August 1, 2026
kranthikidi.com
ತಾಜಾಸುದ್ದಿರಾಜ್ಯ

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ಜೋಸೆಫ್‌ ವಿಜಯ್‌

ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಭೇಟಿ ನೀಡಿದ್ದಾರೆ. ವಿಜಯ್‌ ಅವರಿಗೆ ಹೂಗುಚ್ಛ ನೀಡಿ ಆಡಳಿತ ಮಂಡಳಿಯ ಟ್ರಸ್ಟಿಗಳು ಸ್ವಾಗತ ಕೋರಿದರು. ಮಂತ್ರಘೋಷದೊಂದಿಗೆ ಕ್ಷೇತ್ರದೊಳಗೆ ಅರ್ಚಕ ವೃಂದ ಬರಮಾಡಿಕೊಂಡಿತು.

ಶಲ್ಯ ಧರಿಸಿ ಆಗಮಿಸುವ ಮೂಲಕ ಸಿಎಂ ವಿಜಯ್‌ ದೇವಸ್ಥಾನದ ಶಿಷ್ಟಾಚಾರ ಪಾಲನೆ ಮಾಡಿದರು. ಪ್ರಧಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಸಂಕಲ್ಪ ಪೂಜೆ ನೆರವೇರಿಸಲಾಯಿತು. ಸಿಎಂ ವಿಜಯ್‌ ಸಂಕಲ್ಪ ಪೂಜೆ ಮಾಡಿದರು. ಶಕ್ತಿ ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್‌ ಪ್ರಾರ್ಥನೆ ಸಲ್ಲಿಸಿದರು. ಇದನ್ನೂ ಓದಿ : ಧರ್ಮಸ್ಥಳ ಕೇಸಲ್ಲಿ ಪ್ರಕಾಶ್‌ ರಾಜ್‌ ಹೆಸರು; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ – ಪ್ರಿಯಾಂಕ್‌ ಖರ್ಗೆ

ಸಂಕಲ್ಪ ಪೂಜೆ ಬಳಿಕ ದೀಪಾರಾಧನೆ ಮಾಡಲಾಯಿತು. ಈ ವೇಳೆ ಸಿಎಂಗೆ ಅರ್ಚಕರು ರಕ್ಷಾ ದಾರ ಕಟ್ಟಿದರು. ಪೂಜೆ ಬಳಿಕ ವಿಜಯ್‌ ದೇವಸ್ಥಾನದಿಂದ ಹೊರಟರು. ನೆಚ್ಚಿನ ನಟ, ಸಿಎಂ ನೋಡಲು ಅಭಿಮಾನಿಗಳು ಮುಗಿಬಿದ್ದರು. ಅವರನ್ನು ನಿಯಂತ್ರಿಸಲು ಪೊಲೀಸರು, ಭದ್ರತಾ ಸಿಬ್ಬಂದಿ ಹರಸಾಹಸ ಪಟ್ಟರು ಎನ್ನಲಾಗಿದೆ.

Related posts

ಕೆಂಪೇಗೌಡರು ಹುಟ್ಟಿದ್ದು, ಒಕ್ಕಲಿಗನಾಗಿ ಬೆಳೆದಿದ್ದು, ವಿಶ್ವಮಾನವನಾಗಿ; ಸಿಎಂ ಡಿ.ಕೆ. ಶಿವಕುಮಾರ್

Kalpana Editor

ಇಂದಿನಿಂದ ಮೋದಿ ವಿದೇಶಿ ಪ್ರವಾಸ – ಇಂಡೋನೇಷ್ಯಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ಗೆ ಭೇಟಿ..!

Kalpana Editor

ಕಾಯಿಲೆಯಿಂದ ಬಳಲುತ್ತಿದ್ದ, ಮಾಜಿ ಸಚಿವ ವೆಂಕಟರಮಣಪ್ಪ ನಿಧನ..!

Kalpana Editor