August 26, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಪರಿಷತ್‌ ಚುನಾವಣೆ; ಬಿಡದಿಯ ವಂಡರ್‌ ಲಾ ರೆಸಾರ್ಟ್‌ನಲ್ಲಿ ಇಂದು ಸಿಎಲ್‌ಪಿ ಸಭೆ..!

ರಾಮನಗರ : ರಾಜ್ಯಸಭಾ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷ ತನ್ನ ಮತಗಳ ರಕ್ಷಣೆಗಾಗಿ ರೆಸಾರ್ಟ್ ಮೊರೆಹೋಗಿದ್ದು. ಇಂದು ಬಿಡದಿಯ ವಂಡರ್ ಲಾ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ರೆಸಾರ್ಟ್‌ನಲ್ಲೇ ವಾಸ್ತವ್ಯ ಹೂಡಲಿರುವ ಕಾಂಗ್ರೆಸ್ ಶಾಸಕರು, ಜೂ.18ರಂದು ರೆಸಾರ್ಟ್‌ನಿಂದಲೇ ನೇರವಾಗಿ ವಿಧಾನಸೌದಕ್ಕೆ ತೆರಳಿ ಮತದಾನ ಮಾಡಲಿದ್ದಾರೆ. ಚುನಾವಣೆ ಹಿನ್ನೆಲೆ ಇಂದು ಸಂಜೆ 6:15ಕ್ಕೆ ಬಿಡದಿಯ ವಂಡರ್ ಲಾ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ಜರುಗಲಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ಸೇರಿ ಕಾಂಗ್ರೆಸ್‌ನ ಎಲ್ಲಾ ಸಚಿವರು, ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ. ಸಂಜೆ 5 ಗಂಟೆಗೆ ರೆಸಾರ್ಟ್‌ಗೆ ಕಾಂಗ್ರೆಸ್ ಶಾಸಕರು ಆಗಮಿಸಲಿದ್ದಾರೆ.

ಸಿಎಲ್‌ಪಿ ಸಭೆ ಬಳಿಕ ರೆಸಾರ್ಟ್‌ನಲ್ಲೇ ಶಾಸಕರು, ಸಚಿವರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ವಂಡರ್ ಲಾ ರೆಸಾರ್ಟ್‌ನಲ್ಲಿ ಶಾಸಕ ಹೆಚ್‌.ಸಿ.ಬಾಲಕೃಷ್ಣ ಅವರು 130 ರೂಂಗಳನ್ನ ಬುಕ್ ಮಾಡಿದ್ದಾರೆ. ನಾಳೆ ರೆಸಾರ್ಟ್‌ನಲ್ಲೇ ವಾಸ್ತವ್ಯ ಹೂಡಿ ಜೂ.18ರಂದು ಬೆಳಗ್ಗೆ ಇಲ್ಲಿಂದಲೇ ನೇರವಾಗಿ ವಿಧಾನಸೌದಕ್ಕೆ ತೆರಳಿ ಮತದಾನ ಮಾಡಲಿದ್ದಾರೆ.

ರೆಸಾರ್ಟ್‌ಗೆ ಸಿಎಂ ಆಗಮನ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 500ಕ್ಕೂ ಹೆಚ್ಚು ಪೊಲೀಸರ ನಿಯೋಜಿಸಲಾಗಿದೆ. ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟ ಹಿನ್ನೆಲೆ ಸಿಎಂ ಸಾಗುವ ಮಾರ್ಗದಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ 6 ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ : ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್‌ ಹಾವಳಿಗೆ ಇನ್ನೂ ಮುಕ್ತಿ ಸಿಕ್ಕಿಲ್ಲ…!

Related posts

ಖಮೇನಿ ಅಂತ್ಯಕ್ರಿಯೆಗೂ ಮುನ್ನವೇ ಇರಾನ್‌ ಮೇಲೆ ವಿನಾಶಕಾರಿ ದಾಳಿ; ಇನ್ನೂ ಪರಿಸ್ಥಿತಿ ಕೆಟ್ಟದಾಗಿರಲಿದೆ – ಟ್ರಂಪ್‌

Kalpana Editor

ಶೃಂಗೇರಿಯಲ್ಲೂ ಭೂಕುಸಿತದ ಆತಂಕ; ಬಿರುಕುಗೊಂಡ ಬೃಹತ್ ತಡೆಗೋಡೆ..!

Kalpana Editor

ಹೆಚ್​​.ಸಿ. ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ; ರಾಜ್ಯಪಾಲರಿಗೆ ದೂರು ಸಲ್ಲಿಕೆ..!

Kalpana Editor