July 12, 2026
kranthikidi.com
ತಾಜಾಸುದ್ದಿರಾಜ್ಯ

ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿ ಎಂದ ಹೈಕೋರ್ಟ್

ಬೆಂಗಳೂರು : ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಆದ್ರೆ, ದೂರು ದಾಖಲಾಗುವ ಮುನ್ನವೇ ದಾವಣಗೆರೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದ್ದು, ಇದಕ್ಕೆ ಕರ್ನಾಟಕ ಹೈಕೋರ್ಟ್ ಅಸಮಾಧನ ವ್ಯಕ್ತಪಡಿಸಿದೆ.

ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಬಾಲಕನ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ದೂರು ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ಕೊಟ್ಟಿದ್ದಾರೆ. ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿಯಾಗಿದೆ. ಮೇಲ್ನೋಟಕ್ಕೆ ನಿರೀಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.

ಸ್ವಾಮೀಜಿ ವಿರುದ್ಧ ಗಂಭೀರ ಸೆಕ್ಷನ್​​​ಗಳುಳ್ಳ ಪೋಕ್ಸೋ ಕೇಸ್ ದಾಖಲಾಗಿದೆ. ಆದರೂ ಮೇಲ್ನೋಟಕ್ಕೆ ನಿರೀಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ವಚನಾನಂದ ಸ್ವಾಮೀಜಿಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ಜೂನ್ 23ಕ್ಕೆ ನಿಗದಿಪಡಿಸಿದೆ. ಇದನ್ನೂ ಓದಿ : ಬೆಳೆ ಸಾಲ ಸಂಪೂರ್ಣ ಮನ್ನಾ – ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌

Related posts

ಬಿಡದಿ ಭೂಸ್ವಾಧೀನ ವಿರೋಧಿಸಿ, ರಾಹುಲ್ ಗಾಂಧಿಗೆ ನೂರಾರು ರೈತರಿಂದ ಪತ್ರ ಚಳುವಳಿ..!

Kalpana Editor

ಧರ್ಮಸ್ಥಳ ಕೇಸಲ್ಲಿ ಪ್ರಕಾಶ್‌ ರಾಜ್‌ ಹೆಸರು; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ – ಪ್ರಿಯಾಂಕ್‌ ಖರ್ಗೆ

Kalpana Editor