kranthikidi.com
ತಾಜಾಸುದ್ದಿರಾಜ್ಯಸಿನಿಮಾ

ಆರೋಗ್ಯವಾಗಿದ್ದೇನೆ, ಸುಳ್ಳು ಸುದ್ದಿ ಹಬ್ಬಿಸಿದವರನ್ನು ಸುಮ್ನೆ ಬಿಡಲ್ಲ – ನಟ ದೊಡ್ಡಣ್ಣ

ಇಂದು ಬೆಳಗ್ಗೆ ಕಿಡಿಗೇಡಿಗಳು ಹಿರಿಯ ನಟ ದೊಡ್ಡಣ್ಣ ಅವರು ಸಾವನ್ನಪ್ಪಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಇದೀಗ ಖುದ್ದು ದೊಡ್ಡಣ್ಣ ಅವರೇ, ನಾನು ಆರೋಗ್ಯವಾಗಿದ್ದೇನೆ, ಸುಳ್ಳು ಸುದ್ದಿ ಹಬ್ಬಿಸಿದವರನ್ನು ಸುಮ್ಮನೇ ಬಿಡಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವಿಡಿಯೋ ಮೂಲಕ ತಿಳಿಸಿರುವ ಅವರು, ಬೆಳಿಗ್ಗೆ ನಾನು ಎದ್ದೇಳುವ ಮುಂಚೆಯೇ ಯಾರೋ ಅವಿವೇಕಿಗಳು ನಾನು ನಿಧನ ಎಂದು ಸುದ್ದಿ ಹಬ್ಬಿಸಿದ್ದರು. ಅದು ಶುದ್ಧ ಸುಳ್ಳು. ನಾನು ಆರೋಗ್ಯವಾಗಿ, ನೆಮ್ಮದಿಯಾಗಿದ್ದೇನೆ. ಬೆಳಿಗ್ಗೆಯಿಂದಲೂ ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಎಲ್ಲರೂ ಬಿಟ್ಟುಬಿಡದೇ ಕರೆ ಮಾಡ್ತಿದ್ದಾರೆ.

ನಿಮ್ಮ ಆಶೀರ್ವಾದ ಇರುವವರೆಗೂ ನೂರುಕಾಲ ಚೆನ್ನಾಗಿರುತ್ತೇನೆ ಅಂತಾ ನಂಬಿದ್ದೇನೆ ಎಂದು ಹೇಳಿದ್ದಾರೆ. ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳನ್ನು ಸುಮ್ಮನೇ ಬಿಡಲ್ಲ. ಅವರನ್ನು ಬೆನ್ನತ್ತಿ ತಕ್ಕ ಶಿಕ್ಷೆ ಕೊಡಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು – ನಟ ಸ್ಪಷ್ಟನೆ..!

Related posts

ಇಂದು 2ನೇ ಆಷಾಢ ಶುಕ್ರವಾರ; ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡಿ

Kalpana Editor

ವೈಭವ್ ಸೂರ್ಯವಂಶಿ ಆರ್ಭಟಕ್ಕೆ ದಿಗ್ಗಜರ ದಾಖಲೆಗಳೇ ಧೂಳೀಪಟ..!

Kalpana Editor

ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಭದ್ರತಾ ಲೋಪ; ಚಿನ್ನ, ಅಮೂಲ್ಯ ವಜ್ರಾಭರಣ ನಾಪತ್ತೆ..!

Kalpana Editor