August 1, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಕನಕಪುರಕ್ಕೆ ಡಿಕೆಶಿ ಭೇಟಿ: ನಿಮ್ಮೊಂದಿಗೆ ಸದಾ ಇರ್ತೆನೆ ಎಂದ ಸಿಎಂ

ಕನಕಪುರ : ಸಿಎಂ ಆಗಿ ಅಧಿಕಾರದ ಗದ್ದುಗೆ ಏರಿರುವ ಡಿಕೆ ಶಿವಕುಮಾರ್, ತಮ್ಮ ಸೀಮೆಯ ಜನರಿಗೆ ಇಂದು ಕೃತಜ್ನತೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಪಟ್ಟಕ್ಕೇರಿದ ಬಳಿಕ ಮೊದಲ ಬಾರಿಗೆ, ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ಕೊಟ್ಟಿದ್ದಾರೆ. ಜನರ ನಡುವೆ ನಿಂತು, ನಾನು ನಿಮ್ಮ ಮನೆ ಮಗ, ನಿಮ್ಮೊಂದಿಗೆ ಸದಾ ಇರುತ್ತೇನೆ ಎನ್ನುವ ಸಂದೇಶ ರವಾನಿಸಿದ್ದಾರೆ.

ಕನಕಪುರಕ್ಕೆ ತೆರಳುವ ಮುನ್ನ ಸಿಎಂ ಡಿಕೆ ಶಿವಕುಮಾರ್, ಮಾದರಿ ಹೆಜ್ಜೆಯೊಂದನ್ನ ಇಟ್ಟರು. ಝೀರೋ ಟ್ರಾಫಿಕ್ ತಪ್ಪಿಸುವುದಕ್ಕಾಗಿ ವಿಧಾನಸೌಧದದಿಂದ ರೇಷ್ಮೆ ಸಂಸ್ಥೆವರೆಗೆ ಮೆಟ್ರೋದಲ್ಲಿಯೇ ತೆರಳಿದರು. ಮೆಟ್ರೋದಲ್ಲಿ ಪ್ರಯಾಣ ವೇಳೆ, ಜನರೊಂದಿಗೆ ಆತ್ಮೀಯವಾಗಿ ಬೆರೆತು, ಮಾತುಕತೆ ಮಾಡಿದರು. ಸಿಲ್ಕ್ ಇನ್‌ಸ್ಟಿಟ್ಯೂಟ್​ನಿಂದ ಕನಕಪುರಕ್ಕೆ ಕಾರಿನಲ್ಲಿ ಸಿಎಂ ಡಿಕೆ ಶಿವಕುಮಾರ್​ ಪ್ರಯಾಣ ಬೆಳಸಿದರು.

ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿಗೆ ಆಗಮಿಸಿದ ಸಿಎಂರನ್ನ ಶಾಸಕ ಇಕ್ಬಾಲ್​​ ಸ್ವಾಗತಿಸಿದರು. ಆಂಜನೇಯ ಸ್ವಾಮಿ ದೇವಸ್ಥಾನದಿಂದ ಬಸ್ ನಿಲ್ದಾಣದ ಸರ್ಕಲ್​ವರೆಗೆ ಮೆರವಣಿಗೆ ಮಾಡಿದರು. ಈ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್​, ನೀವು ಗೆಲ್ಲಿಸಿದ್ದಕ್ಕೆ ನಾನು ಮುಖ್ಯಮಂತ್ರಿ ಆಗಿದ್ದೇನೆ. ಮುಖ್ಯಮಂತ್ರಿ ಆಗಿದ್ದರೂ ನಾನು ನಿಮ್ಮ ಸೇವಕ. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಸಫಲವಾಗಿದ್ದೇನೆ.

