June 13, 2026
kranthikidi.com
ತಾಜಾಸುದ್ದಿರಾಜ್ಯ

ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ..!

ಬೆಂಗಳೂರು : ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸಿದ್ದ, ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಗಳು ಅಧಿಕೃತ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಪವನ್‌ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಬಿಜೆಪಿ ಅಭ್ಯರ್ಥಿ ಪ್ರೊ. ನಾಗರಾಜ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪವನ್‌ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಪ್ರೊ. ನಾಗರಾಜ್‌ ಚುನಾವಣಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ. ಖರ್ಗೆ ಅವರು ದೆಹಲಿಯಲ್ಲಿರುವ ಕಾರಣ ಬೆಂಗಳೂರಿಗೆ ವಾಪಸ್‌ ಆದ ಬಳಿಕ ಪ್ರಮಾಣ ಪತ್ರ ಪಡೆದುಕೊಳ್ಳಲಿದ್ದಾರೆ.

ರಾಜ್ಯಸಭೆಗೆ ನೂತನ ಸದಸ್ಯರಾಗಿ ಆಯ್ಕೆಯಾದ ಬೆನ್ನಲ್ಲೇ ಕಾಂಗ್ರೆಸ್‌ ಸದಸ್ಯ ಪವನ್ ಖೇರಾ ಮಾತನಾಡಿ, ಕರ್ನಾಟಕದಿಂದ ರಾಜ್ಯಸಭೆ ಸದಸ್ಯನಾಗಿ ಆಯ್ಕೆಯಾಗಿದ್ದಕ್ಕೆ ಖುಷಿ ಇದೆ. ಕನ್ನಡ ಸುಂದರ ಭಾಷೆ, ಮುಂದೆ ನಾನು ಬರುವಾಗ ಕನ್ನಡ ಕಲಿತುಕೊಂಡು ಬರುತ್ತೇನೆ ಎಂದು ಶಪಥ ಮಾಡಿದರು. ಖರ್ಗೆ ದೆಹಲಿಯಲ್ಲಿ ಇದ್ದಾರೆ, ಬೆಂಗಳೂರಿಗೆ ವಾಪಸ್ ಆದ ಬಳಿಕ ಪ್ರಮಾಣ ಪತ್ರ ಪಡೆಯಲಿದ್ದಾರೆ ಎಂದು ತಿಳಿಸಿದ್ರು.

ರಾಜ್ಯಸಭಾ ಸದಸ್ಯರಾಗಿ ಮನ್ಸೂರು ಅಲಿ ಖಾನ್ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡುತ್ತಿದ್ದಂತೆ ಬೆಂಬಲಿಗರು ಕುಣಿದು ಕುಪ್ಪಳಿಸಿದರು. ವಿಧಾನಸೌಧದ ಹೊರಗಡೆ ಪೋಸ್ಟರ್ ಹಿಡಿದು, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದನ್ನೂ ಓದಿ : ದುಡ್ಡು ಕೊಟ್ರೆ ಸಿಗುತ್ತೆ SSLC, PUC, ಡಿಗ್ರಿ ನಕಲಿ ಅಂಕ ಪಟ್ಟಿ..!

Related posts

ರಾಜ್ಯದಲ್ಲಿ ಮುಂಗಾರು ಅಬ್ಬರ; 19 ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ..!

Kalpana Editor

ಗೆಳತಿ ಸಾವಿನ ನೋವಲ್ಲಿ ಸಲ್ಮಾನ್ ಖಾನ್; ಅಂತಿಮ ನಮನ ಸಲ್ಲಿಸಿದ ನಟ

Kalpana Editor

ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ಸಾಧ್ಯತೆ..!

Kalpana Editor