August 26, 2026
kranthikidi.com
ತಾಜಾಸುದ್ದಿರಾಜ್ಯ

ಬೆನ್ನು ನೋವು ಎಂದಿದ್ದ ನಟ ದರ್ಶನ್‌ಗೆ ಅಲೋಕ್ ಕುಮಾರ್ ಸಲಹೆ – ಜೈಲಿನಲ್ಲಿ ಪ್ರಾಣಾಯಾಮ, ಶವಾಸನ..!

ಬೆಂಗಳೂರು : ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲೂ ವಿಶೇಷ ಯೋಗಾಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕೊಲೆ ಪ್ರಕರಣದ ಆರೋಪಿಯಾಗಿ, ಜೈಲು ಪಾಲಾಗಿರುವ ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಈ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿ ಗಮನ ಸೆಳೆದಿದ್ದಾರೆ. ಕಾರಾಗೃಹದ ಎಲ್ಲಾ ಕೈದಿಗಳಿಗಾಗಿ ಸಾಮೂಹಿಕ ಯೋಗಾಭ್ಯಾಸ ಹಮ್ಮಿಕೊಳ್ಳಲಾಗಿತ್ತು. ಆದರೆ, ತಮಗೆ ತೀವ್ರ ಬೆನ್ನು ನೋವಿನ ಸಮಸ್ಯೆ ಇದೆ ಎಂದು ಹೇಳಿದ್ದ ನಟ ದರ್ಶನ್, ಆರಂಭದಲ್ಲಿ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲು ನಿರಾಕರಿಸಿದ್ದರು.

ಈ ವಿಷಯ ತಿಳಿದ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಡಿಜಿ ಅಲೋಕ್ ಕುಮಾರ್ ಅವರು ದರ್ಶನ್ ಅವರನ್ನು ಕಚೇರಿಗೆ ಕರೆಸಿಕೊಂಡು ಮಾತನಾಡಿದರು.”ಬೆನ್ನು ನೋವಿನ ಸಮಸ್ಯೆ ಇದ್ದರೆ ಯೋಗ ಮಾಡುವುದರಿಂದಲೇ ಅದು ಗುಣವಾಗುತ್ತದೆ, ಆರೋಗ್ಯಕ್ಕೂ ತುಂಬಾ ಒಳ್ಳೆಯದು” ಎಂದು ದರ್ಶನ್ ಅವರಿಗೆ ಮನವರಿಕೆ ಮಾಡಿಕೊಟ್ಟು, ಯೋಗ ಮಾಡುವಂತೆ ಸಲಹೆ ನೀಡಿದರು.

ಡಿಜಿ ಅವರ ಸಲಹೆಯ ಬೆನ್ನಲ್ಲೇ ಯೋಗ ಮಾಡಲು ಒಪ್ಪಿದ ದರ್ಶನ್, ಜೈಲಿನ ಮುಖ್ಯ ಮೈದಾನದ ಸಾಮೂಹಿಕ ಯೋಗಕ್ಕೆ ಬಾರದೇ ಇದ್ದರೂ, ತಮ್ಮ ಬ್ಯಾರಕ್‌ನ ಕಾರಿಡಾರ್‌ನಲ್ಲಿಯೇ ಸಹ-ಆರೋಪಿಗಳೊಂದಿಗೆ ಯೋಗಾಭ್ಯಾಸ ನಡೆಸಿದರು. ಸುಮಾರು ಒಂದು ಗಂಟೆಗಳ ಕಾಲ ನಡೆದ ಈ ಸೆಷನ್‌ನಲ್ಲಿ ದರ್ಶನ್ ಅವರು ಪ್ರಾಣಾಯಾಮ, ದೀರ್ಘದಂಡ ನಮಸ್ಕಾರ ಹಾಗೂ ಶವಾಸನ ಭಂಗಿಗಳನ್ನು ಮಾಡಿದರು. ಯೋಗ ಮುಗಿದ ಬಳಿಕ ದರ್ಶನ್ ಮತ್ತು ಅವರ ಗ್ಯಾಂಗ್ ಮರಳಿ ತಮ್ಮ ಬ್ಯಾರಕ್‌ಗಳಿಗೆ ತೆರಳಿದರು.

ಇದೇ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಪವಿತ್ರಾ ಗೌಡ ಅವರು ಮಹಿಳಾ ಕೈದಿಗಳ ವಿಭಾಗದಲ್ಲಿ ನಡೆದ ಸಾಮೂಹಿಕ ಯೋಗಾಭ್ಯಾಸದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಜೈಲಿನ ಇತರ ಮಹಿಳಾ ಕೈದಿಗಳ ಜೊತೆ ಸಾಲಿನಲ್ಲಿ ಕುಳಿತು ಪವಿತ್ರಾ ಗೌಡ ಅವರು ಯೋಗ ಮತ್ತು ಧ್ಯಾನ ಮಾಡಿದರು. ಪರಪ್ಪನ ಅಗ್ರಹಾರ ಜೈಲಿನ ಇತಿಹಾಸದಲ್ಲೇ ಹೈಪ್ರೊಫೈಲ್ ಕೈದಿಗಳು ಯೋಗ ದಿನಾಚರಣೆಯಲ್ಲಿ ಭಾಗಿಯಾಗಿದ್ದು ಇದೇ ಮೊದಲು ಎನ್ನಲಾಗಿದೆ. ಇದನ್ನೂಓದಿ : ನಾಗಸಂದ್ರ ಮೆಟ್ರೋ ಸ್ಟೇಷನ್‌ನಲ್ಲಿ ಅಗ್ನಿ ಅವಘಡ; ಪ್ರಯಾಣಿಕರು ಸುರಕ್ಷಿತ..!

Related posts

ಮನೆಯಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ – ಒಂದೂವರೆ ವರ್ಷದ ಹಿಂದೆ ಮೃತಪಟ್ಟಿರುವ ಶಂಕೆ..!

kknewskannada1987@gmail.com

ದೇವೇಗೌಡ, ಹೆಚ್​​ಡಿಕೆ ಬಗ್ಗೆ ನಾಲಿಗೆ ಹರಿಬಿಟ್ರೆ ಕತ್ತರಿಸುತ್ತೇವೆ – ಸುರೇಶ್ ಗೌಡ

Kalpana Editor

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ; ಎಂಟು ಮಸೂದೆಗಳ ಮಂಡನೆ ಸಾಧ್ಯತೆ..!

Kalpana Editor