ನಿಮ್ಮ ಏನೇ ಸಮಸ್ಯೆ ಇದ್ದರೂ ನಮ್ಮ ಮನೆಯ ಬಾಗಿಲು ತೆರೆದಿರುತ್ತೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುತ್ತೇನೆ ಎಂದರು. ನನ್ನ ಮೇಲೆ ವಿಶ್ವಾಸ ಇಟ್ಟು ಇಕ್ಬಾಲ್ ಹುಸೇನ್​​ರನ್ನು ಗೆಲ್ಲಿಸಿದ್ದೀರಿ. ಇಕ್ಬಾಲ್ ಹುಸೇನ್ ಹೆಸರಿಗೆ ಮಾತ್ರ, ರಾಮನಗರಕ್ಕೆ ನಾನೇ ಶಾಸಕ ಎಂದು ಹೇಳಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಘೋಷಿಸಿದ್ದು ಐತಿಹಾಸಿಕ ನಿರ್ಧಾರ. ಹೆಸರು ಬದಲಾವಣೆಯಿಂದ ನಿಮ್ಮ ಭೂಮಿಯ ಬೆಲೆ ಹೆಚ್ಚಾಯಿತು. ಬೆಂಗಳೂರು ದಕ್ಷಿಣ ಜಿಲ್ಲೆ ಮಾಡೋದಕ್ಕೆ ಕೆಲವರು ವಿರೋಧಿಸಿದರು. ಇದನ್ನೂ ಓದಿ : ಬೆಂಗಳೂರು ಪೂರ್ವ ನಗರ ನಿಗಮದಿಂದ 100 ಟನ್ ಕಸ ವಿಲೇವಾರಿ..!

ಈ ಜಿಲ್ಲೆಯ ಹೆಸರು ಬದಲಾವಣೆಯಿಂದ ಈಗ ಎಲ್ಲರಿಗೂ ಅರ್ಥವಾಗುತ್ತಿದೆ. ಹಾರೋಹಳ್ಳಿ ಅಭಿವೃದ್ಧಿಗೆ ಪ್ರತ್ಯೇಕ ಮೀಟಿಂಗ್ ಮಾಡುತ್ತೇನೆ. ಕನಕಪುರದಲ್ಲಿ ಶೀಘ್ರದಲ್ಲೇ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡುತ್ತೇವೆ. ತುಮಕೂರು, ಬೆಂಗಳೂರು ಗ್ರಾಮಾಂತರ ಭಾಗದವರಿಗೂ ಅನುಕೂಲವಾಗುತ್ತದೆ. ಇಲ್ಲಿನ ಜನರು ಬೆಂಗಳೂರಿಗೆ ವಲಸೆ ಹೋಗುವುದನ್ನು ತಪ್ಪಿಸುತ್ತೇವೆ. ಉತ್ತಮ ವಿದ್ಯಾಭ್ಯಾಸ ಇಲ್ಲೇ ದೊರಕುವಂತೆ ಮಾಡುತ್ತೇವೆ ಎಂದರು.

ಬಿಜೆಪಿ ದೂರ ಇಡಬೇಕು ಎಂದು ಅನಿತಾ ಕುಮಾರಸ್ವಾಮಿಗೆ ಬೆಂಬಲ ನೀಡಿದ್ದೆ. ಜೆಡಿಎಸ್ ಪಕ್ಷದವರಿಗೆ ಕಾಂಗ್ರೆಸ್ ಪಕ್ಷದ ಬಾಗಿಲು ತೆಗೆದಿದೆ. ದೇವರು ವರ, ಶಾಪ ಕೊಡಲ್ಲ, ಅವಕಾಶ ಮಾತ್ರ ಕೊಡುತ್ತಾನೆ. ಮುಂದಿನ ಬಾರಿ 136 ಸೀಟ್​​ಗಿಂತಲೂ ಹೆಚ್ಚು ಬೆಂಬಲ ನೀಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

Related posts

ಕಿಂಡರ್‌ಗಾರ್ಟನ್‌ನಿಂದ ಪಿಜಿವರೆಗೆ ಉಚಿತ ಶಿಕ್ಷಣ; ಒಡಿಶಾ ಸರ್ಕಾರ ಘೋಷಣೆ..!

Kalpana Editor

ಫೇಸ್‌ಬುಕ್‌ನಿಂದ ಮೋದಿ ವಿಡಿಯೋ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ

Kalpana Editor

ಶಾಲೆಗೆ ತೆರಳುವಾಗ ಕಾರು ಡಿಕ್ಕಿ – ಬಾಲಕಿ ಸ್ಥಳದಲ್ಲೇ ಸಾವು..!

Kalpana Editor