July 12, 2026
kranthikidi.com
ತಾಜಾಸುದ್ದಿದೇಶ

ರಾಮ ಮಂದಿರ ದೇಣಿಗೆ ದುರ್ಬಳಕೆ ಆರೋಪ; ಸಿಬಿಐ ತನಿಖೆಗೆ ನಿರ್ದೇಶನ ಕೋರಿ ಸುಪ್ರೀಂಗೆ ಅರ್ಜಿ

ಲಕ್ನೋ : ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ದೇಣಿಗೆ ದುರ್ಬಳಕೆ ಹಾಗೂ ಹಣಕಾಸಿನ ಅಕ್ರಮಗಳು ನಡೆದಿವೆ ಎಂಬ ಆರೋಪದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಈ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.

ವಕೀಲರಾದ ಅಜಯ್ ಕುಮಾರ್ ರೈ ಮತ್ತು ದಿನೇಶ್ ಕುಮಾರ್ ಯಾದವ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆ ಪ್ರಸ್ತಾಪಿಸಲಾಯಿತು. ಆರಂಭಿಕ ವಿಚಾರಣೆ ಬಳಿಕ ನ್ಯಾಯಾಲಯ ಈ ಅರ್ಜಿಯನ್ನು ಜೂ.29 ರಂದು ವಿಚಾರಣೆಗೆ ತರುವಂತೆ ಅರ್ಜಿದಾರರಿಗೆ ತಿಳಿಸಿದೆ.

ರಾಮ ಮಂದಿರದ ದೇಣಿಗೆ ಹಣದ ದುರುಪಯೋಗದ ಬಗ್ಗೆ ಎಫ್‌ಐಆರ್ ದಾಖಲಾಗಬೇಕು ಮತ್ತು ಸಿಬಿಐನ ವಿಶೇಷ ತಂಡ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಇದು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಾಗಿದ್ದು ಹಾಗೂ ಇದು ನೇರವಾಗಿ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ಗೆ ಸಂಬಂಧಿಸಿದೆ. ಈಗಾಗಲೇ ಅರ್ಜಿಯನ್ನು ಕೋರ್ಟ್‌ನಲ್ಲಿ ಪಟ್ಟಿ ಮಾಡಲಾಗಿದ್ದು, ವಿಚಾರಣೆಗೆ ದಿನಾಂಕ ನಿಗದಿಯಾಗಿಲ್ಲ ಎಂದು ವಕೀಲರು ವಾದಿಸಿದ್ದಾರೆ.

ವಕೀಲರ ವಾದವನ್ನು ಆಲಿಸಿದ ನ್ಯಾಯಾಲಯ, ಅರ್ಜಿಯಲ್ಲಿ ಯಾವುದೇ ತಪ್ಪುಗಳು ಅಥವಾ ಲೋಪದೋಷಗಳು ಇಲ್ಲದಿದ್ದರೆ, ಕೋರ್ಟ್‌ನ ಕಚೇರಿ ಅದನ್ನು ಮುಂದಿನ ವಿಚಾರಣೆಯ ಪಟ್ಟಿಗೆ ಸೇರಿಸುತ್ತದೆ ಎಂದು ಹೇಳಿದೆ. ಅದಕ್ಕೆ ಅರ್ಜಿದಾರರು, ನಮ್ಮ ಅರ್ಜಿ ಈಗಾಗಲೇ ನೋಂದಣಿಯಾಗಿದೆ ಮತ್ತು ಅದರಲ್ಲಿ ಯಾವುದೇ ತಪ್ಪುಗಳಿಲ್ಲ. ಹೀಗಾಗಿ ವಿಚಾರಣೆಯ ದಿನಾಂಕವನ್ನು ಜೂ.29ಕ್ಕೆ ನಿಗದಿಪಡಿಸುವಂತೆ ಕೋರ್ಟ್‌ಗೆ ಕೇಳಿಕೊಂಡಿದ್ದಾರೆ. ಅದಕ್ಕೆ ಸೋಮವಾರ ಕೋರ್ಟ್ ಗಮನಕ್ಕೆ ತರುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ. ಇದನ್ನೂ ಓದಿ : ಗಾಯಕಿ ಅಲ್ಕಾ ಯಾಗ್ನಿಕ್ ಅಪರೂಪದ ಕಾಯಿಲೆ; ಆ ಸಮಸ್ಯೆ ಬಗ್ಗೆ ವಿವರ..!

Related posts

ಬಿರುಗಾಳಿ ಸಹಿತ ಭಾರೀ ಮಳೆ; ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ..!

Kalpana Editor

ಪ್ರಧಾನಮಂತ್ರಿಗಳಾಗಿ 4399 ದಿನ ನಿರಂತರ ಸೇವೆ; ಬಿ.ವೈ. ವಿಜಯೇಂದ್ರ ಮೆಚ್ಚುಗೆ..!

Kalpana Editor

ರಾಜ್ಯಪಾಲರ ಅನುಪಸ್ಥಿತಿಯಲ್ಲೂ ಸಿದ್ದರಾಮಯ್ಯ ರಾಜೀನಾಮೆ ನೀಡಬಹುದೇ..? ಈ ಒಂದು ಆಯ್ಕೆ..!

Kalpana Editor