29.2 C
ಬೆಂಗಳೂರು
June 10, 2026
kranthikidi.com
ತಾಜಾಸುದ್ದಿರಾಜ್ಯ

ಜಿಲ್ಲೆಯಲ್ಲಿ ಮಳೆ ಕೊರತೆ; ಬರಿದಾಗುತ್ತಿದೆ ಜೀವನದಿ ಹೇಮಾವತಿ ಜಲಾಶಯದ ಒಡಲು..!

ಹಾಸನ : ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ ಹೊರತಾಗಿಯೂ ಹಾಸನ ಜಿಲ್ಲೆ ಮಳೆಯ ಕೊರತೆ ಎದುರಿಸುತ್ತಿದೆ. ಈ ಹಿನ್ನೆಲೆ ಜಿಲ್ಲೆಯ ಜೀವನಾಡಿ ಹೇಮಾವತಿ ಜಲಾಶಯದ ಒಡಲು ಬತ್ತುತ್ತಿದ್ದು, 10.185 ಟಿಎಂಸಿ ನೀರು ಮಾತ್ರ ಬಳಕೆಗೆ ಲಭ್ಯವಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಎದುರಾಗುವ ಆತಂಕ ಶುರುವಾಗಿದೆ.

ಕಾವೇರಿ ನೀರಾವರಿ ನಿಗಮಕ್ಕೆ ಒಳಪಡುವ ಗೊರೂರಿನಲ್ಲಿರುವ ಹೇಮಾವತಿ ಜಲಾಶಯ 37.105 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯ ಹೊಂದಿದೆ. ಸದ್ಯ ಜಲಾಶಯದಲ್ಲಿ 14.552 ಟಿಎಂಸಿ ನೀರಿದೆ. ಇದರಲ್ಲಿ 10.185 ಟಿಎಂಸಿ ನೀರು ಬಳಕೆಗೆ ಮಾತ್ರ ಲಭ್ಯ. ಇನ್ನುಳಿದ 4.372 ಟಿಎಂಸಿ ನೀರು ಡೆಡ್ ಸ್ಟೋರೇಜ್. ಕಳೆದ ವರ್ಷ ಮುಂಗಾರಿನ ಅವಧಿಯಲ್ಲಿ ಜಲಾಶಯದಲ್ಲಿ ಒಟ್ಟು 24.482 ಟಿಎಂಸಿ ನೀರು ಸಂಗ್ರಹವಾಗಿತ್ತು. ಇದರಲ್ಲಿ 20.110 ಟಿಎಂಸಿ ನೀರು ಬಳಕೆಗೆ ಲಭ್ಯವಿತ್ತು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಜಲಾಶಯದಲ್ಲಿ ಅರ್ಧದಷ್ಟು ನೀರು ಕಡಿಮೆಯಿದೆ.

ಕಾವೇರಿಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ ಮೂಡಿಗೆರೆ, ಸಕಲೇಶಪುರ, ಆಲೂರು ಭಾಗದಲ್ಲಿ ಉತ್ತಮ ಮಳೆಯಾದರೆ ಮಾತ್ರ ಭರ್ತಿಯಾಗಲಿದೆ. ಮುಂಗಾರು ಪ್ರವೇಶಿಸಿ ಹಲವು ದಿನಗಳಾದರೂ ಮಳೆ ಬಾರದ ಕಾರಣ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಕುಂಠಿತ ಆಗಿವೆ. ಇದೇ ಪರಿಸ್ಥಿತಿ ಮುಂದುವರಿದರೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಲಿದೆ. ಇದನ್ನೂ ಓದಿ : ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ..!

ಹೇಮಾವತಿ ಜಲಾಶಯ ಹಾಸನ ಮಾತ್ರವಲ್ಲದೆ, ಮಂಡ್ಯ, ತುಮಕೂರು ಹಾಗೂ ಮೈಸೂರು ಜಿಲ್ಲೆಗಳಿಗೂ ನೀರೊದಗಿಸುತ್ತದೆ. ಹೀಗಾಗಿ ಜಲಾಶಯ ಭರ್ತಿಯಾಗದಿದ್ದರೆ ಅಕ್ಕಪಕ್ಕದ ಜಿಲ್ಲೆಗಳ ರೈತರೂ ಕೂಡ ಸಂಕಷ್ಟಕ್ಕೀಡಾಗಲಿದ್ದಾರೆ. ಇಂತಹ ಭೀಕರ ಬರಗಾಲದ ಪರಿಸ್ಥಿತಿಯಲ್ಲೂ ನಾಲೆಗಳಿಗೆ 300 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

Related posts

ಮಾಜಿ ಪ್ರಧಾನಿಯನ್ನ ರಾಜ್ಯ ಸಭೆಗೆ ಕಳುಹಿಸೋಕೆ ಬಿಜೆಪಿಯವರು ಒಪ್ಪಿಲ್ಲ; ರಣದೀಪ್ ಸಿಂಗ್ ಸುರ್ಜೇವಾಲ

Kalpana Editor

ರಾಷ್ಟ್ರ ಪ್ರಶಸ್ತಿ ವಿಜೇತ ನಟ ಮಲಯಾಳಂ ಸಲೀಂ ಕುಮಾರ್ ಇನ್ನಿಲ್ಲ..!

Kalpana Editor

ನಾನು ರಾಜಕಾರಣಕ್ಕೆ ಮರಳಲು ಕಾಲ ಕೂಡಿಬರಬೇಕು – ನಟಿ ರಮ್ಯಾ

Kalpana Editor