29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ; ಆರೆಂಜ್ ಅಲರ್ಟ್​..!

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.

ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಭಾರಿ ಇಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ : ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು – ನಟ ಸ್ಪಷ್ಟನೆ..!

ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಮಲೆನಾಡು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ : ಆರೋಗ್ಯವಾಗಿದ್ದೇನೆ, ಸುಳ್ಳು ಸುದ್ದಿ ಹಬ್ಬಿಸಿದವರನ್ನು ಸುಮ್ನೆ ಬಿಡಲ್ಲ – ನಟ ದೊಡ್ಡಣ್ಣ

ಈ ಭಾಗಗಳಲ್ಲಿ 30-40 ಕಿ.ಮೀ ವೇಗದ ಗಾಳಿ ಬೀಸಲಿದೆ. ಭಾರಿ ಮಳೆ ಮತ್ತು ಗಾಳಿಯ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಮತ್ತು ರೈತರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹಾಗೂ ಹಳೆಯ ಕಟ್ಟಡ/ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಹವಾಮಾನ ಇಲಾಖೆ ಸೂಚಿಸಿದೆ.

Related posts

ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿಗಳ ಸಂವಾದ, ಜನರ ಧ್ವನಿಯೇ ಸರ್ಕಾರದ ಧ್ವನಿ – ಸಿಎಂ ಡಿಕೆ ಶಿವಕುಮಾರ್

Kalpana Editor

ಕೇರಳದಿಂದ ಬಂಡೀಪುರ ತಗಾದೆ; ಸಂಚಾರ ನಿಷೇಧ ತೆರವಿಗೆ ಮಾತುಕತೆ – ಡಿಕೆಶಿ ಸಕರಾತ್ಮಕ ಸ್ಪಂದನೆ..!

Kalpana Editor

ಎಸ್​​ಐಆರ್ ಶಾಕ್; ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಡಿಲೀಟ್..!

kknewskannada1987@gmail.com