ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ಹಾವಳಿಗೆ ಇನ್ನೂ ಮುಕ್ತಿ ಸಿಕ್ಕಿಲ್ಲ. ತ್ಯಾಜ್ಯ ವಿಲೇವಾರಿಯಲ್ಲಿ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಎಡವಟ್ಟು ಮಾಡಿದೆ. ಕಾಡಂಚಿನಲ್ಲಿ ರಾಶಿ ರಾಶಿ ಪ್ಲಾಸ್ಟಿಕ್ ತಾಜ್ಯ ಬಿದ್ದಿದ್ದು, ಕಾಡು ಪ್ರಾಣಿಗಳ ಜೀವಕ್ಕೆ ಸಂಚಕಾರ ಕುರಿತು ವರದಿಯಾಗಿದೆ. ತಕ್ಷಣ ಎಚ್ಚೆತ್ತ ಪ್ರಾಧಿಕಾರ ತರಾತುರಿಯಲ್ಲಿ ಕಸ ವಿಲೇವಾರಿ ಮಾಡಿದೆ.
ಆದರೆ, ತಾಜ್ಯ ವಿಲೇವಾರಿ ಮಾಡುವ ಭರದಲ್ಲಿ ಪ್ರಾಧಿಕಾರ ಎಡವಟ್ಟು ಮಾಡಿದ್ದು, ಅವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲಾಗಿದೆ. ಹಳ್ಳ ತೆಗೆದು ಪ್ಲಾಸ್ಟಿಕ್ ತ್ಯಾಜ್ಯವನ್ನು ಹೂತು ಮೇಲೆ ಮಣ್ಣು ಸುರಿಯಲಾಗಿದೆ. ಮತ್ತಷ್ಟು ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಬೆಂಕಿ ಹಚ್ಚಿ ಸುಟ್ಟು ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ.
ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಜೆಸಿಬಿ ಮೂಲಕ ಮಣ್ಞು ಹಾಕಿ ಭೂಮಾಲಿನ್ಯಕ್ಕೆ ಎಡೆಮಾಡಿಕೊಟ್ಟಿದೆ. ತ್ಯಾಜ್ಯ ವಸ್ತುಗಳನ್ನು ರೀಸೈಕ್ಲಿಂಗ್ ಮಾಡದೇ ಪ್ರಾಧಿಕಾರ ನಿರ್ಲಕ್ಷ್ಯ ವಹಿಸಿದೆ. ಕಾಡಂಚಿನಲ್ಲಿ ಭೂಮಾಲಿನ್ಯ ಮಾಡಿ ಅವಾಂತರ ಸೃಷ್ಟಿಸಿದೆ. ಇದನ್ನೂ ಓದಿ : ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಾಳಿ; ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ..!
