28.6 C
ಬೆಂಗಳೂರು
June 15, 2026
kranthikidi.com
ತಾಜಾಸುದ್ದಿರಾಜ್ಯ

RSS ನೋಂದಣಿ ಬಗ್ಗೆ ಮೋಹನ್ ಭಾಗವತ್​ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

ಬೆಂಗಳೂರು : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್​​ಎಸ್​​ಎಸ್ ನೋಂದಣಿ ವಿಚಾರವನ್ನು ಎತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಇದರ ನಡುವೆ ಇದೀಗ ಪ್ರಿಯಾಂಕ್ ಖರ್ಗೆ, ಇದೇ ವಿಚಾರವಾಗಿ ಆರ್​​ಎಸ್​​ಎಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದು, ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡುವಂತೆ ಆಗ್ರಹಿಸಿದ್ದಾರೆ.

ಇಷ್ಟು ದೊಡ್ಡ ಸಂಘಟನೆ ಯಾವ ಕಾನೂನಿನ ಆಧಾರದಲ್ಲಿ ನಿರ್ವಹಿಸುತ್ತಿದೆ. ಏಕೆ ನೋಂದಾಯಿತ ಕಾನೂನು ಬದ್ಧ ಸಂಸ್ಥೆಯಾಗಿ ಕಾರ್ಯ ನಿರ್ವಹಿಸ್ತಿಲ್ಲ. ಈ ಬಗ್ಗೆ ವಿವರಣೆ ನೀಡುವಂತೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಕಳೆದ ವರ್ಷವೂ ಸಹ ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಮೋಹನ್ ಭಾಗವತ್ ಅವರಿಗೆ ಆರ್​​​ಎಸ್​​ಎಸ್​​​ ಬಗ್ಗೆ ಕೆಲವೊಂದಿಷ್ಟು ವಿವರಣೆ ಕೇಳಿದ್ದರು. ಇದೀಗ ಪತ್ರದ ಮೂಲಕ ಮತ್ತೆ ಸಂಘದ ಕೆಲವೊಂದಿಷ್ಟು ವಿಚಾರಗಳ ಬಗ್ಗೆ ವಿವರಣೆ ನೀಡುವಂತೆ ಆಗ್ರಹಿಸಿದ್ದಾರೆ.

ಸಂಘದ ಕಾರ್ಯಚಟುವಟಿಕೆಗಳು, ಸಂಘಕ್ಕೆ ಬರುವ ಆದಾಯದ ಮೂಲ, ಆಸ್ತಿಪಾಸ್ತಿ ಬಗ್ಗೆ ಬಹಿರಂಗಪಡಿಸುವಂತೆ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರೀಯತೆ, ಶಿಸ್ತು ಮತ್ತು ಕರ್ತವ್ಯದ ಕುರಿತು ನಿರಂತರವಾಗಿ ಮಾತನಾಡುವ ಸಂಘಟನೆಯೊಂದು ಪಾರದರ್ಶಕತೆ, ಕಾನೂನಿನ ಅನುಸರಣೆ ಮತ್ತು ಭಾರತದ ಸಂವಿಧಾನದ ಬಗೆಗಿನ ಗೌರವವನ್ನೂ ಅಷ್ಟೇ ದೃಢವಾಗಿ ಪ್ರದರ್ಶಿಸಬೇಕು. ಸಾಮಾನ್ಯ ಭಾರತೀಯರು ನಿಯಮಗಳನ್ನು ಪಾಲಿಸಬೇಕು.

