August 26, 2026
kranthikidi.com
ತಾಜಾಸುದ್ದಿರಾಜ್ಯ

ಮತ್ತೆ ಎಂಇಎಸ್ ಪುಂಡಾಟ; ಸರ್ಕಾರದ ಕನ್ನಡ ಕಡ್ಡಾಯ ಆದೇಶದ ಪ್ರತಿ ಹರಿದು ಉದ್ಧಟತನ..!

ಬೆಳಗಾವಿ : ಗಡಿ ಕನ್ನಡಿಗರ ನೆಲದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ಮತ್ತೊಮ್ಮೆ ತಮ್ಮ ನಾಡದ್ರೋಹಿ ಬುದ್ಧಿ ಪ್ರದರ್ಶಿಸಿದ್ದಾರೆ. ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರದ ‘ಕನ್ನಡ ಕಡ್ಡಾಯ’ ಆದೇಶವನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೇ ಜಮಾಯಿಸಿದ ಎಂಇಎಸ್ ಕಾರ್ಯಕರ್ತರು, ಪೊಲೀಸರ ಸಮ್ಮುಖದಲ್ಲೇ ಸರ್ಕಾರದ ಅಧಿಕೃತ ಆದೇಶದ ಪ್ರತಿಯನ್ನು ಹರಿದು ಹಾಕಿ ತೀವ್ರ ಉದ್ಧಟತನ ಮೆರೆದಿದ್ದಾರೆ.

ಬಿಗಿ ಪೊಲೀಸ್ ಭದ್ರತೆಯ ನಡುವೆಯೂ ಕ್ಯಾತೆ ತೆಗೆದ ಎಂಇಎಸ್ ಪುಂಡರು, “ಕರ್ನಾಟಕ ಸರ್ಕಾರದ ದಾದಾಗಿರಿ ನಡೆಯುವುದಿಲ್ಲ” ಎಂದು ಕೂಗಾಡಿದ್ದಾರೆ. ಅಷ್ಟಕ್ಕೇ ನಿಲ್ಲದೆ, “ಬೆಳಗಾವಿ, ಖಾನಾಪುರ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕು” ಎಂದು ಡಿಸಿ ಕಚೇರಿ ಆವರಣದಲ್ಲೇ ನಾಡದ್ರೋಹಿ ಘೋಷಣೆಗಳನ್ನು ಕೂಗಿ ಆಟಾಟೋಪ ಮೆರೆದಿದ್ದು, ಅಲ್ಲದೆ ಗಡಿ ಭಾಗದಲ್ಲಿ ಮರಾಠಿ ಭಾಷೆಯಲ್ಲೇ ನಾಮಫಲಕಗಳನ್ನು ಹಾಕಬೇಕು ಹಾಗೂ ಪ್ರತಿಯೊಂದು ಸರ್ಕಾರಿ ದಾಖಲೆಗಳನ್ನು ಮರಾಠಿಯಲ್ಲೇ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಎಂಇಎಸ್ ಕಾರ್ಯಕರ್ತರ ಈ ವರ್ತನೆಗೆ ಕನ್ನಡಿಗರು ಕೆಂಡಾಮಂಡಲವಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ ತಕ್ಷಣವೇ ಬೀದಿಗಿಳಿದು ಆಕ್ರೋಶ ಹೊರಹಾಕಿದೆ. ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಬೆಳಗಾವಿಯ ವೀರಭದ್ರೇಶ್ವರ ಕ್ರಾಸ್‌ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಜಿಲ್ಲಾಧಿಕಾರಿಗಳ ಕಣ್ಣೆದುರೇ ಸರ್ಕಾರದ ಆದೇಶದ ಪ್ರತಿ ಹರಿದು ಹಾಕಿದ ಹಾಗೂ ನಾಡವಿರೋಧಿ ಘೋಷಣೆ ಕೂಗಿದ ಪ್ರತಿಯೊಬ್ಬ ಆರೋಪಿಯ ವಿರುದ್ಧ ತಕ್ಷಣವೇ ದೇಶದ್ರೋಹದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.ಗಡಿಯಲ್ಲಿ ಶಾಂತಿ ಕದಡುತ್ತಿರುವ ನಾಡದ್ರೋಹಿ ಎಂಇಎಸ್ ಸಂಘಟನೆಯನ್ನು ಕರ್ನಾಟಕದಲ್ಲಿ ತಕ್ಷಣವೇ ಕಾನೂನಾತ್ಮಕವಾಗಿ ನಿಷೇಧಿಸಬೇಕು ಎಂದು ಕರವೇ ಆಗ್ರಹಿಸಿದೆ. ಕನ್ನಡಿಗರನ್ನು ಕೆಣಕುತ್ತಾ, ಭಾಷಾ ಗಲಭೆಗೆ ಪ್ರಚೋದನೆ ನೀಡುತ್ತಿರುವ ಎಂಇಎಸ್‌ನ ಮುಖ್ಯ ನಾಯಕರನ್ನು ತಕ್ಷಣವೇ ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದೆ. ಇದನ್ನೂ ಓದಿ : ಬೆನ್ನು ನೋವು ಎಂದಿದ್ದ ನಟ ದರ್ಶನ್‌ಗೆ ಅಲೋಕ್ ಕುಮಾರ್ ಸಲಹೆ – ಜೈಲಿನಲ್ಲಿ ಪ್ರಾಣಾಯಾಮ, ಶವಾಸನ..!

Related posts

‘ಟಾಕ್ಸಿಕ್’ ಚಿತ್ರಕ್ಕೆ ಯಶ್ ಕೂಡ ಡಿಸ್ಟ್ರಿಬ್ಯೂಟರ್; ಹೊಸ ಜವಾಬ್ದಾರಿ..!

kknewskannada1987@gmail.com

ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್​​ ಈಶ್ವರ್​​ ಕಣ್ಣೀರು..!

Kalpana Editor

ಕಲ್ಲು ಕ್ವಾರಿ ದುರಂತ; ನಿಯಮ ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ – ಸಿಎಂ ಡಿ ಕೆ ಶಿವಕುಮಾರ್

Kalpana Editor