯಕನಾಗಿ ರಾಜಕೀಯಕ್ಕೆ ಬಂದವನು. ವೀರಪ್ಪ ಮೊಯ್ಲಿಯವರ ಕಾಲದಿಂದ ಹಿಡಿದು ಇಂದಿನವರೆಗೆ 6 ಬಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ನಾನು ಇತಿಹಾಸದಲ್ಲಿ ಎಂದೂ ಇಂಥಹುದೇ ಖಾತೆ ಬೇಕು ಎಂದು ಯಾರ ಬಳಿಯೂ ಲಾಬಿ ಮಾಡಿದವನಲ್ಲ. ಆದರೆ, ಡಿ.ಕೆ. ಶಿವಕುಮಾರ್ ಅವರೇ ಸ್ವತಃ ಎರಡು ಬಾರಿ ನನ್ನನ್ನು ಕರೆದು ‘ಬೆಂಗಳೂರು ನಗರಾಭಿವೃದ್ಧಿ’ ಖಾತೆ ಕೊಡುವುದಾಗಿ ಮಾತು ಕೊಟ್ಟಿದ್ದರು. ಈಗ ಕೊಟ್ಟ ಮಾತನ್ನು ಮುರಿದಿದ್ದಾರೆ. ನನಗೆ ಎರಡು ಬಾರಿ ಮೋಸ ಮಾಡಲಾಗಿದೆ. ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ನಾನು ಕೆಲಸ ಮಾಡಲಾರೆ. ತೀವ್ರ ನೊಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ.”

ಟ್ವಿಸ್ಟ್ ಕೊಟ್ಟ ಹಳೇ ಒಪ್ಪಂದ! ಹಿಂದಿನ ಸಿದ್ದರಾಮಯ್ಯನವರ ಸಂಪುಟದಲ್ಲಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದರು. ಆ ಸಂದರ್ಭದಲ್ಲಿ, “ನಾನು ಮುಖ್ಯಮಂತ್ರಿಯಾದ ತಕ್ಷಣ ಬೆಂಗಳೂರು ಖಾತೆಯನ್ನು ನಿಮಗೇ ನೀಡುತ್ತೇನೆ” ಎಂದು ರಾಮಲಿಂಗಾರೆಡ್ಡಿ ಅವರಿಗೆ ಭರವಸೆ ನೀಡಿದ್ದರು ಎನ್ನಲಾಗಿದೆ. ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಹಿಂದಿನ ದಿನವೂ ರಾಮಲಿಂಗಾರೆಡ್ಡಿ ಅವರು ಡಿಕೆಶಿಯವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚಿಸಿದ್ದರು. ಆದರೆ ಈಗ ಹಂಚಿಕೆಯಾದ ಖಾತೆಗಳ ಪಟ್ಟಿಯಲ್ಲಿ ತಮಗೆ ಅನ್ಯಾಯವಾಗಿದೆ ಎಂದು ಹಿರಿಯ ನಾಯಕ ಬಂಡಾಯವೆದ್ದಿದ್ದಾರೆ.

ಮುಖ್ಯಮಂತ್ರಿಯಾಗಿ ಸಾರಥ್ಯ ವಹಿಸಿಕೊಂಡ ಆರಂಭದಲ್ಲೇ ಡಿ.ಕೆ. ಶಿವಕುಮಾರ್ ಅವರಿಗೆ ಸ್ವಪಕ್ಷದ ಹಿರಿಯ ನಾಯಕನೇ ನೀಡಿರುವ ಈ ಶಾಕ್, ಮುಂಬರುವ ದಿನಗಳಲ್ಲಿ ಸರ್ಕಾರಕ್ಕೆ ಯಾವ ತಿರುವು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ವಿವರಣೆ: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಆರಂಭದಲ್ಲೇ ಸಿಡಿಲು ಬಡಿದಂತಾಗಿದೆ! ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ರಾಮಲಿಂಗಾರೆಡ್ಡಿ, ಸಿಎಂ ಡಿ.ಕೆ. ಶಿವಕುಮಾರ್ ಅವರು ತಮಗೆ ನೀಡಿದ್ದ ಮಾತನ್ನು ತಪ್ಪಿದ್ದಾರೆ ಎಂದು ನೇರ ಆರೋಪ ಮಾಡಿದ್ದಾರೆ. ತಾವು ನಿರೀಕ್ಷಿಸಿದ್ದ ‘ಬೆಂಗಳೂರು ನಗರಾಭಿವೃದ್ಧಿ’ ಖಾತೆ ಸಿಗದೇ ಇರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಅವರು, “ನನಗೆ 2 ಬಾರಿ ಮೋಸ ಮಾಡಲಾಗಿದೆ, ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ” ಎಂದು ಹೇಳಿ ರಾಜೀನಾಮೆ ಪತ್ರ ರವಾನಿಸಿದ್ದಾರೆ. 6 ಬಾರಿ ಸಚಿವರಾಗಿ, ಬೆಂಗಳೂರು ರಾಜಕಾರಣದ ಧೃವತಾರೆಯಂತಿರುವ ರಾಮಲಿಂಗಾರೆಡ್ಡಿ ಅವರ ಈ ದಿಢೀರ್ ಬಂಡಾಯ ಇಡೀ ಕೈ ಪಾಳಯವನ್ನು ನಡುಗಿಸಿದೆ.

Related posts

ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ಸಿದ್ದರಾಮಯ್ಯ – ಹೈಕಮಾಂಡ್ ನಾಯಕರ ಭೇಟಿ ಹಿಂದಿನ ಗುಟ್ಟೇನು..?

Kalpana Editor

ಮತ್ತಷ್ಟು ಯಶಸ್ಸು ನಿಮ್ಮದಾಗಲಿ; ಡಿಕೆ ಶಿವಕುಮಾರ್‌ಗೆ ಸೋನಿಯಾ ಗಾಂಧಿ ಶುಭ ಹಾರೈಕೆ..!

Kalpana Editor

ಹೈಕಮಾಂಡ್‌ಗೆ ಸಿದ್ದರಾಮಯ್ಯ ಚೆಕ್‌ಮೇಟ್ – ಸಿಎಂ ಒಪ್ಪಿಸಲು ಜಾರ್ಜ್‌ಗೆ ರಾಹುಲ್‌ ಟಾಸ್ಕ್‌..!

Kalpana Editor