22.1 C
ಬೆಂಗಳೂರು
October 7, 2026
kranthikidi.com
ತಾಜಾಸುದ್ದಿರಾಜ್ಯ

ಅಂಕೇಗೌಡರ ಸಂಗ್ರಹದ ಪುಸ್ತಕಗಳಿಗೆ ಸೂಕ್ತ ಜಾಗ, ಕಟ್ಟಡ ವ್ಯವಸ್ಥೆಗೆ ಸೂಚನೆ – ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಪದ್ಮಶ್ರೀ ಪುರಸ್ಕೃತ, ಪುಸ್ತಕ ಪ್ರೇಮಿ ಎಂದು ಹೆಸರಾಗಿರುವ ಎಂ ಅಂಕೇಗೌಡ ಅವರ ಸಂಗ್ರಹದಲ್ಲಿರುವ 20 ಲಕ್ಷಕ್ಕೂ ಹೆಚ್ಚಿನ ಪುಸ್ತಕಗಳಿಗೆ ಸೂಕ್ತ ಜಾಗ ಹುಡುಕಿ, ಸುಸಜ್ಜಿತ ಕಟ್ಟಡ ವ್ಯವಸ್ಥೆ ಮಾಡಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಾದ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದರು. ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಸೋಮವಾರ ಭೇಟಿ ಮಾಡಿದ ಅಂಕೇಗೌಡ ಅವರು ಪುಸ್ತಕಗಳಿಗೆ ಸೂಕ್ತ ವ್ಯವಸ್ಥೆಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀಯುತರನ್ನು ಸಿಎಂ ಸನ್ಮಾನಿಸಿದರು.

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ʼಅಂಕೇಗೌಡ ಜ್ಞಾನ ಪ್ರತಿಷ್ಠಾನ’ದ ಮೂಲಕ ಬರೋಬ್ಬರಿ 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ ಅಂಕೇಗೌಡರು “ದೇಶದ ಅತಿದೊಡ್ಡ ಪರ್ಸನಲ್ ಲೈಬ್ರರಿ ಇದಾಗಿದ್ದು, ನೀವು ಸೂಕ್ತ ಕಟ್ಟಡ ವ್ಯವಸ್ಥೆ ಮಾಡಿದರೆ ಮಕ್ಕಳಿಗೆ ಅರಿವಿನ ತಾಣವಾಗಿ ಮಾರ್ಪಾಡಗಲಿದೆ. ಸಂಗ್ರಹದಲ್ಲಿರುವ ಅಪರೂಪದ ಪುಸ್ತಕಗಳು ಅತ್ಯುತ್ತಮ ದಾಖಲೆಗಳು” ಎಂದು ಹೇಳಿದರು.

ಇದೇ ವೇಳೆ ತಮ್ಮ ಬಳಿ ಇರುವ ಅಪರೂಪದ ನಾಣ್ಯಗಳು, ಅಂಚೆ ಚೀಟಿಗಳನ್ನು ಮುಖ್ಯಮಂತ್ರಿಯವರಿಗೆ ತೋರಿಸಿ ಅದರ ಬಗ್ಗೆ ವಿವರಣೆ ನೀಡಿದರು. ಅಪರೂಪದ ವಸ್ತುಗಳನ್ನು ಸಿಎಂ ಡಿ.ಕೆ.ಶಿವಕುಮಾರ್ ಅವರು ಕುತೂಹಲದಿಂದ ವೀಕ್ಷಿಸಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಇದ್ದರು. ಇದನ್ನೂ ಓದಿ : ಸಮಾವೇಶದಿಂದ ನೀಟ್‌ ಪರೀಕ್ಷೆಯ ವಿದ್ಯಾರ್ಥಿಗಳಿಗೆ ತೊಂದರೆ; ಬಿಜೆಪಿ ವಿರುದ್ಧ ಬಿಕೆಹೆಚ್‌ ವಾಗ್ದಾಳಿ..!

Related posts

ಆರ್‌ಎಸ್‌ಎಸ್‌ ವಿರುದ್ಧ ಬಿ.ಕೆ ಹರಿಪ್ರಸಾದ್ ಕಿಡಿ; ನಾವು ಯಾವತ್ತು ಒಪ್ಪಿಕೊಳ್ಳುವುದಿಲ್ಲ..!

Kalpana Editor

ಬಾಲಿವುಡ್‌ ಮಂದಿಯ ಮುಖವಾಡ ಬಿಚ್ಚಿಟ್ಟ ಖ್ಯಾತ ನಟಿ ರಕುಲ್ ಪ್ರೀತ್ ಸಿಂಗ್

Kalpana Editor

ಕಾಲುವೆ ನೀರು ನುಗ್ಗಿ ಬೆಳೆಗಳು ಹಾನಿ – ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ..!

Kalpana Editor