kranthikidi.com
ತಾಜಾಸುದ್ದಿರಾಜ್ಯಸಿನಿಮಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು – ನಟ ಸ್ಪಷ್ಟನೆ..!

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ತಮ್ಮ ಹೆಸರು ತಳುಕು ಹಾಕಿಕೊಂಡಿರುವ ಬಗ್ಗೆ ನಟ ಪ್ರಕಾಶ್‌ ರಾಜ್‌ ಸ್ಪಷ್ಟನೆ ನೀಡಿದ್ದಾರೆ. ಎಕ್ಸ್‌ ಪೋಸ್ಟ್‌ನಲ್ಲಿ ಸ್ಪಷ್ಟನೆ ನೀಡಿರುವ ಪ್ರಕಾಶ್‌ ರಾಜ್‌, ಖುದ್ದು ನಾನೇ ಬಂದು ಇದಕ್ಕೆಲ್ಲ ಉತ್ತರಿಸುತ್ತೇನೆ. ಅಲ್ಲಿಯವರೆಗೂ ಯಾವುದೇ ವದಂತಿಗೆ ಕಿವಿಗೊಡಬೇಡಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಹೆಸರು ಚರ್ಚೆಯಾಗುತ್ತಿರೋದು ಗಮನಕ್ಕೆ ಬಂದಿದೆ‌. ಇದು ಅತ್ಯಂತ ಸೂಕ್ಷ್ಮವಾದ ವಿಷಯ ಮತ್ತು ಲಕ್ಷಾಂತರ ಭಕ್ತರ ನಂಬಿಕೆಗೆ ನೋವುಂಟು ಮಾಡಬಹುದಾದ ವಿಚಾರ. ಹಾಗಾಗಿ, ಈ ಕುರಿತ ಅನುಮಾನಗಳಿಗೆ ಉತ್ತರಿಸುವುದು ನನ್ನ ಕರ್ತವ್ಯವಾಗಿದೆ. ಇದನ್ನೂ ಓದಿ : ಶೂಟಿಂಗ್ ಲೋಕಕ್ಕೆ ಆಘಾತ: ಮನು ಭಾಕರ್ ಕೋಚ್ ಜಸ್ಪಾಲ್ ರಾಣಾ ನಿಧನ..!

ನಾನು ದೂರದೂರಿನಲ್ಲಿದ್ದೇನೆ. ಇನ್ನೆರಡು ದಿನಗಳಲ್ಲಿ ನಾನೇ ಸ್ವತಃ ಬಂದು ಮಾಧ್ಯಮ ಮಿತ್ರರ ಮುಖೇನ ಉತ್ತರಿಸುತ್ತೇನೆ. ಅಲ್ಲಿಯವರೆಗೆ ಗಾಳಿಮಾತುಗಳನ್ನು ಮತ್ತು ಕೆಲವು ದುರುಳರು ಈ ಸುದ್ದಿಗೆ ಕಟ್ಟಲೆತ್ನಿಸುತ್ತಿರುವ ರೆಕ್ಕೆ ಪುಕ್ಕಗಳನ್ನು ನಂಬದಿರಿ ಎಂದು ಜನರಲ್ಲಿ ನಟ ಪ್ರಕಾಶ್‌ ರಾಜ್‌ ಮನವಿ ಮಾಡಿದ್ದಾರೆ.

Related posts

ಪ್ರಶ್ನೆಪತ್ರಿಕೆ ಸೋರಿಕೆ; ಜಾಲ ನಿರ್ಮೂಲನೆಗೆ ಕೇಂದ್ರದ ಕಠಿಣ ಮಸೂದೆ – ಪ್ರಹ್ಲಾದ್ ಜೋಶಿ

Kalpana Editor

ಸಾರಿಗೆ ನೌಕರರಿಗೆ ಸಿಹಿ ಸುದ್ದಿ – ವೇತನ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ..!

Kalpana Editor

ಜಿಲ್ಲೆಯಲ್ಲಿ ನಿರಂತರ ಮಳೆ; ಜಲಾವೃತ ಸೇತುವೆಯಿಂದ ಗ್ರಾಮಕ್ಕೆ ಸಂಪರ್ಕ ಕಡಿತ..!

Kalpana Editor