21.5 C
ಬೆಂಗಳೂರು
September 22, 2026
kranthikidi.com
ತಾಜಾಸುದ್ದಿರಾಜ್ಯ

ಕೋಯಿಕ್ಕೋಡ್‌ದಲ್ಲಿ ನಿಫಾ ಸೋಂಕು ದೃಢ – ಕೇರಳದಲ್ಲಿ ಹೈ ಅಲರ್ಟ್..!

ತಿರುವನಂತಪುರಂ : ಕೇರಳದಲ್ಲಿ ಮತ್ತೊಮ್ಮೆ ನಿಫಾ ವೈರಸ್ ಆತಂಕ ಸೃಷ್ಟಿಸಿದ್ದು, ಕೋಯಿಕ್ಕೋಡ್ ಜಿಲ್ಲೆಯ 43 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿರುವುದು ಪ್ರಾಥಮಿಕ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

ಕೇರಳ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದ್ದು, ಅಂತಿಮ ದೃಢೀಕರಣಕ್ಕಾಗಿ ರೋಗಿಯ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಶೀಘ್ರದಲ್ಲೇ ಅಂತಿಮ ವರದಿ ಲಭ್ಯವಾಗುವ ನಿರೀಕ್ಷೆಯಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಫೆರೋಕ್ ಮೂಲದ ಉದ್ಯಮಿಯಾಗಿರುವ ಈ ವ್ಯಕ್ತಿ ಮೊದಲಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಸದ್ಯ ವೆಂಟಿಲೇಟರ್ ಸಹಾಯದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸೋಂಕು ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ರೋಗಿಯ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಪ್ರತ್ಯೇಕಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ತ್ವರಿತಗತಿಯಲ್ಲಿ ಆರಂಭಿಸಿದೆ. ರೋಗಿಯ ಸಂಪರ್ಕದಲ್ಲಿದ್ದ ಆರೋಗ್ಯ ಸಿಬ್ಬಂದಿ ಹಾಗೂ ಇತರರಿಗೆ ಕ್ವಾರೆಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಕೆ.ಮುರಳೀಧರನ್, ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳು ಹಾಗೂ ಚಿಕಿತ್ಸಾ ಸೌಲಭ್ಯಗಳನ್ನು ಸಜ್ಜುಗೊಳಿಸಲಾಗಿದೆ. ಪರಿಸ್ಥಿತಿಯನ್ನು ಆರೋಗ್ಯ ಇಲಾಖೆ ನಿಕಟವಾಗಿ ಗಮನಿಸುತ್ತಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಕೇರಳದಲ್ಲಿ ಈ ಹಿಂದೆ ಹಲವು ಬಾರಿ ನಿಫಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೆಚ್ಚಿನ ಎಚ್ಚರಿಕೆ ವಹಿಸಿದ್ದು, ಸೋಂಕು ನಿಯಂತ್ರಣಕ್ಕೆ ವಿಶೇಷ ತಂಡಗಳನ್ನು ನಿಯೋಜಿಸಿದೆ. ಇದನ್ನೂ ಓದಿ : ದಾಖಲೆ ಬರೆದ ಪ್ರಧಾನಿ ಮೋದಿಗೆ ನಟ ಸುದೀಪ್, ರಿಷಬ್ ಶೆಟ್ಟಿ ಶುಭಾಶಯ..!

Related posts

ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ವಿರುದ್ಧ ಎಫ್‌ಐಆರ್..!

Kalpana Editor

ಮಾವಿನಹಣ್ಣು ಕೆಲವು ಆರೋಗ್ಯ ಸಮಸ್ಯೆ ಇರುವವರಿಗೆ ಒಳ್ಳೆಯದಲ್ಲ..!

Kalpana Editor

‘ಕುಂಕುಮ ಭಾಗ್ಯ’ ಹಿಂದಿ ನಟಿ ಸಂಚಿತಾ ಉಗಲೆ ನೇಣಿಗೆ ಶರಣು

Kalpana Editor