28.2 C
ಬೆಂಗಳೂರು
July 11, 2026
kranthikidi.com
ತಾಜಾಸುದ್ದಿರಾಜ್ಯ

ಕಲೇಶಪುರ ಹಾಲಿ ಶಾಸಕ ಹಾಗೂ ಮಾಜಿ ಮಾಜಿ ಶಾಸಕ ನಡುವಿನ ವಾಕ್ಸಮರ..!

ಹಾಸನ : ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಹಾಗೂ ಮಾಜಿ ಶಾಸಕ, ಬಿಜೆಪಿ ಮುಖಂಡ ಹೆಚ್.ಎಂ. ವಿಶ್ವನಾಥ್ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಕಾಮಗಾರಿಗಳಲ್ಲಿ ಕಮಿಷನ್ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನದ ಆರೋಪಗಳನ್ನು ವಿಶ್ವನಾಥ್ ಮಾಡಿದ್ದರೆ, ಇದಕ್ಕೆ ಶಾಸಕ ಸಿಮೆಂಟ್ ಮಂಜು ತಿರುಗೇಟು ನೀಡಿದ್ದಾರೆ.

ನಾನು ಪಕ್ಷದ ಸೂಚನೆಯಂತೆ ರಘು ಕೌಟಿಲ್ಯ ಅವರಿಗೆ ಮತ ಹಾಕಿದ್ದು, ಯಾರು ಯಾರಿಗೆ ಮತ ಹಾಕಿದ್ದಾರೆ ಎಂಬ ಮಾಹಿತಿ ಪಕ್ಷದ ನಾಯಕರಿಗೆ ಗೊತ್ತಿದೆ. ಸಾಕ್ಷ್ಯಾಧಾರಗಳಿಲ್ಲದೆ ಗಂಭೀರ ಆರೋಪ ಮಾಡುವುದು ಸರಿಯಲ್ಲ ಎಂದು ಮಂಜು ಹೇಳಿದ್ದಾರೆ.

ಕಾಮಗಾರಿಗಳಲ್ಲಿ ಕಮಿಷನ್ ಪಡೆದಿದ್ದಾರೆ ಎಂಬ ಆರೋಪವನ್ನೂ ತಳ್ಳಿಹಾಕಿದ ಅವರು, ಯಾವುದೇ ದಾಖಲೆಗಳಿಲ್ಲದೆ ಆರೋಪ ಮಾಡಬಾರದು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸತ್ಯಾಸತ್ಯತೆ ಪರಿಶೀಲಿಸಿ ಮಾತನಾಡಬೇಕು ಎಂದು ವಿಶ್ವನಾಥ್ ಅವರಿಗೆ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ : ಆರ್‌ಎಸ್‌ಎಸ್‌ ವಿರುದ್ಧ ಬಿ.ಕೆ ಹರಿಪ್ರಸಾದ್ ಕಿಡಿ; ನಾವು ಯಾವತ್ತು ಒಪ್ಪಿಕೊಳ್ಳುವುದಿಲ್ಲ..!

Related posts

ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ನಾನು ದೆಹಲಿಗೆ ಹೋಗಲ್ಲ – ಯು.ಟಿ ಖಾದರ್

Kalpana Editor

ನಿಕೇತ್‌ ಮೌರ್ಯ, ಭಾವನಾ ರಾಮಣ್ಣ ಸೇರಿದಂತೆ, ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್‌ ನೀಡಿದ ಡಿಕೆಶಿ

Kalpana Editor

ಜೂನ್ 13 ರಿಂದ ಪ್ರಧಾನಿ ನರೇಂದ್ರ ಮೋದಿ ಯುರೋಪ್ ಪ್ರವಾಸ..!

Kalpana Editor