ತಾನು ಮಾತ್ರ ಅದೇ ನಿಯಮಗಳಿಂದ ವಿನಾಯಿತಿ ಪಡೆದುಕೊಳ್ಳುವ ನೈತಿಕ ಹಕ್ಕು ಆರ್‌ಎಸ್‌ಎಸ್‌ಗೆ ಇಲ್ಲ. ಕಾರ್ಮಿಕರು, ಸಣ್ಣ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು, ಎನ್‌ಜಿಒಗಳು, ಟ್ರಸ್ಟ್‌ಗಳು, ಕಂಪನಿಗಳು ಮತ್ತು ನಾಗರಿಕರು ನೋಂದಣಿ, ಬಹಿರಂಗಪಡಿಸುವಿಕೆ, ಲೆಕ್ಕಪರಿಶೋಧನೆ ಮತ್ತು ತೆರಿಗೆ ಪಾವತಿಗೆ ಬದ್ಧರಾಗಿದ್ದಾರೆ. ಆದ್ದರಿಂದ ಆರ್‌ಎಸ್‌ಎಸ್ ಕೂಡ ದೇಶದ ಕಾನೂನಿಗೆ ಮಾದರಿಯಾಗಿ ಬದ್ಧವಾಗಿರಬೇಕು ಎಂದಿದ್ದಾರೆ.

ಆರ್‌ಎಸ್‌ಎಸ್ ತನ್ನ ಶತಮಾನೋತ್ಸವದ ಈ ಸಂದರ್ಭವನ್ನು ಕೇವಲ ಆಚರಣೆಗಾಗಿ ಮಾತ್ರವಲ್ಲ. ಸಾಂವಿಧಾನಿಕ ಆತ್ಮಾವಲೋಕನಕ್ಕಾಗಿಯೂ ಬಳಸಿಕೊಳ್ಳಬೇಕೆಂದು ನಾವು ಆಗ್ರಹಿಸುತ್ತೇವೆ. ಭಾರತದ ಈ ನೂರನೇ ವರ್ಷದಲ್ಲಿ ದೇಶಕ್ಕೆ ಆರ್‌ಎಸ್‌ಎಸ್ ನೀಡಬಹುದಾದ ಅತ್ಯುತ್ತಮ ಗೌರವವೆಂದರೆ, ತನ್ನನ್ನು ತಾನು ನೋಂದಾಯಿಸಿಕೊಳ್ಳುವುದು, ತನ್ನ ಚಟುವಟಿಕೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಬಹಿರಂಗಪಡಿಸುವುದು.

ಅನ್ವಯವಾಗುವ ಎಲ್ಲ ತೆರಿಗೆಗಳನ್ನು ಪಾವತಿಸುವುದು ಮತ್ತು ಭಾರತೀಯ ಕಾನೂನಿನ ಚೌಕಟ್ಟಿನೊಳಗೆ ಪಾರದರ್ಶಕ ಹಾಗೂ ಜವಾಬ್ದಾರಿಯುತ ಸಂಘಟನೆಯಾಗಿ ಕಾರ್ಯನಿರ್ವಹಿಸುವುದು. ನಿಮ್ಮ ಅಧಿಕೃತ ಪ್ರತಿನಿಧಿಗಳನ್ನು ಕಳುಹಿಸಿ ಮೇಲಿನ ವಿಷಯಗಳ ಕುರಿತು ಚರ್ಚೆ ನಡೆಸಲು ನಾವು ಔಪಚಾರಿಕ ಪ್ರತಿಕ್ರಿಯೆಯನ್ನು ನಿರೀಕ್ಷಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ : ಶಾಸಕ ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು..!

Related posts

ರಾಷ್ಟ್ರೀಯ ಹೆದ್ದಾರಿ, ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ..!

Kalpana Editor

ಕೆಪಿಎಸ್‌ಸಿ ನೇಮಕಾತಿ; 2024ನೇ ಸಾಲಿನ ಈ ಹುದ್ದೆಗಳಿಗೆ ಅರ್ಜಿ ಹಾಕಿರುವವರಿಗೆ ಮಹತ್ವದ ಸೂಚನೆ..!

Kalpana Editor

ಮೊದಲ ಓವರ್​ ನಂದೇ..! ಆರ್‌ಸಿಬಿ ಫ್ಯಾನ್ಸ್​ಗೆ ಶಾಕ್ ನೀಡಿದ ವಿರಾಟ್ ಕೊಹ್ಲಿ

Kalpana Editor