26.4 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿರಾಜ್ಯ

ಪ್ರವಾಸಿಗರಿಗೆ ಎಚ್ಚರಿಕೆ; ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಹುಲಿ ಓಡಾಟ..!

ಚಿಕ್ಕಮಗಳೂರು : ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಉರುಳಿಗೆ ಸಿಕ್ಕು ಗಾಯಗೊಂಡ ಹುಲಿ ಓಡಾಡುತ್ತಿದ್ದು, ಪ್ರವಾಸಿಗರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಜ್ರಾಗ್ರತೆಯಿಂದ ಇರುವಂತೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಹುಲಿಯ ಸೊಂಟದಲ್ಲಿ ಉರುಳು ನೇತಾಡುತ್ತಿದೆ. ಇದರಿಂದ ಗಾಯಗೊಂಡ ಹುಲಿ, ನೋವಿನಿಂದಲೇ ಕಳೆದ ನಾಲ್ಕೈದು ದಿನಗಳಿಂದ ಓಡಾಡುತ್ತಿದೆ. ಆ ನೋವಿನಲ್ಲೂ ಜಿಂಕೆ ಹಾಗೂ ಕಡವೆಯನ್ನು ಹುಲಿ ಬೇಟೆಯಾಡಿದೆ. ಸುತ್ತಮುತ್ತ ಪ್ರಾಣಿಗಳ ಕಳೆಬರಹ ಪತ್ತೆಯಾಗಿವೆ.

ಮೂರ್ನಾಲ್ಕು ದಿನದಿಂದ ಹುಲಿ ಸೆರೆಗೆ ಅರಣ್ಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಕ್ಯಾಮೆರಾಗಳನ್ನು ಅಳವಡಿಸಿ ಹುಲಿಯ ಚಲನವಲನಗಳನ್ನು ಗಮನಿಸುತ್ತಿದ್ದಾರೆ. ತೋಟದ ಕಾರ್ಮಿಕರು ಕೆಲಸಕ್ಕೆ ಹೋಗದಂತೆ ಅರಣ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಅಲ್ಲದೇ ರಸ್ತೆಯಲ್ಲಿ ಓಡಾಡಲು ಪಂಡರವಳ್ಳಿ, ಕೊಳಗಾಮೆ, ಏಳುನೂರ್ ಖಾನ್ ಗ್ರಾಮಸ್ಥರು ಹೆದರುತ್ತಿದ್ದಾರೆ. ಉರುಳು ಹಾಕಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪರಿಸರವಾದಿಗಳು, ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ : ಕರಾವಳಿಯಲ್ಲಿ ಭಾರೀ ಮಳೆ; ಯಾಣ ಪ್ರವಾಸಿ ತಾಣಕ್ಕೆ ನಿರ್ಬಂಧ..!

Related posts

ವಯನಾಡು ಬೆಟ್ಟ ಕುಸಿತ; 48 ಗಂಟೆಗಳ ಕಾರ್ಯಾಚರಣೆ ಯಶಸ್ವಿ – ಬೆಟ್ಟ, ಬಂಡೆಗಳ ತೆರವು..!

Kalpana Editor

ತಿಮ್ಮಪ್ಪನಿಗೆ ಮುಡಿ ಕೊಟ್ಟ ಹಾರ್ದಿಕ್ ಪಾಂಡ್ಯ – ವಿಶೇಷ ಪೂಜೆ..!

Kalpana Editor

ಕುಟುಂಬ ಸಮೇತರಾಗಿ, ಚೆನ್ನಮ್ಮ ಅವರ ಅಂತಿಮ ದರ್ಶನ ಪಡೆದ್ರು ಸಿಎಂ ಡಿಕೆಶಿ

Kalpana Editor