August 4, 2026
kranthikidi.com
ತಾಜಾಸುದ್ದಿರಾಜ್ಯ

ಸಿಎಂ ವಿಜಯ್ ವಿಚ್ಛೇದನ ಕೇಸ್‌; ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

ತಮಿಳುನಾಡು ಮುಖ್ಯಮಂತ್ರಿ, ಖ್ಯಾತ ನಟ ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಂ ನಡುವಿನ ವಿಚ್ಛೇದನ, ಪ್ರಕರಣದ ವಿಚಾರಣೆಯನ್ನು ಚೆಂಗಲ್ಪಟ್ಟು ಮಹಿಳಾ ನ್ಯಾಯಾಲಯವು ಆಗಸ್ಟ್ 7ಕ್ಕೆ ಮುಂದೂಡಿದೆ. ಜೂನ್ 15ರ ಸೋಮವಾರದಂದು ನಡೆದ ವಿಚಾರಣೆಗೆ ಕೋರ್ಟ್ ಸೂಚನೆಯಂತೆ ವಿಜಯ್ ಮತ್ತು ಸಂಗೀತಾ ಖುದ್ದಾಗಿ ಹಾಜರಾಗಿದ್ದರು. ಬೆಳಿಗ್ಗೆ 10.30ರ ಸುಮಾರಿಗೆ ಆರಂಭವಾದ ವಿಚಾರಣೆಯಲ್ಲಿ ದಂಪತಿ ಉಪಸ್ಥಿತರಿದ್ದರಾದರೂ, ಯಾವುದೇ ಪ್ರಮುಖ ನಿರ್ಧಾರ ಅಥವಾ ಸಂಧಾನ ಸೂತ್ರಗಳು ಮೂಡಿಬರದೆ ಸೆಷನ್ ಮುಕ್ತಾಯಗೊಂಡಿತು. ತಮ್ಮ 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಧಿಕೃತವಾಗಿ ತೆರೆ ಎಳೆಯಲು ಸಂಗೀತಾ ಅವರು ವಿಚ್ಛೇದನ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

2024ರ ಆಗಸ್ಟ್‌ನಿಂದ 2025ರ ಫೆಬ್ರವರಿ ನಡುವೆ ಲೀಗಲ್ ನೋಟಿಸ್‌ಗಳು ಮತ್ತು ವೈಯಕ್ತಿಕ ಮಾತುಕತೆಗಳ ಮೂಲಕ ಸಂಬಂಧವನ್ನು ಸರಿಪಡಿಸಲು ಸಂಗೀತಾ ಪ್ರಯತ್ನಿಸಿದ್ದರು. ಆದರೆ 2025ರ ನವೆಂಬರ್ 9ರಂದು ನಡೆದ ಕೊನೆಯ ಭೇಟಿಯೂ ವಿಫಲವಾಯಿತು. ಈ ಹಿನ್ನೆಲೆಯಲ್ಲಿ ಇಬ್ಬರ ನಡುವಿನ ದಾಂಪತ್ಯ ಸಂಬಂಧ ಸಂಪೂರ್ಣವಾಗಿ ಹದಗೆಟ್ಟಿದ್ದು, ಕೇವಲ ಕಾಗದದ ಮೇಲಷ್ಟೇ ಉಳಿದಿದೆ ಎಂದು ಅವರು ಕೋರ್ಟ್‌ಗೆ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಏಪ್ರಿಲ್ 20ರಂದು ನಡೆದಿದ್ದ ಮೊದಲ ವಿಚಾರಣೆಗೆ ವಿಜಯ್ ಮತ್ತು ಸಂಗೀತಾ ಇಬ್ಬರೂ ಗೈರಾಗಿದ್ದರು. ಕೇವಲ ಅವರ ಪರ ವಕೀಲರು ಮಾತ್ರ ಹಾಜರಾಗಿದ್ದರು. ಸೆಲೆಬ್ರಿಟಿಗಳಾಗಿರುವುದರಿಂದ ಭದ್ರತೆ ಸಮಸ್ಯೆಗಳನ್ನು ಉಲ್ಲೇಖಿಸಿ ಆನ್‌ಲೈನ್ ಮೂಲಕ ಹಾಜರಾಗಲು ಇಬ್ಬರ ಪರ ವಕೀಲರು ಅನುಮತಿ ಕೋರಿದ್ದರು. ಆದರೆ ನ್ಯಾಯಾಲಯವು ಈ ಮನವಿಯನ್ನು ತಿರಸ್ಕರಿಸಿ, ಜೂನ್ 15ರ ವಿಚಾರಣೆಗೆ ಇಬ್ಬರೂ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಿರಬೇಕು ಎಂದು ಖಡಕ್ ಆದೇಶ ನೀಡಿತ್ತು. ಅದರಂತೆ ಸೋಮವಾರ ಇಬ್ಬರೂ ಕೋರ್ಟ್‌ಗೆ ಬಂದಿದ್ದರು. ಮುಂದಿನ ವಿಚಾರಣೆ ಆಗಸ್ಟ್ 7ರಂದು ನಡೆಯಲಿದೆ. ಇದನ್ನೂ ಓದಿ : ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ; ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ..!

Related posts

ಕದನ ವಿರಾಮದ ನಡುವೆ ಮತ್ತೆ ಲೆಬನಾನ್ ಮೇಲೆ ಇಸ್ರೇಲ್ ದಾಳಿ; 5 ಮಂದಿ ಸಾವು..!

Kalpana Editor

ಲೂಟಿ ವಿವಾದದ ಬೆನ್ನಲ್ಲೇ; ಅಂಜನಾದ್ರಿಯಲ್ಲೂ ಹುಂಡಿ ಎಣಿಕೆ ಕಾರ್ಯದಲ್ಲಿ ವಿಳಂಬ..!

Kalpana Editor

ಮಾರುವೇಷ ಧರಿಸಿ, ಬಸ್‌ಗಳಲ್ಲಿ ಸಚಿವ ಬೈರತಿ ಸುರೇಶ್‌ ಚೆಕ್ಕಿಂಗ್‌..!

Kalpana Editor