August 27, 2026
kranthikidi.com
ತಾಜಾಸುದ್ದಿರಾಜ್ಯ

ನಾಗಸಂದ್ರ ಮೆಟ್ರೋ ಸ್ಟೇಷನ್‌ನಲ್ಲಿ ಅಗ್ನಿ ಅವಘಡ; ಪ್ರಯಾಣಿಕರು ಸುರಕ್ಷಿತ..!

ಬೆಂಗಳೂರು : ಮಾದಾವರ – ರೇಷ್ಮೆ ಸಂಸ್ಥೆ ಮಾರ್ಗದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನಿಲ್ದಾಣದ ಎಮರ್ಜೆನ್ಸಿ ಎಕ್ಸಿಟ್‌ ಬಳಿ ಈ ಅನಾಹುತ ಸಂಭವಿಸಿದೆ.

ತುರ್ತು ನಿರ್ಗಮನದ ಬಳಿಯ ಸೂಚನಾ ಫಲಕದಲ್ಲಿ ಶಾರ್ಟ್‌ಸರ್ಕ್ಯೂಟ್ ಸಂಭವಿಸಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ. ಇಂದು ಮಧ್ಯಾಹ್ನ ವೇಳೆ ಈ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ. ಸಣ್ಣ ಪ್ರಮಾಣದ ಅಗ್ನಿ ಅವಘಡ ಇದಾಗಿದ್ದು, ಅಗ್ನಿಶಾಮಕ ತಂಡ ಬೆಂಕಿ ನಂದಿಸಿದೆ.

ಅಗ್ನಿ ಅವಘಡದಲ್ಲಿ ಯಾರಿಗೂ ಸಮಸ್ಯೆಯಾಗಿಲ್ಲ. ನಿಲ್ದಾಣದಲ್ಲಿದ್ದ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಮೆಟ್ರೋ ರೈಲು ಸಂಚಾರ ಸೇವೆಗಳಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಎಲ್ಲಾ ಮೆಟ್ರೋ ಸೇವೆಗಳು ಎಂದಿನಂತೆ ಸುಗಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ : ನೀಟ್ ಅಭ್ಯರ್ಥಿಗಳಿಗೆ ತೊಂದರೆ ತಪ್ಪಿಸಲು ಏರ್‌ಪೋರ್ಟ್‌ನಲ್ಲೇ ಕಾಲ ಕಳೆದ ಪ್ರಧಾನಿ ಮೋದಿ

Related posts

ಕನಕಪುರಕ್ಕೆ ಡಿಕೆಶಿ ಭೇಟಿ: ನಿಮ್ಮೊಂದಿಗೆ ಸದಾ ಇರ್ತೆನೆ ಎಂದ ಸಿಎಂ

Kalpana Editor

ಹುಬ್ಬಳ್ಳಿ-ಧಾರವಾಡ ಬೃಹತ್ ಮಹಾನಗರ ಪಾಲಿಕೆ ಠರಾವು ರದ್ದು..!

Kalpana Editor

ಬಸ್ ಟಿಕೆಟ್ ದರ ಏರಿಕೆಯ ಸುಳಿವು ನೀಡಿದ ಬೈರತಿ ಸುರೇಶ್

Kalpana Editor