August 26, 2026
kranthikidi.com
ತಾಜಾಸುದ್ದಿರಾಜ್ಯ

ಬಾಲಕನ ಮೇಲೆ ಬೀದಿನಾಯಿಗಳ ದಾಳಿ; ಕುತ್ತಿಗೆ, ಕೈಗೆ ಗಾಯ…!

ತುಮಕೂರು : ದೇವಸ್ಥಾನದ ಬಳಿ ತೆರಳುತ್ತಿದ್ದ, ಬಾಲಕನ ಮೇಲೆ ಆರೇಳು ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಜೋಗಿಹಳ್ಳಿಯಲ್ಲಿ ನಡೆದಿದೆ.

ಐದು ವರ್ಷದ ಬಾಲಕ ಊರಿನ ಆಂಜನೇಯ ದೇವಸ್ಥಾನದ ಬಳಿ ತೆರಳುತಿದ್ದ ವೇಳೆ ಏಕಾಏಕಿ ಬೀದಿ ನಾಯಿಗಳು ದಾಳಿ ನಡೆಸಿ ಕುತ್ತಿಗೆಗೆ ಬಾಯಿ ಹಾಕಿವೆ. ಕೂಡಲೇ ಸ್ಥಳದಲ್ಲಿ ವಾಕಿಂಗ್ ಮಾಡತ್ತಿದ್ದವರು ಬಾಲಕನ ರಕ್ಷಣೆ ಮಾಡಿದ್ದಾರೆ.

ಬೀದಿನಾಯಿಗಳ ದಾಳಿಯಿಂದಾಗಿ ಬಾಲಕನ ಕುತ್ತಿಗೆ, ಕೈ ಹಾಗೂ ಬೆನ್ನಿನ ಭಾಗಕ್ಕೆ ಗಾಯಗಳಾಗಿವೆ. ಗಾಯಾಳು ಬಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ : ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ; ಹೆಚ್‌ಡಿಕೆ

Related posts

ಪ್ರಸಾದದ ಗುಣಮಟ್ಟ ಸುಧಾರಿಸಲು ಮೈಸೂರಿನ ಸಂಸ್ಥೆ ಜೊತೆ ಟಿಟಿಡಿ ಒಪ್ಪಂದ..!

Kalpana Editor

ಕೆಂಪುಕೋಟೆಗೆ ಬಾಂಬ್ ಬೆದರಿಕೆ; ಸುದೀರ್ಘ ತಪಾಸಣೆ – ಹುಸಿ ಕರೆ ಎಂದು ದೃಢ..!

Kalpana Editor

ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಪಟುಗಳಿಗೆ ಲಕ್ಷ ಲಕ್ಷ ಪ್ರೋತ್ಸಾಹಧನ..!

Kalpana Editor