22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿದೇಶರಾಜ್ಯ

ಸೂರಜ್‌ ಹೆಗ್ಡೆ ನಿಧನ – ಅಂತಿಮ ನಮನ ಸಲ್ಲಿಸಿದ ರಾಹುಲ್‌ ಗಾಂಧಿ

ಬೆಂಗಳೂರು : ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿದ್ದ, ಸೂರಜ್ ಹೆಗ್ಡೆ ಅವರಿಗೆ ಲೋಕಸಭೆಯ ಪ್ರತಿಪಕ್ಷದ ನಾಯಕ ಅಂತಿಮ ನಮನ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ರಾಹುಲ್‌ ಗಾಂಧಿ ಸೂರಜ್ ಹೆಗ್ಡೆ ಡಾಲರ್ಸ್‌ ಕಾಲೋನಿ ನಿವಾಸಕ್ಕೆ ಅಗಮಿಸಿ ಅಂತಿಮ ದರ್ಶನ ಪಡೆದರು. ರಾಹುಲ್‌ ಗಾಂಧಿ ಅವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಜಿ ಸಿಎಂ ಸಿದ್ದರಾಮಯ್ಯ ಸಾಥ್ ನೀಡಿದರು.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದ ಸೂರಜ್ ಹೆಗ್ಡೆ ಅವರಿಗೆ ಜೂನ್‌ 7 ರಂದು ಹೃದಯಾಘಾತ ಸಂಭವಿಸಿತು.ತಕ್ಷಣ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಇದನ್ನೂ ಓದಿ : ತುಂಗಭದ್ರಾ ಜಲಾಶಯಕ್ಕೆ ಜೀವಕಳೆ; ಕಲ್ಯಾಣ ಕರ್ನಾಟಕ ರೈತರಲ್ಲಿ ಹರ್ಷ

ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ತಮಿಳುನಾಡು ಮತ್ತು ಪುದುಚೇರಿ ಕಾಂಗ್ರೆಸ್ ಉಸ್ತುವಾರಿಯಾಗಿ ಕೆಲಸ ಮಾಡಿದ್ದ ಇವರು ದೇವರಾಜ ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ್ದರು.

Related posts

ಆಟಗಾರ ವೈಭವ್ ಸೂರ್ಯವಂಶಿಯನ್ನು ಹಾಡಿ ಹೊಗಳಿದ ಕ್ರಿಸ್ ಗೇಲ್

Kalpana Editor

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ದಿಢೀರ್‌ ರಾಜೀನಾಮೆ..!

kknewskannada1987@gmail.com

‘ವಿಕಸಿತ ಭಾರತಕ್ಕೆ ಮಾದಕ ವ್ಯಸನ ಮುಕ್ತ ಯುವಜನತೆ ಅಗತ್ಯ’ – ಅಭಿಯಾನಕ್ಕೆ ಮೋದಿ ಚಾಲನೆ..!

Kalpana Editor