29.2 C
ಬೆಂಗಳೂರು
June 10, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ರಾಜ್ಯಸಭಾ ಟಿಕೆಟ್​​ ಕೈತಪ್ಪಿದ ಬಗ್ಗೆ ಮೌನ ಮುರಿದ ದೇವೇಗೌಡರು

ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡರಿಗೆ ಎನ್​​ಡಿಎಯಿಂದ ರಾಜ್ಯಸಭಾ ಟಿಕೆಟ್​​ ನೀಡದಿರೋದು ಭಾರಿ ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಈ ನಡುವೆ ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಹೆಚ್​​ಡಿಡಿ, ವಿರೋಧಿಗಳಿಗೆ ಖಡಕ್​​ ಸಂದೇಶ ರವಾನಿಸಿದ್ದಾರೆ. ನಾನು ಸುಮ್ಮನೆ ಕೂರಲ್ಲ, ನನ್ನ ಶಕ್ತಿ ಮೀರಿ‌ ಕೆಲಸ‌ ಮಾಡುತ್ತೇನೆ. ರಾಜ್ಯ ಮತ್ತು ದೇಶದ ವಿಚಾರವನ್ನು ಯಾರ ಹಂಗಿಲ್ಲದೆ ಮಾತಾಡ್ತೇನೆ ಎಂದವರು ತಿಳಿಸಿದ್ದಾರೆ. ನನ್ನ ಹಾಗೂ ಮೋದಿ ಸಂಬಂಧ ರಾಜ್ಯಸಭಾ ಸದಸ್ಯ ಸ್ಥಾನದಿಂದ ಮುಗೀತು ಎಂದು ಭಾವಿಸಬೇಡಿ ಎಂದೂ ಅವರು ತಿವಿದಿದ್ದಾರೆ.

ನಾನು ರಾಜಕೀಯಕ್ಕೆ ಬಂದು 7 ದಶಕಗಳು ಕಳೆದಿವೆ. ಜನ ಪರ ಸೇವೆ ಸಲ್ಲಿಸಿದ್ದೇನೆ. ರಾಜ್ಯಸಭಾ ಸದಸ್ಯ ಆಗಬೇಕು ಎಂಬ ವ್ಯಾಮೋಹ ಇದ್ದಿದ್ರೆ ಕೇಂದ್ರದ ಮುಖಂಡರನ್ನ ಭೇಟಿ ಮಾಡ್ತಿದ್ದೆ. ಈ ನಡುವೆ ಕುಮಾರಸ್ವಾಮಿ ನಾವು ರಾಜ್ಯಸಭೆಗೆ ಅಪೇಕ್ಷೆ ಮಾಡಲ್ಲ ಎಂದಿದ್ದು, ಬಿಜೆಪಿಗೆ ಒಂದು ಸೀಟ್ ಸಿಗುತ್ತೆ. ನಾವ್ಯಾಕೆ 18 ಜನ ಇದ್ದು ಸೀಟ್ ಕೇಳಬೇಕು ಎಂದಿದ್ದರು. ಮೋದಿ ಮತ್ತು ನನ್ನ ನಡುವಿನ ಸಂಬಂಧ ಒಂದು ರಾಜ್ಯಸಭಾ ಸೀಟಿಂದ ಅಲ್ಲ.

ಕಳೆದ 10 ವರ್ಷಗಳಿಂದ ನಮ್ಮದು ವೈಯಕ್ತಿಕ ಸಂಬಂಧ. ಮೋದಿಯವರ ಬಗ್ಗೆ, ಆಡಳಿತದ ಬಗ್ಗೆ ನನ್ನ ಭಾವನೆಯನ್ನ ನಿರ್ಭಯವಾಗಿ ಹೇಳಿದ್ದೇನೆ. ಮೋದಿ ನಾಯಕತ್ವ ಸಮರ್ಥನೆ ಮಾಡಿದ್ದೇನೆ. ನನ್ನ ಮೋದಿಯವರ ಸಂಬಂಧ ಹೀಗೆ ಮುಂದುವರೆಯುತ್ತದೆ. ರಾಜ್ಯ ಸಭಾ ಸದಸ್ಯ ಸ್ಥಾನ ಇಲ್ಲ ಅಂದರೂ ಮೋದಿಯವರ ಜೊತೆ ನನ್ನ ಪತ್ರ ವ್ಯವಹಾರ ಇರುತ್ತದೆ ಎಂದವರು ತಿಳಿಸಿದ್ದಾರೆ. ಇದನ್ನೂ ಓದಿ : ತಮ್ಮ ಅಭಿಮಾನಿಗಳಿಗೆ ಜಬರ್ದಸ್ತ್ ಗುಡ್‌ನ್ಯೂಸ್ ಕೊಟ್ಟ ಕಿಚ್ಚ ಸುದೀಪ್

ಜೆಡಿಎಸ್​​ ಪಕ್ಷದ ಬೆಳವಣಿಗೆಗೂ ಶಕ್ತಿ ಮೀರಿ ಕೆಲಸ ಮಾಡ್ತೇನೆ. ಎನ್​ಡಿಎಯಲ್ಲಿ ಇದ್ದೇವೆ, ಆದ್ರೂ ಪಕ್ಷ ಸಂಘಟನೆ ಮಾಡಬೇಕು. ಜಿಬಿಎ ಚುನಾವಣೆಗೆ ಕಮಿಟಿ ಮಾಡಲಾಗಿದೆ. ಜಿಲ್ಲಾ ಪಂಚಾಯತ್​​ ಮತ್ತು ತಾಲೂಕು ಪಂಚಾಯತ್​​ ಸೇರಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧತೆ ಮಾಡ್ತೇವೆ. ರಾಜ್ಯಸಭೆ ಆಯ್ಕೆ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿ ವ್ಯಾಖ್ಯಾನ ಮಾಡ್ತಿದ್ದಾರೆ. ಸ್ನೇಹಿತರು ದೇವೇಗೌಡರಿಗೆ ಟಿಕೆಟ್ ಕೊಡಬೇಕು ಅಂದಿದ್ದರು. ಆದರೆ ನಾನು ಅವರಿಗೆ ಸಮಾಧಾನ ಮಾಡಿದ್ದೇನೆ ಎಂದವರು ತಿಳಿಸಿದ್ದಾರೆ.

Related posts

ದೇಶವನ್ನು ಬಲಪಡಿಸುವಲ್ಲಿ ಯಾವುದೇ ಅವಕಾಶ ಬಿಟ್ಟುಕೊಟ್ಟಿಲ್ಲ: ಪ್ರಧಾನಿ ಮೋದಿ

Kalpana Editor

ಮಾಜಿ ಪ್ರಧಾನಿಯನ್ನ ರಾಜ್ಯ ಸಭೆಗೆ ಕಳುಹಿಸೋಕೆ ಬಿಜೆಪಿಯವರು ಒಪ್ಪಿಲ್ಲ; ರಣದೀಪ್ ಸಿಂಗ್ ಸುರ್ಜೇವಾಲ

Kalpana Editor

ಸ್ಥಾನಮಾನ ಹೆಚ್ಚಾದಂತೆ ವಿರೋಧಿಗಳೂ ಹೆಚ್ಚಾಗುತ್ತಾರೆ; ವಿವಾದದಲ್ಲಿ ರಣವೀರ್‌ಗೆ ಕಂಗನಾ ಬೆಂಬಲ..!

Kalpana Editor