29.2 C
ಬೆಂಗಳೂರು
June 10, 2026
kranthikidi.com
ಉದ್ಯೋಗತಾಜಾಸುದ್ದಿರಾಜ್ಯ

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ; ಸಚಿವ ಈಶ್ವರ ಖಂಡ್ರೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಒಟ್ಟು 25,540 ಮಂಜೂರಾದ ಹುದ್ದೆಗಳು, ಇಲಾಖೆಯಲ್ಲಿ ಪ್ರಸ್ತುತ 8,770 ಹುದ್ದೆಗಳು ಖಾಲಿ ಇದೆ. ಖಾಲಿ ಹುದ್ದೆಗಳ ಪೈಕಿ 4,000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲು ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಎಲ್ಲಾ ವರ್ಗಗಳ ಹುದ್ದೆಗಳ ಭರ್ತಿಗೆ ಅಧಿಕಾರಿಗಳಿಗೆ ನಿರ್ದೇಶನ, ಖಾಲಿ ಹುದ್ದೆಗಳ ವಿವರ – ಎ ವರ್ಗ – 268 ಹುದ್ದೆಗಳು, ಬಿ ವರ್ಗ – 1,079 ಹುದ್ದೆಗಳು, ಸಿ ವರ್ಗ – 5,294 ಹುದ್ದೆಗಳು, ಡಿ ವರ್ಗ – 2,129 ಹುದ್ದೆಗಳು ಖಾಲಿ ಇದೆ. ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನೇಮಕಾತಿ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿಗೂ ವಿಶೇಷ ಸೂಚನೆ ನೀಡಿದ್ದಾರೆ. ಇದನ್ನೂ ಓದಿ : ನೆಲಮಂಗಲ ತಾಲೂಕಿನಲ್ಲಿ ಚಿರತೆ ಹಾವಳಿ; ಜನರಲ್ಲಿ ಆತಂಕ..!

ಜೂನ್ 3ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ 56 ಸಾವಿರ ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ನೀಡಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 1,400 ಹುದ್ದೆಗಳ ಭರ್ತಿಗೆ ಈಗಾಗಲೇ ಅನುಮೋದನೆ ಮಾಡಲಾಗಿದೆ. 1,400 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭವಾಗಿದ್ದು, ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ.

Related posts

ಪೋಕ್ಸೋ ಪ್ರಕರಣ; ಬಿಎಸ್ ಯಡಿಯೂರಪ್ಪಗೆ ರಿಲೀಫ್ ನೀಡಿದ ಹೈಕೋರ್ಟ್​​..!

Kalpana Editor

ಮಾಜಿ ಸಚಿವ ವೆಂಕಟರಮಣಪ್ಪ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

Kalpana Editor

ಕುತೂಹಲಕ್ಕೂ ಕಾಂಗ್ರೆಸ್‌ ಹೈಕಮಾಂಡ್‌ ಬ್ರೇಕ್‌; ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಖಚಿತ..!

Kalpana Editor