27.8 C
ಬೆಂಗಳೂರು
October 11, 2026
kranthikidi.com
ತಾಜಾಸುದ್ದಿರಾಜ್ಯ

ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಹಣ ಸಂಗ್ರಹ..!

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಹಣ ಸಂಗ್ರಹವಾಗಿದೆ. ವೀಕೆಂಡ್ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಹರಿವು ಹೆಚ್ಚಾಗಿದ್ದು, ಕೇವಲ 27 ದಿನಗಳಲ್ಲಿ ದಾಖಲೆಯ 2,73,57,105 ರೂಪಾಯಿ ನಗದು ಸಂಗ್ರಹವಾಗಿರುವ ಮಾಹಿತಿ ಲಭ್ಯವಾಗಿದೆ.

ಕೋಟಿ ಕೋಟಿ ಹಣದ ಜೊತೆಗೆ 44 ಗ್ರಾಂ ಚಿನ್ನ ಹಾಗೂ 977 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ವಿಶೇಷವೆಂದರೆ, ಎಣಿಕೆ ವೇಳೆ ಏಳು ವಿದೇಶಿ ನೋಟುಗಳು ಹಾಗೂ ನಿಷೇಧಿತ ಹತ್ತು 2,000 ಮುಖಬೆಲೆಯ ಹಳೆಯ ನೋಟುಗಳು ಪತ್ತೆಯಾಗಿವೆ. ಮಲೆ ಮಹದೇಶ್ವರ ಪ್ರಾಧಿಕಾರದ ಸಿಬ್ಬಂದಿ ಸಮ್ಮುಖದಲ್ಲಿ ಈ ಬೃಹತ್ ಮೊತ್ತದ ಹುಂಡಿ ಎಣಿಕೆ ಕಾರ್ಯ ಯಶಸ್ವಿಯಾಗಿ ಜರುಗಿದೆ ಎನ್ನಲಾಗಿದೆ. ಇದನ್ನೂ ಓದಿ : ಬಾಲಕನ ಮೇಲೆ ಬೀದಿನಾಯಿಗಳ ದಾಳಿ; ಕುತ್ತಿಗೆ, ಕೈಗೆ ಗಾಯ…!

Related posts

ಇಂದಿನಿಂದ ವಾಣಿಜ್ಯ ಸಿಲಿಂಡರ್ ದರದಲ್ಲಿ 183.50 ರೂ ಇಳಿಕೆ..!

Kalpana Editor

ಫಾರ್ಮ್‌ ಹೌಸ್ ಗೇಟ್ ಬಳಿ ನಾಡಬಾಂಬ್ ಸ್ಫೋಟ; ವಕೀಲನ ಸ್ಥಿತಿ ಗಂಭೀರ..!

Kalpana Editor

ಗ್ರಾಹಕರಿಗೆ ಶಾಕ್‌ – ಗೃಹಬಳಕೆ ಸಿಲಿಂಡರ್ ಬೆಲೆ 29 ರೂ. ಏರಿಕೆ..!

Kalpana Editor