21.4 C
ಬೆಂಗಳೂರು
October 12, 2026
kranthikidi.com
ತಾಜಾಸುದ್ದಿದೇಶರಾಜ್ಯಸಿನಿಮಾ

ಮತ್ತೆ ಸುಪ್ರೀಂ ಮೆಟ್ಟಿಲೇರಿದ ನಟ ದರ್ಶನ್ – ಜಾಮೀನು ಅರ್ಜಿ ಸಲ್ಲಿಸದಂತೆ ನೀಡಿದ್ದ, ಆದೇಶ ಮಾರ್ಪಾಡಿಗೆ ಮನವಿ..!

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತೊಮ್ಮೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಒಂದು ವರ್ಷದವರೆಗೂ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ನೀಡಿದ ಆದೇಶವನ್ನು ಮಾರ್ಪಾಡುವಂತೆ ಮನವಿ ಮಾಡಿದ್ದಾರೆ. ಬದಲಾದ ವಕೀಲರ ಮೂಲಕ ಅರ್ಜಿ ಸಲ್ಲಿಸಿರುವ ಅವರು, ವೈಯಕ್ತಿಕ ಸ್ವಾತಂತ್ರ‍್ಯ ಮತ್ತು ತ್ವರಿತ ವಿಚಾರಣೆಯ ಹಕ್ಕು ಸಂವಿಧಾನದ ಆರ್ಟಿಕಲ್ 21 ಅಡಿಯಲ್ಲಿ ರಕ್ಷಿತವಾಗಿದೆ.

ಹೀಗಾಗೀ ತುರ್ತು ಪರಿಸ್ಥಿತಿಗಳಿಗೆ ಅನ್ವಯವಾಗುವಂತೆ ಆದೇಶ ಬದಲಿಸಬೇಕು. ಒಂದು ವರ್ಷದೊಳಗೆ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ಇಲ್ಲ ಎಂದು ನ್ಯಾಯಲಯ ಹೇಳಿದೆ. ಆದರೆ ಈ ಆದೇಶದಿಂದ ಟ್ರಯಲ್ ಇನ್ನಷ್ಟು ವಿಳಂಬವಾಗಬಹುದು. ಜೊತೆಗೆ ವೈದ್ಯಕೀಯ ತುರ್ತು ಪರಿಸ್ಥಿತಿ ಮತ್ತು ಮಾನವೀಯ ನೆಲೆಗಳಲ್ಲಿ ಜಾಮೀನು ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಕೇಳಿದ್ದಾರೆ.

ವೈಯಕ್ತಿಕ ಸ್ವಾತಂತ್ರ‍್ಯ ಮತ್ತು ತ್ವರಿತ ವಿಚಾರಣೆಯ ಹಕ್ಕು ಸಂವಿಧಾನದ ಆರ್ಟಿಕಲ್ 21 ಅಡಿಯಲ್ಲಿ ರಕ್ಷಿತವಾಗಿದೆ. ದೀರ್ಘಾವಧಿಯ ಬಂಧನವನ್ನು ಕಾಲಕಾಲಕ್ಕೆ ನ್ಯಾಯಾಲಯ ಪರಿಶೀಲಿಸಬೇಕು. ದೀರ್ಘ ಬಂಧನದಿಂದ ತಮ್ಮ ವೃತ್ತಿಜೀವನ, ಜೀವನೋಪಾಯ ಮತ್ತು ಕುಟುಂಬಕ್ಕೆ ತೀವ್ರ ಹಾನಿಯಾಗಿದೆ. ತಾಯಿ ಗಂಭೀರ ಆರೋಗ್ಯ ಸಮಸ್ಯೆ ಹೊಂದಿದ್ದಾರೆ. ಒಂದು ವರ್ಷ ಜಾಮೀನು ನೀಡದಿರುವ ಆದೇಶ ವ್ಯಾಪಕ ಪರಿಣಾಮ ಬೀರಬಹುದು ಎಂದಿದ್ದಾರೆ.

ಒಂದು ವರ್ಷದ ತನಕ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ನೀಡಿರುವ ಆದೇಶ ಮಾರ್ಪಾಡು ಮಾಡಬೇಕು ಎಂದು ದರ್ಶನ್ ಮನವಿ ಮಾಡಿದ್ದಾರೆ. ಈ ಮೂಲಕ ದರ್ಶನ್ ಸದ್ಯ ಜಾಮೀನು ಕೋರದಿದ್ದರೂ, ಭವಿಷ್ಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಮಾರ್ಗ ಕಂಡುಕೊಳ್ಳಲು ದರ್ಶನ್ ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ : ಮುಂಬೈನಲ್ಲಿ ಭಾರೀ ಮಳೆಯ ಅಬ್ಬರ; ಜನಜೀವನ ಅಸ್ತವ್ಯಸ್ತ..!

Related posts

ಮೆಲ್ಬೋರ್ನ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್​ನಲ್ಲಿ 2 ಅವಾರ್ಡ್ ಗೆದ್ದ ರಿಷಬ್

kknewskannada1987@gmail.com

ಸತತ ಎರಡನೇ ಬಾರಿಗೆ ಚಾಂಪಿಯನ್‌ ಪಟ್ಟಕ್ಕೇರಿದ ಆರ್​ಸಿಬಿ

Kalpana Editor

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು – ಸಿಎಂ ಡಿಕೆ ಶಿವಕುಮಾರ್

Kalpana Editor