22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿರಾಜ್ಯ

ಪ್ರಧಾನಮಂತ್ರಿಗಳಾಗಿ 4399 ದಿನ ನಿರಂತರ ಸೇವೆ; ಬಿ.ವೈ. ವಿಜಯೇಂದ್ರ ಮೆಚ್ಚುಗೆ..!

ಬೆಂಗಳೂರು : ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜೀ ಅವರು 2014ರ ಮೇ ತಿಂಗಳಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿ, ಸತತ 3 ಬಾರಿಗೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. 4399 ದಿನಗಳು ನಿರಂತರವಾಗಿ ಪ್ರಧಾನಮಂತ್ರಿಗಳಾಗಿ, ದೇಶದ ಪ್ರಧಾನ ಸೇವಕ ಎಂಬ ಭಾವನೆಯಿಂದ ಭಾರತವನ್ನು ಮುನ್ನಡೆಸುತ್ತಿದ್ದಾರೆ. ಇದೊಂದು ದಾಖಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ಲೇಷಿಸಿದರು.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಪ್ರಜಾಸತ್ತಾತ್ಮಕವಾಗಿ ಚುನಾಯಿತ ಪ್ರಧಾನಿಯಾಗಿ ಅವರು ಸುದೀರ್ಘ ಸೇವೆ ಸಲ್ಲಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. ಪ್ರತಿಯೊಬ್ಬ ಭಾರತೀಯರು ಇದು ಹೆಮ್ಮೆ ಪಡುವ ವಿಚಾರ ಎಂದು ನುಡಿದರು.

ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜೀ ಅವರ ವಿಕಸಿತ ಭಾರತ, ಆತ್ಮನಿರ್ಭರ ಭಾರತದ ಕನಸು ಈಡೇರಲಿ ಎಂದು ಕಾಡುಮಲ್ಲೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾಗಿ ತಿಳಿಸಿದರು. ಮೋದಿಜೀ ಅವರಿಗೆ ಇನ್ನಷ್ಟು ಹೆಚ್ಚು ಆಯುಸ್ಸು ಕೊಟ್ಟು, ಹೆಚ್ಚು ಶಕ್ತಿ ಕೊಟ್ಟು, ಹೆಚ್ಚು ದಿನಗಳ ಕಾಲ ಪ್ರಧಾನಿಯಾಗಿ ಕೆಲಸ ಮಾಡುವ ಶಕ್ತಿಯನ್ನು ಭಗವಂತನು ದಯಪಾಲಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾಗಿ ವಿವರಿಸಿದರು. ಇದನ್ನೂ ಓದಿ : ಜೂ.12 ರಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್‌ ಭೇಟಿ..!

ಒಂದು ದಿನವೂ ವಿಶ್ರಾಂತಿ ಪಡೆಯದೇ ಭ್ರಷ್ಟಾಚಾರರಹಿತ ಆಡಳಿತವನ್ನು ಮೋದಿಜೀ ಅವರು ನೀಡುತ್ತಿದ್ದಾರೆ. ಜಾಗತಿಕ ಸವಾಲುಗಳ ನಡುವೆ ಮೂಲಭೂತ ಸೌಕರ್ಯ, ಕೃಷಿ ಕ್ಷೇತ್ರ, ಆರೋಗ್ಯ ಕ್ಷೇತ್ರ ಸೇರಿ ಎಲ್ಲ ಕ್ಷೇತ್ರಗಳಲ್ಲಿ ಭಾರತವನ್ನು ಮುನ್ನಡೆಸುತ್ತಿದ್ದಾರೆ. ಇದರಿಂದ ಭಾರತ ಜಗತ್ತಿನ 4ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಇದಕ್ಕೆ ಮೋದಿಜೀ ಅವರ ದಿಟ್ಟ ನಾಯಕತ್ವ ಕಾರಣ ಎಂದು ಹೇಳಿದರು.

Related posts

ಯುಜಿಸಿಇಟಿ ಅರ್ಜಿ ಸಲ್ಲಿಕೆಗೆ ಕೆಇಎಯಿಂದ ಹೊಸ ಲಿಂಕ್ ಪ್ರಕಟ..!

Kalpana Editor

ನನಗೆ ಕೊಟ್ರೆ ರಾಜ್ಯದ KAT, KPSC ಯನ್ನೇ ರದ್ದು ಮಾಡ್ತೇನೆ – ಗೃಹ ಸಚಿವ ಪ್ರಿಯಾಂಕ್ ಖರ್ಗೆ

Kalpana Editor

ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ..!

Kalpana Editor